1. ರೋಹಿತ್ ಶರ್ಮಾ
ಟೀಂ ಇಂಡಿಯಾ ಟೆಸ್ಟ್ ತಂಡದ ನಾಯಕ ರೋಹಿತ್ ಶರ್ಮಾ, ಎರಡನೇ ಟೆಸ್ಟ್ ಪಂದ್ಯದಲ್ಲಿ ದೊಡ್ಡ ಮೊತ್ತ ಕಲೆಹಾಕುವ ನಿರೀಕ್ಷೆಯಲ್ಲಿದ್ದಾರೆ. ಮೊಹಾಲಿ ಟೆಸ್ಟ್ ಪಂದ್ಯದಲ್ಲಿ ರೋಹಿತ್ 29 ರನ್ ಬಾರಿಸಿ ವಿಕೆಟ್ ಒಪ್ಪಿಸಿದ್ದರು. ಟೆಸ್ಟ್ ತಂಡದ ನಾಯಕರಾದ ಬಳಿಕ ರೋಹಿತ್ ಶರ್ಮಾ ಮೊದಲ ಟೆಸ್ಟ್ ಸರಣಿ ಗೆಲುವಿನ ವಿಶ್ವಾಸದಲ್ಲಿದ್ದಾರೆ.
2. ಮಯಾಂಕ್ ಅಗರ್‌ವಾಲ್
ಟೆಸ್ಟ್ ತಂಡದ ಆರಂಭಿಕ ಬ್ಯಾಟರ್ ಮಯಾಂಕ್ ಅಗರ್‌ವಾಲ್‌ಗೆ ಪಿಂಕ್ ಬಾಲ್ ಟೆಸ್ಟ್‌ನಲ್ಲಿ ಮತ್ತೊಂದು ಅವಕಾಶ ಸಿಗುವ ಸಾಧ್ಯತೆಯಿದೆ. ಮೊದಲ ಪಂದ್ಯದಲ್ಲಿ 33 ರನ್ ಬಾರಿಸಿದ್ದ ಮಯಾಂಕ್, ಇದೀಗ ತವರಿನಲ್ಲಿ ಅಬ್ಬರಿಸಲು ಎದುರು ನೋಡುತ್ತಿದ್ದಾರೆ.
3. ಹನುಮ ವಿಹಾರಿ
ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ ಅನುಪಸ್ಥಿತಿಯಲ್ಲಿ ಮೊದಲ ಟೆಸ್ಟ್ ಪಂದ್ಯದಲ್ಲಿ ಸಮಯೋಚಿತ ಅರ್ಧಶತಕ ಬಾರಿಸುವ ಮೂಲಕ ಆಯ್ಕೆ ಸಮಿತಿ ಮನ ಗೆದ್ದಿದ್ದರು. ವಿಹಾರಿ ಇದೀಗ ಮತ್ತೊಮ್ಮೆ ಮೂರನೇ ಕ್ರಮಾಂಕ ಭದ್ರಪಡಿಸಿಕೊಳ್ಳಲು ಎದುರು ನೋಡುತ್ತಿದ್ದಾರೆ.
4. ವಿರಾಟ್ ಕೊಹ್ಲಿ
ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಕಳೆದ ಎರಡೂವರೆ ವರ್ಷಗಳಿಂದ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಶತಕ ಬಾರಿಸಲು ವಿಫಲರಾಗಿದ್ದಾರೆ. ಕೊಹ್ಲಿ ತನ್ನ ನೆಚ್ಚಿನ ಸ್ಟೇಡಿಯಂನಲ್ಲಿ ಶತಕದ ಬರ ನೀಗಿಸಿಕೊಳ್ಳಲು ಕಾಯುತ್ತಿದ್ದಾರೆ.
5. ರಿಷಭ್ ಪಂತ್
ವಿಕೆಟ್ ಕೀಪರ್ ಬ್ಯಾಟರ್ ಪಂತ್, ಮೊಹಾಲಿ ಟೆಸ್ಟ್ ಪಂದ್ಯದಲ್ಲಿ ಆಕರ್ಷಕ 96 ರನ್ ಬಾರಿಸಿ, ಕೇವಲ 4 ರನ್‌ಗಳ ಅಂತರದಲ್ಲಿ ಶತಕ ವಂಚಿತರಾಗಿದ್ದರು. ಪಂತ್ ಬೆಂಗಳೂರಿನಲ್ಲೂ ಸ್ಪೋಟಕ ಬ್ಯಾಟಿಂಗ್ ನಡೆಸಲು ರೆಡಿಯಾಗಿದ್ದಾರೆ.
6. ಶ್ರೇಯಸ್ ಅಯ್ಯರ್
ವಿಂಡೀಸ್ ಎದುರಿನ ಟಿ20 ಸರಣಿಯಲ್ಲಿ ಸತತ 3 ಅರ್ಧಶತಕ ಬಾರಿಸಿ ಆಯ್ಕೆ ಸಮಿತಿ ಮನಗೆದ್ದಿರುವ ಶ್ರೇಯಸ್ ಅಯ್ಯರ್, ಮೊದಲ ಟೆಸ್ಟ್‌ನಲ್ಲಿ ಹೆಚ್ಚು ಕಮಾಲ್ ಮಾಡಲು ಸಾಧ್ಯವಾಗಿರಲಿಲ್ಲ. ಹೀಗಿದ್ದೂ ಅಯ್ಯರ್‌ಗೆ ಮತ್ತೊಂದು ಅವಕಾಶ ಸಿಗುವುದು ಬಹುತೇಕ ಖಚಿತ
7. ರವೀಂದ್ರ ಜಡೇಜಾ
ಮೊಹಾಲಿ ಟೆಸ್ಟ್ ಪಂದ್ಯದಲ್ಲೇ ಅಜೇಯ 175 ರನ್ ಹಾಗೂ ಬೌಲಿಂಗ್‌ನಲ್ಲಿ 9 ವಿಕೆಟ್ ಕಬಳಿಸಿದ್ದ ರವೀಂದ್ರ ಜಡೇಜಾ, ಟೆಸ್ಟ್ ಆಲ್ರೌಂಡರ್ ಶ್ರೇಯಾಂಕದಲ್ಲಿ ನಂ.1 ಸ್ಥಾನಕ್ಕೇರಿದ್ದಾರೆ. ಜಡೇಜಾ ತಮ್ಮ ಫಾರ್ಮ್ ಮುಂದುವರೆಸಿಕೊಂಡು ಹೋಗಲು ತುದಿಗಾಲಿನಲ್ಲಿ ನಿಂತಿದ್ದಾರೆ.
8. ರವಿಚಂದ್ರನ್ ಅಶ್ವಿನ್
ಟೀಂ ಇಂಡಿಯಾ ಆನುಭವಿ ಆಫ್‌ಸ್ಪಿನ್ನರ್ ರವಿಚಂದ್ರನ್ ಅಶ್ವಿನ್, ತಮ್ಮ ಆಲ್ರೌಂಡ್ ಪ್ರದರ್ಶನದ ಮೂಲಕ ತಂಡಕ್ಕೆ ನೆರವಾಗುತ್ತಿದ್ದಾರೆ. ಮೊಹಾಲಿ ಟೆಸ್ಟ್‌ನಲ್ಲಿ ಕಪಿಲ್ ದೇವ್ ಗರಿಷ್ಠ ವಿಕೆಟ್ ದಾಖಲೆ ಹಿಂದಿಕ್ಕಿರುವ ಅಶ್ವಿನ್, ತಂಡದ ರಿಯಲ್ ಮ್ಯಾಚ್ ವಿನ್ನರ್ ಎನಿಸಿದ್ದಾರೆ.
9. ಅಕ್ಷರ್ ಪಟೇಲ್
ಕಳೆದ ಪಂದ್ಯದಲ್ಲಿ ಜಯಂತ್ ಯಾದವ್ ಅವರಿಂದ ನಿರೀಕ್ಷಿತ ಪ್ರದರ್ಶನ ಮೂಡಿ ಬಂದಿರಲಿಲ್ಲ. ಹೀಗಾಗಿ ಸಂಪೂರ್ಣ ಫಿಟ್ ಆಗಿರುವ ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್ ಪಿಂಕ್ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.
10. ಮೊಹಮ್ಮದ್ ಶಮಿ
ಟೀಂ ಇಂಡಿಯಾ ಅನುಭವಿ ವೇಗಿ ಶಮಿ, ಮೊಹಾಲಿ ಟೆಸ್ಟ್ ಪಂದ್ಯದ ಎರಡು ಇನಿಂಗ್ಸ್‌ಗಳಿಂದ ಒಟ್ಟು 3 ವಿಕೆಟ್ ಕಬಳಿಸಿದ್ದರು. ಬೆಂಗಳೂರು ಟೆಸ್ಟ್ ಪಂದ್ಯದಲ್ಲಿ ಮತ್ತಷ್ಟು ವಿಕೆಟ್ ಪಡೆಯಲು ಶಮಿ ಸಾಕಷ್ಟು ಬೆವರು ಹರಿಸುತ್ತಿದ್ದಾರೆ.
11. ಜಸ್ಪ್ರೀತ್ ಬುಮ್ರಾ
28 ವರ್ಷದ ಮಾರಕ ವೇಗಿ ಜಸ್ಪ್ರೀತ್ ಬುಮ್ರಾ, ಮೊಹಾಲಿ ಟೆಸ್ಟ್ ಪಂದ್ಯದಲ್ಲಿ ಗಮನಾರ್ಹ ಪ್ರದರ್ಶನ ತೋರಲು ವಿಫಲವಾಗಿದ್ದರು. ಆದರೆ, ಯಾವ ಕ್ಷಣದಲ್ಲಿ ಬೇಕಾದರೂ ಅಪಾಯಕಾರಿಯಾಗಬಲ್ಲ ಬುಮ್ರಾ, ಬೆಂಗಳೂರಿನಲ್ಲಿ ಲಂಕಾ ಬ್ಯಾಟರ್‌ಗಳನ್ನು ಕಾಡಲು ರೆಡಿಯಾಗಿದ್ದಾರೆ.