T20 World Cup 2026: ಸೂಪರ್‌-8ನಲ್ಲಿ ಭಾರತದ ಎದುರಾಳಿಗಳು ಯಾರು? ಮೊದಲ ಪಂದ್ಯ ಎಲ್ಲಿ? ಯಾವಾಗ? ಸಂಪೂರ್ಣ ವೇಳಾಪಟ್ಟಿ

Published : Feb 19, 2026, 11:56 AM IST

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಪಾಲಿನ ಗ್ರೂಪ್‌ ಹಂತದ ಪಂದ್ಯಗಳು ಮುಕ್ತಾಯವಾಗಿದ್ದು, ಇದೀಗ ಸೂಪರ್-8 ಹಂತದ ಕಾದಾಟಕ್ಕೆ ವೇದಿಕೆ ಸಜ್ಜಾಗಿದೆ. ಇದೀಗ ಭಾರತ ಸೂಪರ್-8 ಹಂತದಲ್ಲಿ ಯಾವಾಗ? ಯಾವ ತಂಡವನ್ನು ಎದುರಿಸಲಿದೆ ಎನ್ನುವುದನ್ನು ನೋಡೋಣ ಬನ್ನಿ

PREV
16
ಗ್ರೂಪ್ ಹಂತದಲ್ಲಿ ಭಾರತದ ಅಜೇಯ ಓಟ

ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ, 'ಎ' ಗುಂಪಿನಲ್ಲಿ ಸತತ 4 ಪಂದ್ಯಗಳನ್ನು ಗೆಲ್ಲುವ ಮೂಲಕ ಅಗ್ರಸ್ಥಾನಿಯಾಗಿ ಸೂಪರ್-8 ಹಂತಕ್ಕೆ ಲಗ್ಗೆಯಿಟ್ಟಿದೆ. ಗ್ರೂಪ್ ಹಂತದ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ, ನೆದರ್‌ಲೆಂಡ್ಸ್ ಎದುರು 17 ರನ್ ಅಂತದ ಭರ್ಜರಿ ಗೆಲುವು ದಾಖಲಿಸಿದೆ.

26
ಭಾರತ ತಂಡದ ಗ್ರೂಪ್ ಹಂತದ ಪ್ರದರ್ಶನ

ಟೀಂ ಇಂಡಿಯಾ, ಗ್ರೂಪ್ ಹಂತದ ಮೊದಲ ಪಂದ್ಯದಲ್ಲಿ ಯುಎಸ್‌ಎ ಎದುರು ಗೆಲ್ಲುವ ಮೂಲಕ ಶುಭಾರಂಭ ಮಾಡಿತ್ತು. ಇದಾದ ಬಳಿಕ ನಮೀಬಿಯಾ ಎದುರು 93 ರನ್‌ಗಳ ಭಾರೀ ಅಂತರದ ಗೆಲುವು ದಾಖಲಿಸಿತ್ತು. ಇನ್ನು ಬದ್ದ ಎದುರಾಳಿ ಪಾಕಿಸ್ತಾನವನ್ನು ಸೂರ್ಯ ಪಡೆ 61 ರನ್‌ಗಳಿಂದ ಮಣಿಸಿತ್ತು. ಇದೀಗ ನೆದರ್‌ಲೆಂಡ್ಸ್‌ ಕೂಡಾ ಭಾರತದ ಎದುರು ಮಂಡಿಯೂರಿದೆ.

36
ಸೂಪರ್-8 ಹಂತದ ಮೊದಲ ಪಂದ್ಯದಲ್ಲಿ ಭಾರತ-ದಕ್ಷಿಣ ಆಫ್ರಿಕಾ ಫೈಟ್

ಅಂದಹಾಗೆ ಇದೀಗ ಸೂಪರ್-8 ಹಂತದಲ್ಲಿ ಭಾರತಕ್ಕೆ ಮೊದಲ ಪಂದ್ಯದಲ್ಲೇ ಕಠಿಣ ಸವಾಲು ಎದುರಾಗಲಿದೆ. ಭಾರತವು ಸೂಪರ್-8 ಹಂತದ ಮೊದಲ ಪಂದ್ಯದಲ್ಲಿ ಬಲಿಷ್ಠ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲಿದೆ. ಈ ಪಂದ್ಯವು ಫೆಬ್ರವರಿ 22ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.

46
ಎರಡನೇ ಪಂದ್ಯದಲ್ಲಿ ಭಾರತ-ಜಿಂಬಾಬ್ವೆ ಫೈಟ್

ಇದಾದ ಬಳಿಕ ಭಾರತ ತನ್ನ ಪಾಲಿನ ಸೂಪರ್-8 ಹಂತದ ಎರಡನೇ ಪಂದ್ಯದಲ್ಲಿ ಜಿಂಬಾಬ್ವೆ ತಂಡವನ್ನು ಎದುರಿಸಲಿದೆ. ಈ ಪಂದ್ಯವು ಫೆಬ್ರವರಿ 26ರಂದು ಚೆನ್ನೈನ ಚೆಪಾಕ್‌ ಮೈದಾನದಲ್ಲಿ ನಡೆಯಲಿದೆ. ಮಾಜಿ ಚಾಂಪಿಯನ್ ಆಸ್ಟ್ರೇಲಿಯಾವನ್ನೇ ಸೋಲಿಸಿರುವ ಜಿಂಬಾಬ್ವೆಯನ್ನು ಸುಲಭವಾಗಿ ತೆಗೆದುಕೊಳ್ಳುವಂತಿಲ್ಲ.

56
ಸೂಪರ್-8 ಹಂತದ ಕೊನೆಯ ಪಂದ್ಯದಲ್ಲಿ ಭಾರತಕ್ಕೆ ವೆಸ್ಟ್ ಇಂಡೀಸ್ ಸವಾಲು

ಇನ್ನು ಸೂಪರ್-8 ಹಂತದ ಕೊನೆಯ ಪಂದ್ಯದಲ್ಲಿ ಭಾರತ ತಂಡವು ಎರಡು ಬಾರಿಯ ಚಾಂಪಿಯನ್ ವೆಸ್ಟ್ ಇಂಡೀಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯವು ಮಾರ್ಚ್ 01ರಂದು ಕೋಲ್ಕತಾದ ಈಡನ್ ಗಾರ್ಡನ್ಸ್ ಮೈದಾನವನ್ನು ಎದುರಿಸಲಿದೆ.

66
ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಆರಂಭ

ಈ ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಆರಂಭವಾಗಲಿವೆ. ಈ ಎಲ್ಲಾ ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್ ಹಾಗೂ ಜಿಯೋ ಹಾಟ್‌ಸ್ಟಾರ್‌ನಲ್ಲಿ ವೀಕ್ಷಿಸಬಹುದು. ಭಾರತ ಆಡಲಿರುವ ಮೂರು ಪಂದ್ಯಗಳ ಪೈಕಿ ಕನಿಷ್ಠ ಎರಡು ಪಂದ್ಯಗಳನ್ನು ಜಯಿಸಿದರೆ ಸೆಮಿಫೈನಲ್‌ಗೆ ಎಂಟ್ರಿಕೊಡಲಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories