ಭಾರತ ಹಾಗೂ ಅಫ್ಘಾನಿಸ್ತಾನ ನಡುವಿನ 3ನೇ ಹಾಗೂ ಕೊನೆ ಟಿ20 ಪಂದ್ಯ ಗುರುವಾರ ನಡೆಯಲಿದೆ. ಮೊದಲೆರಡು ಪಂದ್ಯದಲ್ಲಿ ಗೆದ್ದಿದ್ದ ಭಾರತ, ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್‌ಸ್ವೀಪ್ ಮಾಡಿಕೊಳ್ಳುವ ವಿಶ್ವಾಸದಲ್ಲಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ 3 ಬದಲಾವಣೆಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ.
ಆಫ್ಘಾನಿಸ್ತಾನ ಎದುರಿನ ಮೊದಲೆರಡು ಪಂದ್ಯಗಳನ್ನು ಗೆದ್ದು ಸರಣಿ ಕೈವಶ ಮಾಡಿಕೊಂಡಿರುವ ಟೀಂ ಇಂಡಿಯಾ, ಇದೀಗ ಮೂರನೇ ಹಾಗೂ ಔಪಚಾರಿಕ ಪಂದ್ಯದಲ್ಲಿ 3 ಬದಲಾವಣೆಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ. ಮೊದಲೆರಡು ಪಂದ್ಯಗಳಲ್ಲಿ ಬೆಂಚ್ ಕಾಯಿಸಿದ್ದ 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.
26
ವೈಭವ್ ಸೂರ್ಯವಂಶಿ-ಸಂಜು ಸ್ಯಾಮ್ಸನ್ ಓಪನ್ನರ್
ಹೌದು, ವೈಭವ್ ಸೂರ್ಯವಂಶಿ, ಇಂದಿನ ಪಂದ್ಯದಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದು, ನಿರಂತರವಾಗಿ ಕ್ರಿಕೆಟ್ ಆಡುತ್ತಾ ಬಂದಿರುವ ಅಭಿಷೇಕ್ ಶರ್ಮಾಗೆ ಇಂದಿನ ಪಂದ್ಯದ ಮಟ್ಟಿಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ. ಹೀಗಾದಲ್ಲಿ ಭಾರತ ಪರ ಸಂಜು ಸ್ಯಾಮ್ಸನ್ ಹಾಗೂ ವೈಭವ್ ಸೂರ್ಯವಂಶಿ ಆರಂಭಿಕರಾಗಿ ಇನ್ನಿಂಗ್ಸ್ ಶುರು ಮಾಡಲಿದ್ದಾರೆ.
36
ಮಧ್ಯಮ ಕ್ರಮಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ
ಮೂರನೇ ಕ್ರಮಾಂಕದಲ್ಲಿ ಇಶಾನ್ ಕಿಶನ್, ನಾಲ್ಕನೇ ಕ್ರಮಾಂಕದಲ್ಲಿ ನಾಯಕ ಶ್ರೇಯಸ್ ಅಯ್ಯರ್, ಐದನೇ ಕ್ರಮಾಂಕದಲ್ಲಿ ತಿಲಕ್ ವರ್ಮಾ, ಆರನೇ ಕ್ರಮಾಂಕದಲ್ಲಿ ಕಳೆದ ಪಂದ್ಯದ ಹೀರೋ ನಿತೀಶ್ ಕುಮಾರ್ ರೆಡ್ಡಿ ಹಾಗೂ ಏಳನೇ ಕ್ರಮಾಂಕದಲ್ಲಿ ಬಿಗ್ ಹಿಟ್ಟರ್ ಶಿವಂ ದುಬೆ ತಮ್ಮ ಸ್ಥಾನ ಉಳಿಸಿಕೊಳ್ಳಲಿದ್ದಾರೆ.
ಇನ್ನು ಬ್ಯಾಟಿಂಗ್ ಕ್ರಮಾಂಕದಲ್ಲಿ ಯಾವುದೇ ಬದಲಾವಣೆಗಳಾಗುವ ಸಾಧ್ಯತೆ ಕಡಿಮೆಯಿದೆ. ಆದರೆ ಬೌಲಿಂಗ್ ವಿಭಾಗದಲ್ಲಿ ಎರಡು ಪ್ರಮುಖ ಬದಲಾವಣೆಗಳಾಗುವ ಸಾಧ್ಯತೆ ದಟ್ಟವಾಗಿದೆ. ಈ ಪೈಕಿ ಇಂದಿನ ಪಂದ್ಯದಲ್ಲಿ ರವಿ ಬಿಷ್ಣೋಯ್ ಅವರಿಗೆ ವಿಶ್ರಾಂತಿ ನೀಡಿ ವಾಷಿಂಗ್ಟನ್ ಸುಂದರ್‌ಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಸಿಗುವ ಸಾಧ್ಯತೆ ದಟ್ಟವಾಗಿದೆ.
56
ಯಶ್ ಠಾಕೂರ್‌ಗೆ ಚಾನ್ಸ್
ಇದಷ್ಟೇ ಅಲ್ಲದೇ ಇಂದಿನ ಪಂದ್ಯದಲ್ಲಿ ಯುವ ವೇಗಿ ಯಶ್ ಠಾಕೂರ್ ಕೂಡಾ ಸ್ಥಾನ ಪಡೆಯಲಿದ್ದು, ಮೂರನೇ ಟಿ20 ಪಂದ್ಯದಲ್ಲಿ ಅರ್ಶದೀಪ್ ಸಿಂಗ್ ಇಲ್ಲವೇ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ಸಿಗುವ ನಿರೀಕ್ಷೆಯಿದೆ. ಇನ್ನುಳಿದಂತೆ ಭಾರತ ತಂಡದಲ್ಲಿ ಮತ್ತೆ ಯಾವುದೇ ಬದಲಾವಣೆಗಳಾಗುವ ಸಾಧ್ಯತೆ ಕಡಿಮೆ.
66
ಆಫ್ಘಾನಿಸ್ತಾನ ಎದುರಿನ 3ನೇ ಟಿ20 ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ:
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.