ಟ್ರಿನಿಡ್ಯಾಡ್: ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇಂದು ಸಂಜೆ 7 ಗಂಟೆಯಿಂದ ಇಲ್ಲಿನ ಕ್ವೀನ್ಸ್ ಪಾರ್ಕ್ ಓವಲ್ ಸ್ಟೇಡಿಯಂನಲ್ಲಿ ಮೊದಲ ಪಂದ್ಯ ಆರಂಭವಾಗಲಿದೆ. ವಿಂಡೀಸ್ ಎದುರಿನ ಏಕದಿನ ಪಂದ್ಯಕ್ಕೆ ಹಲವು ಅನುಭವಿ ಆಟಗಾರರು ವಿಶ್ರಾಂತಿ ಪಡೆದಿರುವುದರಿಂದ ಶಿಖರ್ ಧವನ್ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ವಿಂಡೀಸ್ ಎದುರಿನ ಮೊದಲ ಏಕದಿನ ಪಂದ್ಯಕ್ಕೆ ಭಾರತದ ಸಂಭಾವ್ಯ ತಂಡ ಹೀಗಿದೆ ನೋಡಿ
ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ ಅನುಭವಿ ಆರಂಭಿಕ ಬ್ಯಾಟರ್ ಶಿಖರ್ ಧವನ್, ಭಾರತ ಕ್ರಿಕೆಟ್ ತಂಡವನ್ನು ಮುನ್ನಡೆಸಲಿದ್ದಾರೆ. ಧವನ್ ನಾಯಕನಾಗಿ ಹಾಗೂ ಆರಂಭಿಕನಾಗಿ ತಂಡಕ್ಕೆ ಉತ್ತಮ ಅಡಿಪಾಯ ಹಾಕಬೇಕಿದೆ.
211
Image credit: PTI
2. ಇಶಾನ್ ಕಿಶನ್
ಚುಟುಕು ಕ್ರಿಕೆಟ್‌ನಲ್ಲಿ ಈಗಾಗಲೇ ಸಂಚಲನ ಮೂಡಿಸಿರುವ ಇಶಾನ್ ಕಿಶನ್, ಧವನ್ ಜತೆಗೆ ಇನಿಂಗ್ಸ್ ಆರಂಭಿಸುವ ಸಾಧ್ಯತೆಯಿದೆ. ತಜ್ಞ ಆರಂಭಿಕರಾಗಿ ಋತುರಾಜ್ ಗಾಯಕ್ವಾಡ್ ಹಾಗೂ ಶುಭ್‌ಮನ್ ಗಿಲ್ ಇದ್ದರೂ ಸಹಾ, ಇಶಾನ್ ಕಿಶನ್ ಆರಂಭಿಕರಾಗಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.
311
3. ದೀಪಕ್ ಹೂಡಾ
ಸದ್ಯ ಐಪಿಎಲ್ ಬಳಿಕ ಅದ್ಭುತ ಪ್ರದರ್ಶನ ತೋರುತ್ತಿರುವ ದೀಪಕ್ ಹೂಡಾ ತಮಗೆ ಸಿಕ್ಕ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಮುಂಬರುವ ಏಕದಿನ ವಿಶ್ವಕಪ್‌ಗೆ ಭಾರತ ತಂಡದಲ್ಲಿ ಸ್ಥಾನ ಪಡೆಯಲು ಹೂಡಾ ಸಾಕಷ್ಟು ಕಸರತ್ತು ಪಡುತ್ತಿದ್ದಾರೆ.
411
Sanju Samson
4. ಸಂಜು ಸ್ಯಾಮ್ಸನ್
ಐರ್ಲೆಂಡ್ ಎದುರಿನ ಎರಡನೇ ಟಿ20 ಪಂದ್ಯದಲ್ಲಿ ಸ್ಪೋಟಕ ಅರ್ಧಶತಕ ಚಚ್ಚಿದ್ದ ಸಂಜು ಸ್ಯಾಮ್ಸನ್, ಇಂದು ವಿಂಡೀಸ್ ಎದುರು ಕಣಕ್ಕಿಳಿಯುವ ಸಾಧ್ಯತೆಯಿದೆ. ಸಂಜುಗೆ ವಿಂಡೀಸ್ ಎದುರಿನ ಟಿ20 ಸರಣಿಗೆ ಸ್ಥಾನ ಸಿಕ್ಕಿಲ್ಲ. ಹೀಗಾಗಿ ಏಕದಿನ ಸರಣಿಯಲ್ಲಿ ಮಿಂಚಲು ಸಂಜು ತುದಿಗಾಲಿನಲ್ಲಿ ನಿಂತಿದ್ದಾರೆ.
511
5. ಸೂರ್ಯಕುಮಾರ್ ಯಾದವ್
ಟೀಂ ಇಂಡಿಯಾದ ಮತ್ತೋರ್ವ ಪ್ರತಿಭಾನ್ವಿತ ಬ್ಯಾಟರ್ ಸೂರ್ಯಕುಮಾರ್ ಯಾದವ್ ಸದ್ಯ ರೆಡ್ ಹಾಟ್ ಫಾರ್ಮ್‌ನಲ್ಲಿದ್ದು, ವೆಸ್ಟ್ ಇಂಡೀಸ್ ಎದುರಿನ ಸರಣಿಯಲ್ಲೂ ತಮ್ಮ ಝಲಕ್ ತೋರಿಸಲು ಎದುರು ನೋಡುತ್ತಿದ್ದಾರೆ.
611
Ravindra Jadeja
6. ರವೀಂದ್ರ ಜಡೇಜಾ
ಟೀಂ ಇಂಡಿಯಾ ಸ್ಟಾರ್ ಆಲ್ರೌಂಡರ್ ಜಡೇಜಾ, ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್‌ನಲ್ಲಿ ಅದ್ಭುತ ಪ್ರದರ್ಶನ ತೋರುವ ಮೂಲಕ ಆಸರೆಯಾಗುತ್ತಿದ್ದಾರೆ. ಇಂಗ್ಲೆಂಡ್ ಸರಣಿಯಲ್ಲಿ ತೋರಿದ್ದ ಪ್ರದರ್ಶನ ಮುಂದುವರೆಸಿಕೊಂಡು ಹೋಗಲು ಜಡ್ಡು ರೆಡಿಯಾಗಿದ್ದಾರೆ.
711
7. ಶಾರ್ದೂಲ್ ಠಾಕೂರ್
ಅನುಭವಿ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ ಶಾರ್ದೂಲ್ ಠಾಕೂರ್ ಬೌಲಿಂಗ್ ಆಲ್ರೌಂಡರ್ ರೂಪದಲ್ಲಿಂದು ಕಣಕ್ಕಿಳಿಯುವ ಸಾಧ್ಯತೆಯಿದೆ. ಶಾರ್ದೂಲ್ ಠಾಕೂರ್ ಡೆತ್ ಓವರ್‌ನಲ್ಲಿ ಪರಿಣಾಮಕಾರಿ ದಾಳಿ ನಡೆಸಬಲ್ಲವರಾಗಿದ್ದಾರೆ.
811
8. ಯುಜುವೇಂದ್ರ ಚಹಲ್
ಟೀಂ ಇಂಡಿಯಾ ತಜ್ಞ ಲೆಗ್ ಸ್ಪಿನ್ನರ್ ಯುಜುವೇಂದ್ರ ಚಹಲ್, ತಮ್ಮ ಚಾಣಾಕ್ಷ ಬೌಲಿಂಗ್ ಪ್ರದರ್ಶನದ ಮೂಲಕ ಮಿಂಚುತ್ತಿದ್ದಾರೆ. ಬಲಾಢ್ಯ ವಿಂಡೀಸ್ ಬ್ಯಾಟರ್‌ಗಳನ್ನು ಕಟ್ಟಿಹಾಕುವ ಸವಾಲು ಚಹಲ್ ಮುಂದಿದೆ.
911
Prasidh Krishna
9. ಪ್ರಸಿದ್ದ್ ಕೃಷ್ಣ
ಕರ್ನಾಟಕ ಮೂಲದ ನೀಳಕಾಯದ ವೇಗಿ ಪ್ರಸಿದ್ಧ್ ಕೃಷ್ಣ, ಇಂಗ್ಲೆಂಡ್ ಪ್ರವಾಸದಲ್ಲಿ ನಿರೀಕ್ಷಿತ ಪ್ರದರ್ಶನ ತೋರಲು ವಿಫಲವಾಗಿದ್ದರು. ಇದೀಗ ಪ್ರಸಿದ್ಧ್‌ಗೆ ಮತ್ತೊಂದು ಅವಕಾಶ ಲಭಿಸಿದ್ದು, ವಿಂಡೀಸ್ ಎದುರು ಮಿಂಚಲು ರೆಡಿಯಾಗಿದ್ದಾರೆ.
1011
10. ಮೊಹಮ್ಮದ್ ಸಿರಾಜ್
ಹೈದರಾಬಾದ್ ಮೂಲದ ವೇಗಿ ಸಿರಾಜ್, ಇಂಗ್ಲೆಂಡ್ ಎದುರಿನ ಸರಣಿಯಲ್ಲಿ ಪರಿಣಾಮಕಾರಿ ದಾಳಿ ನಡೆಸಿದ್ದರು. ಬುಮ್ರಾ, ಶಮಿ ಅನುಪಸ್ಥಿತಿಯಲ್ಲಿ ಸಿರಾಜ್ ಜವಾಬ್ದಾರಿಯುತ ಪ್ರದರ್ಶನ ತೋರಬೇಕಿದೆ.
1111
11. ಆರ್ಶದೀಪ್ ಸಿಂಗ್
ಐಪಿಎಲ್‌ನಲ್ಲಿ ಮಿಂಚಿನ ಪ್ರದರ್ಶನ ತೋರಿದ್ದ ಆರ್ಶದೀಪ್ ಸಿಂಗ್, ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಲು ಸಜ್ಜಾಗಿದ್ದಾರೆ. ಆವೇಶ್ ಖಾನ್ ಹಾಗೂ ಆರ್ಶದೀಪ್ ಸಿಂಗ್ ನಡುವೆ ಆಡುವ ಹನ್ನೊಂದರ ಬಳಗ ಕೂಡಿಕೊಳ್ಳಲು ಸಾಕಷ್ಟು ಪೈಪೋಟಿಯಿದೆ.