2026ರ ಐಸಿಸಿ ಟಿ20 ವಿಶ್ವಕಪ್‌ಗೆ ಭಾರತೀಯ ತಂಡದ ಆಯ್ಕೆ ಬಗ್ಗೆ ಚರ್ಚೆ ಜೋರಾಗಿದೆ. ನಿತೀಶ್ ಕುಮಾರ್ ರೆಡ್ಡಿ ತಂಡದಿಂದ ಹೊರಗುಳಿಯುವುದು ಖಚಿತ ಎನ್ನುತ್ತಿದ್ದಾರೆ ತಜ್ಞರು, ಆದರೆ ಹರ್ಷಿತ್ ರಾಣಾಗೆ ತಂಡದಲ್ಲಿ ಸ್ಥಾನ ಸಿಗಬಹುದು ಎಂದು ಅಂದಾಜಿಸಲಾಗಿದೆ. ಆ ವಿವರಗಳು ಏನು ಗೊತ್ತಾ?
ಟಿ20 ವಿಶ್ವಕಪ್‌ಗೆ ಇನ್ನು ಕೇವಲ ಮೂರು ತಿಂಗಳು ಬಾಕಿ ಇದೆ. ಈ ಪ್ರತಿಷ್ಠಿತ ಮೆಗಾ ಈವೆಂಟ್‌ನಲ್ಲಿ ಭಾರತ ಹಾಟ್ ಫೇವರಿಟ್ ಆಗಿ ಕಣಕ್ಕಿಳಿಯಲಿದೆ. ಟೀಂ ಇಂಡಿಯಾ ಸದ್ಯ ಬಲಿಷ್ಠವಾಗಿದ್ದರೂ, ತಂಡದ ಸಂಯೋಜನೆ ಮತ್ತು ಆಟಗಾರರ ಆಯ್ಕೆಯ ಬಗ್ಗೆ ಟೀಮ್ ಮ್ಯಾನೇಜ್‌ಮೆಂಟ್ ಈಗಾಗಲೇ ಒಂದು ನಿರ್ಧಾರಕ್ಕೆ ಬಂದಂತಿದೆ. ಸದ್ಯ ವೈರಲ್ ಆಗುತ್ತಿರುವ ವದಂತಿಗಳ ಪ್ರಕಾರ, ಇಬ್ಬರು ಆಟಗಾರರು ತಂಡದಿಂದ ಹೊರಬೀಳುವ ಸಾಧ್ಯತೆ ಇದೆ.
25
ಭಾರತದ ಪಿಚ್ ಸ್ಪಿನ್ನರ್‌ಗಳಿಗೆ ಸಹಕಾರಿ
ಭಾರತದ ಪಿಚ್‌ಗಳು ವೇಗಿಗಳಿಗಿಂತ ಸ್ಪಿನ್ನರ್‌ಗಳಿಗೆ ಹೆಚ್ಚು ಅನುಕೂಲಕರ ಎಂಬುದು ಎಲ್ಲರ ಅಭಿಪ್ರಾಯ. ಈ ಹಿನ್ನೆಲೆಯಲ್ಲಿ, ಪೇಸ್ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿಯನ್ನು ಕೈಬಿಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ, ಹರ್ಷಿತ್ ರಾಣಾರನ್ನು ತಂಡಕ್ಕೆ ಸೇರಿಸಿಕೊಳ್ಳಬಹುದು ಎಂದು ಕ್ರಿಕೆಟ್ ತಜ್ಞರು ಅಂದಾಜಿಸಿದ್ದಾರೆ. 15 ಜನರ ತಂಡಕ್ಕೆ ಸೂರ್ಯಕುಮಾರ್ ಯಾದವ್ ನಾಯಕತ್ವ ವಹಿಸುವುದರಲ್ಲಿ ಯಾವುದೇ ಅನುಮಾನವಿಲ್ಲ.
35
ಆರಂಭಿಕ ಜೋಡಿಯಲ್ಲಿ ಯಾವುದೇ ಗೊಂದಲವಿಲ್ಲ
ಉಪನಾಯಕನಾಗಿ ಶುಭಮನ್ ಗಿಲ್ ಕಣಕ್ಕಿಳಿಯಲಿದ್ದಾರೆ. ಓಪನರ್ ಆಗಿ ಅಭಿಷೇಕ್ ಶರ್ಮಾ ತಂಡದಲ್ಲಿ ಇರುವುದು ಖಚಿತ. ಶುಭಮನ್ ಗಿಲ್ ಮತ್ತು ಅಭಿಷೇಕ್ ಶರ್ಮಾ ಭಾರತದ ಇನ್ನಿಂಗ್ಸ್ ಆರಂಭಿಸಲಿದ್ದು, ಆರಂಭಿಕ ಜೋಡಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ನಿರೀಕ್ಷಿಸಲಾಗಿದೆ. ಮುಂದಿನ ಸ್ಥಾನಗಳಲ್ಲಿ ಪಂದ್ಯದ ಪರಿಸ್ಥಿತಿಗೆ ತಕ್ಕಂತೆ ಆಟಗಾರರನ್ನು ಬದಲಾಯಿಸುವ ಸಾಧ್ಯತೆಗಳಿವೆ ಎಂದು ತಜ್ಞರು ಹೇಳುತ್ತಾರೆ. ವಿಕೆಟ್ ಕೀಪರ್ ಸ್ಥಾನಕ್ಕಾಗಿ ತೀವ್ರ ಪೈಪೋಟಿ ಇದೆ. ಸಂಜು ಸ್ಯಾಮ್ಸನ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಆಗಿರುತ್ತಾರಾ ಅಥವಾ ಜಿತೇಶ್ ಶರ್ಮಾ ಆಡುತ್ತಾರಾ ಎಂಬುದು ಕುತೂಹಲ ಮೂಡಿಸಿದೆ.
ವೇಗದ ಬೌಲಿಂಗ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಕಮ್‌ಬ್ಯಾಕ್ ಮಾಡುವುದು ಖಚಿತ ಎಂದು ಭಾವಿಸಲಾಗಿದೆ. ಪಾಂಡ್ಯರಿಂದ ತಂಡಕ್ಕೆ ಸಮತೋಲನ ಸಿಗುತ್ತದೆ ಎನ್ನುತ್ತಾರೆ ತಜ್ಞರು. ಮತ್ತೊಬ್ಬ ಪೇಸ್ ಆಲ್‌ರೌಂಡರ್ ಆಗಿ ಶಿವಂ ದುಬೆ ತಂಡದಲ್ಲಿರುತ್ತಾರೆ. ಫಿನಿಶರ್ ಆಗಿ ರಿಂಕು ಸಿಂಗ್ ಸ್ಥಾನಕ್ಕೆ ಯಾವುದೇ ತೊಂದರೆಯಿಲ್ಲ. ಮೊದಲ ಆಯ್ಕೆಯ ಸ್ಪಿನ್ ಆಲ್ರೌಂಡರ್ ಆಗಿ ಅಕ್ಷರ್ ಪಟೇಲ್ ಪ್ರಮುಖ ಪಾತ್ರ ವಹಿಸಲಿದ್ದಾರೆ.
55
ಸ್ಪೆಷಲಿಸ್ಟ್ ಸ್ಪಿನ್ನರ್ ಆಗಿ ಕುಲ್ದೀಪ್-ವರುಣ್ ಚಕ್ರವರ್ತಿಗೆ ಸ್ಥಾನ
ಪರಿಣಿತ ಸ್ಪಿನ್ನರ್‌ಗಳಾಗಿ ಕುಲ್ದೀಪ್ ಯಾದವ್ ಮತ್ತು ವರುಣ್ ಚಕ್ರವರ್ತಿ ತಂಡದಲ್ಲಿರುತ್ತಾರೆ. ವೇಗದ ಬೌಲಿಂಗ್ ವಿಭಾಗದಲ್ಲಿ ಜಸ್ಪ್ರೀತ್ ಬುಮ್ರಾ ಮತ್ತು ಅರ್ಷದೀಪ್ ಸಿಂಗ್ ಪ್ರಮುಖ ಅಸ್ತ್ರಗಳಾಗಲಿದ್ದಾರೆ. ಒಟ್ಟಾರೆಯಾಗಿ, ವಿಶ್ವಕಪ್ ತಂಡದ ಬಗ್ಗೆ ಆಯ್ಕೆಗಾರರು ಈಗಾಗಲೇ ನಿರ್ಧಾರ ತೆಗೆದುಕೊಂಡಿದ್ದಾರೆ ಎಂಬ ಚರ್ಚೆ ಜೋರಾಗಿ ನಡೆಯುತ್ತಿದೆ.