ಬೆಂಗಳೂರು: ಭಾರತ ಹಾಗೂ ಜಿಂಬಾಬ್ವೆ ನಡುವಿನ ಮೂರು ಪಂದ್ಯಗಳ ಟಿ20 ಸರಣಿ ನಡೆಯುತ್ತಿರುವ ಬೆನ್ನಲ್ಲೇ ಮತ್ತೊಂದು ಟಿ20 ಸರಣಿ ಘೋಷಣೆಯಾಗಿದೆ. ಇದೀಗ ಭಾರತದಲ್ಲಿ ಬ್ಯಾಕ್ ಟು ಬ್ಯಾಕ್ ಮೂರು ಟಿ20 ಪಂದ್ಯಗಳು ನಡೆಯಲಿವೆ. ಈ ಕುರಿತಾದ ಡೀಟೈಲ್ಸ್ ಇಲ್ಲಿದೆ ನೋಡಿ.
ಭಾರತ ಹಾಗೂ ಆಫ್ಘಾನಿಸ್ತಾನ ನಡುವೆ ಈಗಾಗಲೇ ಟೆಸ್ಟ್ ಹಾಗೂ ಏಕದಿನ ಪಂದ್ಯಗಳ ಸರಣಿ ಯಶಸ್ವಿಯಾಗಿ ಮುಕ್ತಾಯವಾಗಿದೆ. ಇದೀಗ ಆಪ್ಘಾನಿಸ್ತಾನ ಕ್ರಿಕೆಟ್ ಮಂಡಳಿಯು ಭಾರತದಲ್ಲಿ ಭಾರತ ವಿರುದ್ದ ಮೂರು ಪಂದ್ಯಗಳ ಟಿ20 ಸರಣಿಗೆ ಆತಿಥ್ಯ ವಹಿಸಿದೆ. ಸದ್ಯ ಭಾರತ ತಂಡವು ಜಿಂಬಾಬ್ವೆ ಎದುರಿನ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಪಾಲ್ಗೊಂಡಿದೆ. ಇದಾದ ಬಳಿಕ ಶ್ರೀಲಂಕಾ ಎದುರು ಟೆಸ್ಟ್ ಸರಣಿಯನ್ನು ಆಡಲಿದೆ. ಆ ಬಳಿಕ ಒಂದು ತಿಂಗಳು ಕಾಲಾವಕಾಶ ಇರಲಿದೆ. ಈ ಸಂದರ್ಭದಲ್ಲಿ ಭಾರತ ತಂಡವು, ತವರಿನಲ್ಲಿ ಆಫ್ಘಾನಿಸ್ತಾನ ಎದುರು ಮೂರು ಪಂದ್ಯಗಳ ಟಿ20 ಸರಣಿಯನ್ನಾಡಲಿದೆ.
26
ಡೆಲ್ಲಿಯಲ್ಲಿ ಬ್ಯಾಕ್ ಟು ಬ್ಯಾಕ್ ಮ್ಯಾಚ್
Cricinfo ವರದಿಯ ಪ್ರಕಾರ, ಭಾರತ ಹಾಗೂ ಆಫ್ಘಾನಿಸ್ತಾನ ನಡುವಿನ ಟಿ20 ಸರಣಿಯು ಸೆಪ್ಟೆಂಬರ್ ತಿಂಗಳಿನಲ್ಲಿ ಆಯೋಜನೆಯಾಗಲಿದೆ. ನವದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ಭಾರತ ತಂಡವು ಆಫ್ಘಾನಿಸ್ತಾನ ಎದುರು ಬ್ಯಾಕ್ ಟು ಬ್ಯಾಕ್ ಮೂರು ಟಿ20 ಪಂದ್ಯಗಳನ್ನು ಆಡಲಿದೆ.
36
ಯಾವಾಗ ಭಾರತ-ಆಫ್ಘಾನಿಸ್ತಾನ ಟಿ20 ಸರಣಿ ಆರಂಭ?
ಮಾಧ್ಯಮಗಳ ವರದಿ ಪ್ರಕಾರ, ಭಾರತ ಹಾಗೂ ಆಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಸೆಪ್ಟೆಂಬರ್ 13ರಂದು ನಡೆಯಲಿದೆ. ಇದಾದ ಬಳಿಕ ಸೆಪ್ಟೆಂಬರ್ 15 ಹಾಗೂ ಸೆಪ್ಟೆಂಬರ್ 17ರಂದು ಕ್ರಮವಾಗಿ ಎರಡು ಹಾಗೂ ಮೂರನೇ ಟಿ20 ಪಂದ್ಯ ನಡೆಯಲಿದೆ. ಈ ಮೂರು ಪಂದ್ಯಗಳಿಗೂ ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂ ಆತಿಥ್ಯ ವಹಿಸಲಿದೆ.
ಇನ್ನು ಭಾರತ ಹಾಗೂ ಆಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಟಿ20 ಸರಣಿ ಭಾರತದಲ್ಲೇ ಆಯೋಜನೆಗೊಂಡಿದ್ದರೂ, ಸರಣಿಯ ಆತಿಥ್ಯವನ್ನು ಆಫ್ಘಾನಿಸ್ತಾನ ವಹಿಸಿಕೊಂಡಿದೆ. ಮಾಧ್ಯಮಗಳ ವರದಿಗಳ ಪ್ರಕಾರ ಈ ಸರಣಿಯಲ್ಲಿ ಭಾರತ ಪ್ರವಾಸಿ ತಂಡವಾಗಿ ಕಾಣಿಸಿಕೊಳ್ಳಲಿದ್ದರೇ, ಆಫ್ಘಾನಿಸ್ತಾನ ಆತಿಥೇಯ ತಂಡವಾಗಿ ಮೈದಾನಕ್ಕಿಳಿಯಲಿದೆ.
56
ಏಷ್ಯನ್ ಗೇಮ್ಸ್‌ಗೂ ಮುನ್ನ ತಯಾರಿಗೆ ಸರಣಿ ಒಳ್ಳೆಯ ವೇದಿಕೆ:
ಸೆಪ್ಟೆಂಬರ್ ತಿಂಗಳ ಕೊನೆಯಲ್ಲಿ ಭಾರತ ಕ್ರಿಕೆಟ್ ತಂಡವು ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಕಾಣಿಸಿಕೊಳ್ಳಲಿದೆ. ಇದಕ್ಕೂ ಮೊದಲು ಆಫ್ಘಾನಿಸ್ತಾನ ಎದುರಿನ ಮೂರು ಪಂದ್ಯಗಳ ಟಿ20 ಸರಣಿಯನ್ನು ಟೀಂ ಇಂಡಿಯಾ ಅಭ್ಯಾಸಕ್ಕೆ ಬಳಸಿಕೊಳ್ಳುವ ಸಾಧ್ಯತೆಯಿದೆ.
66
ಭಾರತ ಎದುರು ಟೆಸ್ಟ್, ಏಕದಿನ ಸರಣಿ ಸೋತಿರುವ ಆಫ್ಘಾನಿಸ್ತಾನ:
2026ರ ಐಪಿಎಲ್ ಬಳಿಕ ಆಫ್ಘಾನಿಸ್ತಾನವು ಭಾರತ ಪ್ರವಾಸ ಕೈಗೊಂಡಿತ್ತು. ಈ ವೇಳೆ ಭಾರತ ಎದುರು ಏಕೈಕ ಟೆಸ್ಟ್ ಹಾಗೂ 3 ಪಂದ್ಯಗಳ ಟಿ20 ಸರಣಿಯನ್ನಾಡಿತ್ತು. ಗಿಲ್ ನೇತೃತ್ವದ ಟೀಂ ಇಂಡಿಯಾ, ಟೆಸ್ಟ್ ಸರಣಿಯನ್ನು 1-0, ಏಕದಿನ ಸರಣಿಯನ್ನು 3-0 ಅಂತರದಲ್ಲಿ ಜಯಿಸಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.