1. ರೋಹಿತ್ ಶರ್ಮಾ
ಹಿಟ್ ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ, ಟೀಂ ಇಂಡಿಯಾ ನಾಯಕನಾಗಿ ತಂಡವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದು, ಮೊದಲ ಪಂದ್ಯದಲ್ಲಿ ಕೇವಲ 19 ಎಸೆತಗಳನ್ನು 40 ರನ್ ಬಾರಿಸಿದ್ದರು, ಇಂದಿನ ಪಂದ್ಯದಲ್ಲಿ ದೊಡ್ಡ ಮೊತ್ತ ಗಳಿಸುವ ನಿರೀಕ್ಷೆಯಿದೆ.
2. ಇಶಾನ್ ಕಿಶನ್
ಟೀಂ ಇಂಡಿಯಾ ಮತ್ತೋರ್ವ ಆರಂಭಿಕ ಬ್ಯಾಟರ್ ಇಶಾನ್ ಕಿಶನ್, ಮೊದಲ ಏಕದಿನ ಪಂದ್ಯದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ನಡೆಸಿದ್ದರು, ಎರಡನೇ ಟಿ20 ಪಂದ್ಯದಲ್ಲಿ ಕಿಶನ್‌ಗೆ ಮತ್ತೊಂದು ಅವಕಾಶ ಸಿಗುವ ಸಾಧ್ಯತೆಯಿದೆ.
3. ವಿರಾಟ್ ಕೊಹ್ಲಿ
ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತೊಮ್ಮೆ ದೊಡ್ಡ ಮೊತ್ತ ಗಳಿಸಲು ಮೊದಲ ಪಂದ್ಯದಲ್ಲಿ ವಿಫಲವಾಗಿದ್ದರು. ಎರಡನೇ ಪಂದ್ಯದಲ್ಲಾದರೂ ವಿರಾಟ್ ಕೊಹ್ಲಿ ದೊಡ್ಡ ಮೊತ್ತ ಗಳಿಸುತ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ.
4. ರಿಷಭ್ ಪಂತ್
ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್, ಮೊದಲ ಟಿ20 ಪಂದ್ಯದಲ್ಲಿ ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸುವ ಮೂಲಕ ನಿರಾಸೆ ಅನುಭವಿಸಿದ್ದರು. ಪಂತ್ 8 ಎಸೆತಗಳಲ್ಲಿ 8 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಮಧ್ಯಮ ಕ್ರಮಾಂಕದಲ್ಲಿ ಪಂತ್ ಅಬ್ಬರಿಸಲು ಕಾಯುತ್ತಿದ್ದಾರೆ.
5. ಸೂರ್ಯಕುಮಾರ್ ಯಾದವ್
ಟೀಂ ಇಂಡಿಯಾ ಪ್ರತಿಭಾನ್ವಿತ ಬ್ಯಾಟರ್ ಸೂರ್ಯಕುಮಾರ್ ಯಾದವ್ 18 ಎಸೆತಗಳಲ್ಲಿ 5 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ ಅಜೇಯ 34 ರನ್ ಬಾರಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದ್ದರು. ಈ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು.
6. ವೆಂಕಟೇಶ್ ಅಯ್ಯರ್
ಟೀಂ ಇಂಡಿಯಾ ಯುವ ಆಲ್ರೌಂಡರ್ ವೆಂಕಟೇಶ್ ಅಯ್ಯರ್ ಕೂಡಾ ಕಳೆದ ಟಿ20 ಪಂದ್ಯದಲ್ಲಿ ಸೂರ್ಯ ಜತೆ ಉತ್ತಮ ಮ್ಯಾಚ್ ಫಿನಿಶರ್ ಆಗಿ ಗಮನ ಸೆಳೆದಿದ್ದರು. ಮತ್ತೊಮ್ಮೆ ಅಯ್ಯರ್, ಮ್ಯಾಚ್ ಫಿನಿಶರ್ ಆಗಿ ಮಿಂಚಲು ಎದುರು ನೋಡುತ್ತಿದ್ದಾರೆ.
7. ಶಾರ್ದೂಲ್ ಠಾಕೂರ್
ಭಾರತ ತಂಡದ ಮಧ್ಯಮ ವೇಗದ ಬೌಲರ್ ಶಾರ್ದೂಲ್ ಠಾಕೂರ್, ಮೊದಲ ಟಿ20 ಪಂದ್ಯದಲ್ಲಿ ತಂಡದಿಂದ ಹೊರಗುಳಿದಿದ್ದರು. ಇದೀಗ ದೀಪಕ್ ಚಹರ್ ಗಾಯದ ಸಮಸ್ಯೆಯಿಂದ ಎರಡನೇ ಪಂದ್ಯದಿಂದ ಹೊರಗುಳಿಯಲಿದ್ದು, ಶಾರ್ದೂಲ್ ಠಾಕೂರ್ ತಂಡವನ್ನು ಕೂಡಿಕೊಳ್ಳುವ ಸಾಧ್ಯತೆಯಿದೆ.
(photo source- instagram)
8. ಭುವನೇಶ್ವರ್ ಕುಮಾರ್:
ಅನುಭವಿ ವೇಗದ ಬೌಲರ್ ಭುವನೇಶ್ವರ್ ಕುಮಾರ್ ಮೊದಲ ಪಂದ್ಯದಲ್ಲಿ ಶಿಸ್ತುಬದ್ಧ ದಾಳಿ ನಡೆಸುವ ಮೂಲಕ ಗಮನ ಸೆಳೆದಿದ್ದರು. ಮೊದಲ ಪಂದ್ಯದಲ್ಲಿ ಭುವಿ 31 ರನ್ ನೀಡಿ 1 ವಿಕೆಟ್ ಕಬಳಿಸಿದ್ದರು.
9. ಹರ್ಷಲ್ ಪಟೇಲ್:
ಟೀಂ ಇಂಡಿಯಾ ಡೆತ್ ಓವರ್ ಸ್ಪೆಷಲಿಸ್ಟ್ ಹರ್ಷಲ್ ಪಟೇಲ್ ಕೊಂಚ ದುಬಾರಿ ಎನಿಸಿದ್ದರೂ 2 ಪ್ರಮುಖ ವಿಕೆಟ್ ಕಬಳಿಸಿ ಮಿಂಚಿದ್ದರು. ಹೀಗಾಗಿ ಅನುಭವಿ ವೇಗಿಗಳಾದ ಶಮಿ, ಬುಮ್ರಾ ಅನುಪಸ್ಥಿತಿಯಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಎದುರು ನೋಡುತ್ತಿದ್ದಾರೆ.
10. ಯುಜುವೇಂದ್ರ ಚಹಲ್
ಭಾರತ ತಂಡದ ಅನುಭವಿ ಲೆಗ್ ಸ್ಪಿನ್ನರ್ ಯುಜುವೇಂದ್ರ ಚಹಲ್ ಕೂಡಾ ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಮಾಡಿದ್ದು, ಮತ್ತೊಮ್ಮೆ ಎದುರಾಳಿ ಬ್ಯಾಟರ್‌ಗಳನ್ನು ಕಟ್ಟಿಹಾಕಲು ಕಾಯುತ್ತಿದ್ದಾರೆ.
11. ರವಿ ಬಿಷ್ಣೋಯಿ
ಟೀಂ ಇಂಡಿಯಾ ಯುವ ಲೆಗ್ ಸ್ಪಿನ್ನರ್ ರವಿ ಬಿಷ್ಣೋಯಿ ಮೊದಲ ಟಿ20 ಪಂದ್ಯದಲ್ಲಿ ಕೇವಲ 17 ರನ್ ನೀಡಿ 2 ವಿಕೆಟ್ ಕಬಳಿಸುವ ಮೂಲಕ ವಿಂಡೀಸ್ ಬ್ಯಾಟರ್‌ಗಳನ್ನು ಕಾಡಿದ್ದರು. ಇದೀಗ ಮತ್ತೊಮ್ಮೆ ಮಿಂಚಲು ಎದುರು ನೋಡುತ್ತಿದ್ದಾರೆ.