18
ಅಂಡರ್-19 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ
ಮುಂದಿನ ವರ್ಷ ಜ.15ರಿಂದ ಫೆ.6ರ ವರೆಗೂ ಜಿಂಬಾಬ್ವೆ ಹಾಗೂ ನಮೀಬಿಯಾದಲ್ಲಿ ನಡೆಯಲಿರುವ ಅಂಡರ್-19 ಏಕದಿನ ವಿಶ್ವಕಪ್‌ಗೆ ಶನಿವಾರ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಿತು.
Subscribe to get breaking news alertsSubscribe 28
ಆಯುಷ್ ಮ್ಹಾತ್ರೆ ಭಾರತ ಅಂಡರ್-19 ತಂಡದ ಕ್ಯಾಪ್ಟನ್
ಆಯುಷ್ ಮ್ಹಾತ್ರೆ ಭಾರತ ಅಂಡರ್-19 ತಂಡವನ್ನು ಮುನ್ನಡೆಸಲಿದ್ದಾರೆ. ಈ ಹಿಂದೆ ಅಂಡರ್-19 ಏಷ್ಯಾಕಪ್ ಟೂರ್ನಿಯಲ್ಲೂ ಆಯುಷ್ ಮ್ಹಾತ್ರೆಯೇ ಭಾರತ ತಂಡವನ್ನು ಮುನ್ನಡೆಸಿದ್ದರು.
38
ಕರ್ನಾಟಕದ ಆಟಗಾರರಿಗಿಲ್ಲ ಸ್ಥಾನ
ಈ ಬಾರಿಯ ಅಂಡರ್-19 ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡದಲ್ಲಿ ಕರ್ನಾಟಕದ ಆಟಗಾರರಿಲ್ಲ.
48
ದಕ್ಷಿಣ ಆಫ್ರಿಕಾ ಎದುರಿನ ಸರಣಿಗೆ ಆಯುಷ್-ವಿಹಾನ್‌ಗೆ ರೆಸ್ಟ್
ಇದಕ್ಕೂ ಮುನ್ನ ದ.ಆಫ್ರಿಕಾ ವಿರುದ್ಧ ಭಾರತ ತಂಡ 3 ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಈ ಸರಣಿಗೆ ಮ್ಹಾತ್ರೆ ಹಾಗೂ ಉಪನಾಯಕ ವಿಹಾನ್ ಮಲ್ಹೋತ್ರಾ ಗೈರಾಗಲಿದ್ದಾರೆ.
58
ದಕ್ಷಿಣ ಆಫ್ರಿಕಾ ಎದುರಿನ ಸರಣಿಗೆ ವೈಭವ್ ಸೂರ್ಯವಂಶಿ ನಾಯಕ
ಅವರಿಬ್ಬರ ಅನುಪಸ್ಥಿತಿಯಲ್ಲಿ ದಕ್ಷಿಣ ಆಫ್ರಿಕಾ ಎದುರಿನ ಟಿ20 ಸರಣಿಯಲ್ಲಿ ಭಾರತ ತಂಡವನ್ನು ವೈಭವ್ ಸೂರ್ಯವಂಶಿ ಮುನ್ನಡೆಸಲಿದ್ದಾರೆ.
68
ಜನವರಿ 15ಕ್ಕೆ ಮೊದಲ ಪಂದ್ಯವಾಡಲಿರುವ ಭಾರತ
ಭಾರತ ತಂಡವು ಜನವರಿ 15ರಂದು ಮೊದಲ ಪಂದ್ಯದಲ್ಲಿ ಯುಎಸ್‌ಎ ಎದುರು ಕಣಕ್ಕಿಳಿಯಲಿದೆ. ಇದಾದ ಬಳಿಕ ಗ್ರೂಪ್ ಹಂತದಲ್ಲಿ ಬಾಂಗ್ಲಾದೇಶ ಹಾಗೂ ನ್ಯೂಜಿಲೆಂಡ್ ತಂಡದ ಸವಾಲನ್ನು ಎದುರಿಸಲಿದೆ.
78
5 ಬಾರಿ ಚಾಂಪಿಯನ್ ಆಗಿರುವ ಭಾರತ ಯುವ ಪಡೆ
ಐಸಿಸಿ ಅಂಡರ್-19 ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡವು ಐದು ಬಾರಿ ಚಾಂಪಿಯನ್ ಆಗುವ ಮೂಲಕ ಈ ಟೂರ್ನಿಯ ಇತಿಹಾಸದಲ್ಲಿ ಅತಿಹೆಚ್ಚು ಯಶಸ್ವಿ ತಂಡವಾಗಿ ಭಾರತ ಗುರುತಿಸಿಕೊಂಡಿದೆ.
88
ವಿಶ್ವಕಪ್‌ಗೆ ಭಾರತ ತಂಡ:
ಆಯುಷ್ ಮ್ಹಾತ್ರೆ (ನಾಯಕ), ವಿಹಾನ್ ಮಲ್ಹೋತ್ರಾ (ಉಪನಾಯಕ), ವೈಭವ್ ಸೂರ್ಯವಂಶಿ, ಆ್ಯರೋನ್ ಜಾರ್ಜ್, ವೇದಾಂತ್ ತ್ರಿವೇದಿ, ಅಭಿಗ್ಯಾನ್ ಕುಂದು, ಹರ್ವನ್ಶ್ ಸಿಂಗ್, ಆರ್.ಎಸ್.ಅಂಬರೀಶ್, ಕನಿಶ್ಕ್ ಚೌಹಾಣ್, ಖಿಲಾನ್ ಪಟೇಲ್, ಮೊಹಮದ್ ಎನಾನ್, ಹೆನಿಲ್ ಪಟೇಲ್, ದೀಪೇಶ್, ಕಿಶನ್ ಸಿಂಗ್, ಉದ್ಧವ್ ಮೋಹನ್.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada ) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada ), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.