ಮ್ಯಾಂಚೆಸ್ಟರ್: ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೂರನೇ ಹಾಗೂ ನಿರ್ಣಾಯಕ ಏಕದಿನ ಪಂದ್ಯಕ್ಕೆ ಇಂದು ಇಲ್ಲಿನ ಟ್ರೆಂಟ್‌ಬ್ರಿಡ್ಜ್ ಮೈದಾನ ಸಾಕ್ಷಿಯಾಗಲಿದೆ. ಈಗಾಗಲೇ ಸರಣಿಯಲ್ಲಿ ಉಭಯ ತಂಡಗಳು ತಲಾ ಒಂದೊಂದು ಪಂದ್ಯದಲ್ಲಿ ಗೆಲುವು ದಾಖಲಿಸಿದ್ದು, ಏಕದಿನ ಸರಣಿಯನ್ನು ಕೈವಶ ಮಾಡಿಕೊಳ್ಳಲು ಭಾರತ ಹಾಗೂ ಇಂಗ್ಲೆಂಡ್ ತಂಡಗಳಿಂದು ಜಿದ್ದಾಜಿದ್ದಿನ ಪೈಪೋಟಿ ನಡೆಸುವ ಸಾಧ್ಯತೆಯಿದೆ. ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 100 ರನ್‌ಗಳ ಅಂತರದ ಹೀನಾಯ ಸೋಲು ಅನುಭವಿಸಿದೆ. ಹೀಗಾಗಿ ಮಹತ್ವದ ಪಂದ್ಯದಲ್ಲಿ ಭಾರತ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ. ಇಂಗ್ಲೆಂಡ್ ಎದುರಿನ ಮೂರನೇ ಪಂದ್ಯಕ್ಕೆ ಭಾರತದ ಸಂಭಾವ್ಯ ತಂಡ ಹೀಗಿದೆ ನೋಡಿದೆ,
ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಮೊದಲ ಏಕದಿನ ಪಂದ್ಯದಲ್ಲಿ ಅಬ್ಬರಿಸಿದ್ದರು. ಆದರೆ ಎರಡನೇ ಏಕದಿನ ಪಂದ್ಯದಲ್ಲಿ ಅಲ್ಪಮೊತ್ತಕ್ಕೆ ವಿಕೆಟ್ ಒಪ್ಪಿಸಿ ನಿರಾಸೆ ಅನುಭವಿಸಿದ್ದರು. ಇದೀಗ ಮಹತ್ವದ ಪಂದ್ಯದಲ್ಲಿ ದೊಡ್ಡ ಇನಿಂಗ್ಸ್ ಆರಂಭಿಸಲು ಎದುರು ನೋಡುತ್ತಿದ್ದಾರೆ.
211
Image Credit: Getty Images
2. ಶಿಖರ್ ಧವನ್
ಗಬ್ಬರ್ ಸಿಂಗ್ ಖ್ಯಾತಿಯ ಶಿಖರ್ ಧವನ್ ಕೂಡಾ ಮೊದಲ ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್ ನಡೆಸಿದ್ದರು. ಆದರೆ ಎರಡನೇ ಪಂದ್ಯದಲ್ಲಿ ಅಲ್ಪ ಮೊತ್ತಕ್ಕೆ ವಿಕೆಟ್ ಕೈಚೆಲ್ಲಿದ್ದರು. ಹೀಗಾಗಿ ನಿರ್ಣಾಯಕ ಪಂದ್ಯದಲ್ಲಿ ಧವನ್ ಸಿಡಿಯುವ ನಿರೀಕ್ಷೆಯಿದೆ.
311
Virat Kohli
3. ವಿರಾಟ್ ಕೊಹ್ಲಿ
ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಎರಡನೇ ಪಂದ್ಯದಲ್ಲಿ ಕೇವಲ 16 ರನ್‌ಗಳಿಸಿದ್ದರು. ಕಳೆದ ಎರಡೂವರೆ ವರ್ಷಗಳಿಂದ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮೂರಂಕಿ ಮೊತ್ತ ದಾಖಲಿಸಲು ವಿಫಲವಾಗುತ್ತಾ ಬಂದಿರುವ ಕೊಹ್ಲಿ ಮೇಲೆ ಈ ಬಾರಿ ಬೆಟ್ಟದಷ್ಟು ನಿರೀಕ್ಷೆಯಿದೆ
411
4. ಸೂರ್ಯಕುಮಾರ್ ಯಾದವ್
ಟೀಂ ಇಂಡಿಯಾ ಪ್ರತಿಭಾನ್ವಿಯ ಮಧ್ಯಮ ಕ್ರಮಾಂಕದ ಬ್ಯಾಟರ್ ಯಾವುದೇ ಕ್ಷಣದಲ್ಲಿ ಬೇಕಾದರೂ ಅಬ್ಬರಿಸುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಇಂಗ್ಲೆಂಡ್ ಎದುರಿನ ಮೂರನೇ ಟಿ20 ಪಂದ್ಯದಲ್ಲಿ ಶತಕ ಸಿಡಿಸಿ ಮಿಂಚಿದ್ದ ಸೂರ್ಯ, ಭಾರತ ಏಕದಿನ ಸರಣಿಯನ್ನು ಗೆಲ್ಲಬೇಕಿದ್ದರೇ ಜವಾಬ್ದಾರಿಯುತ ಪ್ರದರ್ಶನ ತೋರಬೇಕಿದೆ.
511
5. ರಿಷಭ್ ಪಂತ್
ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ವಿಕೆಟ್ ಹಿಂದೆ ನಿಂತು ಚುರುಕಿನ ವಿಕೆಟ್ ಕೀಪಿಂಗ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಪಂತ್ ಬ್ಯಾಟ್‌ನಿಂದ ದೊಡ್ಡ ಇನಿಂಗ್ಸ್ ಮೂಡಿ ಬರುತ್ತಿಲ್ಲ. ಹೀಗಾಗಿ ಇಂದಿನ ಪಂದ್ಯದಲ್ಲಿ ಪಂತ್ ಯಾವ ರೀತಿ ಪ್ರದರ್ಶನ ತೋರಬಹುದು ಎನ್ನುವ ಕುತೂಹಲ ಜೋರಾಗಿದೆ.
611
Image credit: Getty
6. ಹಾರ್ದಿಕ್ ಪಾಂಡ್ಯ
ಟೀಂ ಇಂಡಿಯಾ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ, ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಭರ್ಜರಿ ಫಾರ್ಮ್‌ನಲ್ಲಿದ್ದಾರೆ. ಐಪಿಎಲ್ ಮೂಲಕ ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಮಾಡಿದ್ದ ಪಾಂಡ್ಯ ಭಾರತ ಕ್ರಿಕೆಟ್ ತಂಡದ ಮಧ್ಯಮ ಕ್ರಮಾಂಕದ ಆಧಾರಸ್ತಂಭ ಎನಿಸಿಕೊಂಡಿದ್ದಾರೆ.
711
7. ರವೀಂದ್ರ ಜಡೇಜಾ
ಭಾರತ ಕ್ರಿಕೆಟ್ ತಂಡದ ಮತ್ತೋರ್ವ ಆಲ್ರೌಂಡರ್ ರವೀಂದ್ರ ಜಡೇಜಾ, ಬ್ಯಾಟಿಂಗ್‌ನಲ್ಲಿ ತಂಡಕ್ಕೆ ಆಸರೆಯಾಗುತ್ತಿದ್ದಾರೆ. ಆದರೆ ಬೌಲಿಂಗ್‌ನಲ್ಲಿ ಪರಿಣಾಮಕಾರಿ ಪ್ರದರ್ಶನ ತೋರಲು ವಿಫಲವಾಗುತ್ತಿದ್ದಾರೆ. ಬೌಲಿಂಗ್‌ನಲ್ಲೂ ಜಡ್ಡೂ ಕೊಂಚ ಆಸರೆಯಾದರೇ ಟೀಂ ಇಂಡಿಯಾ ಬೌಲಿಂಗ್ ವಿಭಾಗ ಮತ್ತಷ್ಟು ಬಲಿಷ್ಠವಾಗಲಿದೆ.
811
8. ಮೊಹಮ್ಮದ್ ಶಮಿ
ಟೀಂ ಇಂಡಿಯಾ ಅನುಭವಿ ವೇಗಿ ಶಮಿ, ಮೊದಲೆರಡು ಏಕದಿನ ಪಂದ್ಯಗಳಲ್ಲೂ ಕರಾರುವಕ್ಕಾದ ದಾಳಿ ನಡೆಸುವ ಮೂಲಕ ಟೀಂ ಇಂಡಿಯಾಗೆ ಆರಂಭಿಕ ಯಶಸ್ಸು ದಕ್ಕಿಸಿಕೊಡುತ್ತಿದ್ದಾರೆ. ಇದರ ಜತೆಗೆ ಎದುರಾಳಿ ತಂಡದ ರನ್ ವೇಗಕ್ಕೂ ಕಡಿವಾಣ ಹಾಕುತ್ತಿರುವುದು ಭಾರತ ತಂಡದ ಆತ್ಮವಿಶ್ವಾಸ ಹೆಚ್ಚುವಂತೆ ಮಾಡಿದೆ.
911
9. ಜಸ್ಪ್ರೀತ್ ಬುಮ್ರಾ
ಯಾರ್ಕರ್ ಸ್ಪೆಷಲಿಸ್ಟ್ ಜಸ್ಪ್ರೀತ್ ಬುಮ್ರಾ, ಇಂಗ್ಲೆಂಡ್ ಎದುರಿನ ಮೊದಲೆರಡು ಪಂದ್ಯಗಳಲ್ಲೂ ಮಾರಕ ದಾಳಿ ನಡೆಸುವ ಮೂಲಕ ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ತಬ್ಬಿಬ್ಬುಗೊಳಿಸಿದ್ದಾರೆ. ಬುಮ್ರಾ ಅದೇ ಲಯವನ್ನು ಮುಂದುವರೆಸಿಕೊಂಡು ಹೋಗಲು ಎದುರು ನೋಡುತ್ತಿದ್ದಾರೆ.
1011
10. ಮೊಹಮ್ಮದ್ ಸಿರಾಜ್
ಕನ್ನಡದ ವೇಗಿ ಪ್ರಸಿದ್ಧ್ ಕೃಷ್ಣ ಮೊದಲೆರಡು ಪಂದ್ಯಗಳಲ್ಲಿ ಕಣಕ್ಕಿಳಿದರಾದರೂ ಮಾರಕ ದಾಳಿ ನಡೆಸಲು ವಿಫಲವಾಗಿದ್ದರು. ಹೀಗಾಗಿ ಇಂದಿನ ಪಂದ್ಯದಲ್ಲಿ ಪ್ರಸಿದ್ಧ್ ಬದಲಿಗೆ ಮೊಹಮ್ಮದ್ ಸಿರಾಜ್ ಇಲ್ಲವೇ ಶಾರ್ದೂಲ್ ಠಾಕೂರ್ ಕಣಕ್ಕಿಳಿಯುವ ಸಾಧ್ಯತೆಯಿದೆ.
1111
Chahal
11. ಯುಜುವೇಂದ್ರ ಚಹಲ್
ಟೀಂ ಇಂಡಿಯಾ ಸ್ಟಾರ್ ಲೆಗ್ ಸ್ಪಿನ್ನರ್ ಯುಜುವೇಂದ್ರ ಚಹಲ್, ಇಂಗ್ಲೆಂಡ್ ಎದುರಿನ ಎರಡನೇ ಏಕದಿನ ಪಂದ್ಯದಲ್ಲಿ 4 ವಿಕೆಟ್ ಕಬಳಿಸಿ ಮಿಂಚಿದ್ದರು. ಇದೀಗ ಚಹಲ್ ಮೂರನೇ ಏಕದಿನ ಪಂದ್ಯದಲ್ಲೂ ಮೋಡಿ ಮಾಡಲು ತುದಿಗಾಲಿನಲ್ಲಿ ನಿಂತಿದ್ದಾರೆ.