IND vs AFG 1st T20I: ಆಫ್ಘಾನಿಸ್ತಾನ ಎದುರಿನ ಮೊದಲ ಟಿ20 ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ ಪ್ರಕಟ...!

Published : Sep 12, 2026, 05:00 PM IST

ನವದೆಹಲಿ: ಭಾರತ ಹಾಗೂ ಆಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಇದೇ ಸೆಪ್ಟೆಂಬರ್ 13ರಿಂದ ಆರಂಭವಾಗಲಿದೆ. ಈ ಪಂದ್ಯಕ್ಕೆ ಭಾರತದ ಸಂಭಾವ್ಯ ತಂಡ ಹೀಗಿದೆ ನೋಡಿ.

PREV
16
ಭಾರತ-ಆಫ್ಘಾನಿಸ್ತಾನ ಟಿ20 ಸರಣಿ

ಭಾರತ-ಆಫ್ಘಾನಿಸ್ತಾನ ನಡುವಿನ ಟಿ20 ಸರಣಿಯ ಮೂರು ಪಂದ್ಯಗಳು ಇಲ್ಲಿನ ಅರುಣ್‌ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿದೆ. ಏಷ್ಯನ್ ಗೇಮ್ಸ್‌ ಮುನ್ನ ನಡೆಯಲಿರುವ ಈ ಟೂರ್ನಿಯು ಹಲವು ವಿಚಾರಗಳಿಗೆ ಮಹತ್ವದ್ದೆನಿಸಿಕೊಂಡಿದೆ. ಇದೀಗ ಆಫ್ಘಾನಿಸ್ತಾನ ಎದುರಿನ ಮೊದಲ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ ಹೇಗಿರಲಿದೆ? ಯಾರಿಗೆಲ್ಲಾ ಸ್ಥಾನ ಸಿಗಬಹುದು ಎನ್ನುವುದನ್ನು ನೋಡೋಣ ಬನ್ನಿ.

26
ಆರಂಭಿಕರಾಗಿ ವೈಭವ್-ಅಭಿಷೇಕ್ ಶರ್ಮಾ

ಆಫ್ಘಾನಿಸ್ತಾನ ಎದುರಿನ ಮೊದಲ ಟಿ20 ಪಂದ್ಯಕ್ಕೆ ಆರಂಭಿಕರಾಗಿ ವೈಭವ್ ಸೂರ್ಯವಂಶಿ ಹಾಗೂ ಅಭಿಷೇಕ್ ಶರ್ಮಾ ಇನ್ನಿಂಗ್ಸ್ ಆರಂಭಿಸುವುದು ಬಹುತೇಕ ಖಚಿತವಾಗಿದೆ. ಈ ಇಬ್ಬರು ಸ್ಪೋಟಕ ಆರಂಭಿಕರಾಗಿ ಗುರುತಿಸಿಕೊಂಡಿದ್ದಾರೆ. ಹೀಗಾದಲ್ಲಿ ಸಂಜು ಸ್ಯಾಮ್ಸನ್ ಮೂರನೇ ಕ್ರಮಾಂಕದಲ್ಲಿ ಮೈದಾನಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ.

36
ಮೂರನೇ ಕ್ರಮಾಂಕದಲ್ಲಿ ಸಂಜು ಸ್ಯಾಮ್ಸನ್‌ಗೆ ಚಾನ್ಸ್

ಜಿಂಬಾಬ್ವೆ ಎದುರಿನ ಸರಣಿಯಿಂದ ಸಂಜು ಸ್ಯಾಮ್ಸನ್ ಹೊರಗುಳಿದಿದ್ದರು. ಇದೀಗ ಆಫ್ಘಾನಿಸ್ತಾನ ಎದುರಿನ ಸರಣಿಯಲ್ಲಿ ಸಂಜು ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯುವುದು ಬಹುತೇಕ ಖಚಿತ ಎನಿಸಿದೆ. ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಮತ್ತೋರ್ವ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ಸ್ಥಾನ ಪಡೆಯಲಿದ್ದಾರೆ. ಇಶಾನ್ ಕಿಶನ್ ಇತ್ತೀಚೆಗಷ್ಟೇ ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಆಕರ್ಷಕ ದ್ವಿಶತಕ ಸಿಡಿಸಿ ಮಿಂಚಿದ್ದರು.

46
ಬಲಿಷ್ಠವಾಗಿದೆ ಮಧ್ಯಮ ಕ್ರಮಾಂಕ

ಇನ್ನು ಮಧ್ಯಮ ಕ್ರಮಾಂಕದಲ್ಲಿ ನಾಯಕ ಶ್ರೇಯಸ್ ಅಯ್ಯರ್ ಐದನೇ ಹಾಗೂ ಉಪನಾಯಕ ತಿಲಕ್ ವರ್ಮಾ ಆರನೇ ಕ್ರಮಾಂಕದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆದರೆ ಶಿವಂ ದುಬೆ ಅವರ ಸೆಲೆಕ್ಷನ್ ವಿಚಾರದಲ್ಲಿ ಟೀಮ್ ಮ್ಯಾನೇಜ್‌ಮೆಂಟ್ ಕೊಂಚ ತಲೆಕೆಡಿಸಿಕೊಂಡಂತಿದೆ.

56
ನಿತೀಶ್ ಕುಮಾರ್ ರೆಡ್ಡಿಗೆ ಚಾನ್ಸ್?

ಹೌದು, ಇತ್ತೀಚಿಗಿನ ಕೆಲ ಪಂದ್ಯದಲ್ಲಿ ಶಿವಂ ದುಬೆ ಸ್ಥಿರ ಪ್ರದರ್ಶನ ತೋರಲು ಪದೇ ಪದೇ ವಿಫಲವಾಗುತ್ತಿದ್ದಾರೆ. ಹೀಗಾಗಿ ದುಬೆಗೆ ವಿಶ್ರಾಂತಿ ನೀಡಿ ಮತ್ತೋರ್ವ ವೇಗದ ಬೌಲಿಂಗ್ ಆಲ್ರೌಂಡರ್ ನಿತೀಶ್ ಕುಮಾರ್ ರೆಡ್ಡಿಗೆ ಅವಕಾಶ ನೀಡುವ ಸಾಧ್ಯತೆಯಿದೆ. ಹೀಗಾದಲ್ಲಿ ತಂಡ ಮತ್ತಷ್ಟು ಸಮತೋಲಿತವಾಗಿ ಕಂಡು ಬರಲಿದೆ.

ಇನ್ನುಳಿದಂತೆ 8ನೇ ಕ್ರಮಾಂಕದಲ್ಲಿ ಅಕ್ಷರ್ ಪಟೇಲ್, ಆ ಬಳಿಕ ಜಸ್ಪ್ರೀತ್ ಬುಮ್ರಾ, ಅರ್ಶದೀಪ್ ಸಿಂಗ್ ಹಾಗೂ ತಜ್ಞ ಸ್ಪಿನ್ನರ್ ರೂಪದಲ್ಲಿ ವರುಣ್ ಚಕ್ರವರ್ತಿ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಿದೆ. ಮೇಲ್ನೋಟಕ್ಕೆ ಬೌಲಿಂಗ್ ವಿಭಾಗ ಕೂಡಾ ಸಾಕಷ್ಟು ಬಲಿಷ್ಠವಾಗಿ ಗುರುತಿಸಿಕೊಂಡಿದೆ.

66
ಆಫ್ಘಾನಿಸ್ತಾನ ಎದುರಿನ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ:

ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಅರ್ಶದೀಪ್ ಸಿಂಗ್, ವರುಣ್ ಚಕ್ರವರ್ತಿ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories