Ind vs NZ ನಿರ್ಣಾಯಕ ಟಿ20 ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಎರಡು ಮಹತ್ತರ ಬದಲಾವಣೆ?

First Published Feb 1, 2023, 11:52 AM IST

ಅಹಮದಾಬಾದ್‌(ಫೆ.01): ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೂರನೇ ಹಾಗೂ ನಿರ್ಣಾಯಕ ಟಿ20 ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಈಗಾಗಲೇ ಮೊದಲೆರಡು ಪಂದ್ಯಗಳಲ್ಲಿ ಉಭಯ ತಂಡಗಳು ತಲಾ ಒಂದೊಂದು ಪಂದ್ಯ ಜಯಿಸಿದ್ದು, ಇದೀಗ ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ನಿರ್ಣಾಯಕ ಟಿ20 ಪಂದ್ಯ ಗೆದ್ದು, ತವರಿನಲ್ಲಿ ಸತತ 13ನೇ ಟಿ20 ಸರಣಿ ಗೆಲುವಿನ ನಿರೀಕ್ಷೆಯಲ್ಲಿದೆ ಟೀಂ ಇಂಡಿಯಾ.

ಇನ್ನು ನಿರ್ಣಾಯಕ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಎರಡು ಪ್ರಮುಖ ಬದಲಾವಣೆಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ. ಮೂರನೇ ಪಂದ್ಯಕ್ಕೆ ಭಾರತದ ಸಂಭಾವ್ಯ ತಂಡ ಹೀಗಿದೆ ನೋಡಿ
 

1. ಪೃಥ್ವಿ ಶಾ: ಮೊದಲೆರಡು ಟಿ20 ಪಂದ್ಯಗಳಲ್ಲಿ ಶುಭ್‌ಮನ್ ಗಿಲ್‌, ರನ್‌ ಗಳಿಸಲು ಪರದಾಡಿದ ಹಿನ್ನೆಲೆಯಲ್ಲಿ, ಇಂದು ಮಹತ್ವದ ಪಂದ್ಯದಲ್ಲಿ 23 ವರ್ಷದ ಡ್ಯಾಶಿಂಗ್ ಓಪನ್ನರ್ ಪೃಥ್ವಿ ಶಾಗೆ ಮಣೆ ಹಾಕುವ ಸಾಧ್ಯತೆಯಿದೆ.

2. ಇಶಾನ್ ಕಿಶನ್: ವಿಕೆಟ್ ಕೀಪರ್‌ ಇಶಾನ್ ಕಿಶನ್‌ ಕೂಡಾ ದೊಡ್ಡ ಮೊತ್ತದ ಇನಿಂಗ್ಸ್ ಆಡಲು ವಿಫಲವಾಗಿದ್ದರಾರೆ. ಹೀಗಿದ್ದೂ ಕಿಶನ್‌ಗೆ ವಿಕೆಟ್ ಕೀಪರ್ ಬ್ಯಾಟರ್ ರೂಪದಲ್ಲಿ ತಂಡದಲ್ಲಿ ಸ್ಥಾನ ದೊರೆಯುವ ಸಾಧ್ಯತೆಯಿದೆ.

3. ಸೂರ್ಯಕುಮಾರ್ ಯಾದವ್: ಕಳೆದ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್, ಜವಾಬ್ದಾರಿಯುತ ಬ್ಯಾಟಿಂಗ್ ನಡೆಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದ್ದರು. ಇದೀಗ ಸೂರ್ಯ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ.
 

4. ರಾಹುಲ್ ತ್ರಿಪಾಠಿ: ಮೊದಲ ಪಂದ್ಯದಲ್ಲಿ ಸೊನ್ನೆ ಸುತ್ತಿದ್ದ ತ್ರಿಪಾಠಿ, ಎರಡನೇ ಪಂದ್ಯದಲ್ಲಿ 13 ರನ್ ಬಾರಿಸಿ ವಿಕೆಟ್ ಒಪ್ಪಿಸಿದ್ದರು. ಆದರೆ 31 ವರ್ಷದ ಅನುಭವಿ ಆಟಗಾರನಿಗೆ ತಂಡದಲ್ಲಿ ಮತ್ತೊಂದು ಅವಕಾಶ ದೊರೆಯುವ ಸಾಧ್ಯತೆಯಿದೆ.
 

5. ಹಾರ್ದಿಕ್ ಪಾಂಡ್ಯ: ಟೀಂ ಇಂಡಿಯಾ ನಾಯಕ ಹಾಗೂ ಸ್ಟಾರ್ ಆಲ್ರೌಂಡರ್ ಪಾಂಡ್ಯ, ಇದೀಗ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಮಿಂಚುವುದು ಮಾತ್ರವಲ್ಲದೇ, ನಾಯಕನಾಗಿಯೂ ತಂಡವನ್ನು ಯಶಸ್ಸಿನೆಡೆಗೆ ಕೊಂಡೊಯ್ಯಬೇಕಾದ ಜವಾಬ್ದಾರಿಯಿದೆ.
 

6. ದೀಪಕ್ ಹೂಡಾ: ಬಲಗೈ ಆಲ್ರೌಂಡರ್ ಹೂಡಾಗೆ ಎರಡನೇ ಟಿ20 ಪಂದ್ಯದಲ್ಲಿ ಬ್ಯಾಟಿಂಗ್ ಮಾಡಲು ಅವಕಾಶ ಸಿಕ್ಕಿರಲಿಲ್ಲ. ಆದರೆ ಬೌಲಿಂಗ್‌ನಲ್ಲಿ ಮಿಂಚಿದ್ದರು. ಇದೀಗ ದೀಪಕ್ ಹೂಡಾ, ಮತ್ತೊಮ್ಮೆ ತಂಡದಲ್ಲಿ ಸ್ಥಾನ ಪಡೆಯುವುದು ಬಹುತೇಕ ಖಚಿತ

7. ವಾಷಿಂಗ್ಟನ್ ಸುಂದರ್: ತಾರಾ ಆಲ್ರೌಂಡರ್ ವಾಷಿಂಗ್ಟನ್ ಸುಂದರ್, ಯಾವುದೇ ಸಂದರ್ಭದಲ್ಲಿ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ಹಾಗೂ ಫೀಲ್ಡಿಂಗ್‌ನಲ್ಲಿ ತಂಡಕ್ಕೆ ಉಪಯುಕ್ತ ಕಾಣಿಕೆ ನೀಡುವ ಸಾಮರ್ಥ್ಯ ಹೊಂದಿದ್ದಾರೆ.

8. ಆರ್ಶದೀಪ್ ಸಿಂಗ್: ಮೊದಲ ಪಂದ್ಯದಲ್ಲಿ ಸಾಕಷ್ಟು ದುಬಾರಿಯಾಗಿದ್ದ ಯುವ ವೇಗಿ, ಎರಡನೇ ಟಿ20 ಪಂದ್ಯದಲ್ಲಿ ಕೇವಲ 7 ರನ್ ನೀಡಿ 2 ವಿಕೆಟ್ ಕಬಳಿಸಿದ್ದರು. ಇದೀಗ ಮೂರನೇ ಪಂದ್ಯದಲ್ಲಿ ಉತ್ತಮ ಬೌಲಿಂಗ್ ಮುಂದುವರೆಸುವ ವಿಶ್ವಾಸದಲ್ಲಿದ್ದಾರೆ.
 

9. ಕುಲ್ದೀಪ್ ಯಾದವ್: ಟೀಂ ಇಂಡಿಯಾ ಅನುಭವಿ ಲೆಗ್‌ ಸ್ಪಿನ್ನರ್ ಕುಲ್ದೀಪ್‌ ಯಾದವ್, ಕಳೆದ ಪಂದ್ಯದಲ್ಲಿ 4 ಓವರ್ ಬೌಲಿಂಗ್‌ ಮಾಡಿ ಕೇವಲ 17 ರನ್ ನೀಡಿ ಒಂದು ವಿಕೆಟ್ ಕಬಳಿಸಿ ಮಿಂಚಿದ್ದರು.
 

10. ಉಮ್ರಾನ್ ಮಲಿಕ್: ಯುವ ಬಲಗೈ ವೇಗಿ ಶಿವಂ ಮಾವಿ, ಕಳೆದ ಪಂದ್ಯದಲ್ಲಿ ವಿಕೆಟ್‌ ಕಬಳಿಸಲು ವಿಫಲವಾಗಿದ್ದರು. ಹೀಗಾಗಿ ಶಿವಂ ಮಾವಿ ಬದಲಿಗೆ ಉಮ್ರಾನ್ ಮಲಿಕ್ ತಂಡ ಕೂಡಿಕೊಳ್ಳುವ ಸಾಧ್ಯತೆಯಿದೆ.
 

11.ಯುಜುವೇಂದ್ರ ಚಹಲ್: ಟೀಂ ಇಂಡಿಯಾ ಅನುಭವಿ ಸ್ಪಿನ್ನರ್ ಯುಜುವೇಂದ್ರ ಚಹಲ್, ಕಳೆದ ಪಂದ್ಯದಲ್ಲಿ ಕೇವಲ 2 ಓವರ್ ಬೌಲಿಂಗ್ ಮಾಡಿ 4 ರನ್ ನೀಡಿ 2 ವಿಕೆಟ್ ಕಬಳಿಸಿ ಮಿಂಚಿದ್ದರು. ಚಹಲ್‌, ಮತ್ತೊಮ್ಮೆ ಕಿವೀಸ್ ಬ್ಯಾಟರ್‌ಗಳನ್ನು ಕಾಡಲು ಸಜ್ಜಾಗಿದ್ದಾರೆ.
 

click me!