ಬೆಂಗಳೂರು: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಗೆ ಈಗಾಗಲೇ ಅಧಿಕೃತ ಚಾಲನೆ ಸಿಕ್ಕಿದ್ದು, ಆತಿಥೇಯ ಆಸ್ಟ್ರೇಲಿಯಾ ಶುಭಾರಂಭ ಮಾಡಿದೆ. ಇದೀಗ ಎರಡನೇ ಏಕದಿನ ಪಂದ್ಯ ಯಾವಾಗ ಎನ್ನುವ ಕುತೂಹಲ ಜೋರಾಗಿದೆ.
ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಕಳೆದ ಭಾನುವಾರ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಮಿಚೆಲ್ ಮಾರ್ಚ್ ನೇತೃತ್ವದ ಆತಿಥೇಯ ಆಸ್ಟ್ರೇಲಿಯಾ ತಂಡವು ಡೆಕ್ವರ್ತ್ ಲೂಯಿಸ್ ನಿಯಮದನ್ವಯ 7 ವಿಕೆಟ್ ಸುಲಭ ಜಯ ಸಾಧಿಸಿದೆ. ಈ ಮೂಲಕ 3 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
26
ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ವೈಫಲ್ಯ
ಮಳೆ ಬಾಧಿತ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟರ್‌ಗಳು ಹಾಗೂ ಬೌಲರ್‌ಗಳು ದಯನೀಯ ವೈಫಲ್ಯ ಅನುಭವಿಸಿದರು. ಹೀಗಾಗಿ ಸರಣಿ ಗೆಲ್ಲುವ ಕನಸು ಜೀವಂತವಾಗಿಟ್ಟುಕೊಳ್ಳಬೇಕಿದ್ದರೇ, ಎರಡನೇ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡಕ್ಕೆ ಟೀಂ ಇಂಡಿಯಾ ಸಿಲುಕಿದೆ.
36
ಅಗ್ರಕ್ರಮಾಂಕದ ಬ್ಯಾಟರ್‌ಗಳು ಫೇಲ್
ಅದರಲ್ಲೂ ಟೀಂ ಇಂಡಿಯಾ ಅಗ್ರಕ್ರಮಾಂಕದ ಬ್ಯಾಟರ್‌ಗಳಾದ ರೋಹಿತ್ ಶರ್ಮಾ, ಶುಭ್‌ಮನ್ ಗಿಲ್, ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಬ್ಯಾಟಿಂಗ್ ವೈಫಲ್ಯ ಭಾರತ ತಂಡಕ್ಕೆ ದೊಡ್ಡ ಹಿನ್ನಡೆ ಎನಿಸಿದ್ದು, ಎರಡನೇ ಪಂದ್ಯದಲ್ಲಿ ಕಮ್‌ಬ್ಯಾಕ್ ಮಾಡುವ ನಿರೀಕ್ಷೆಯಲ್ಲಿದ್ದಾರೆ.
ಎರಡನೇ ಏಕದಿನ ಪಂದ್ಯವು ಅಕ್ಟೋಬರ್ 23ರ ಗುರುವಾರದಂದು ಅಡಿಲೇಡ್ ಓವಲ್ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯ ಕೂಡಾ ಭಾರತೀಯ ಕಾಲಮಾನ ಬೆಳಗ್ಗೆ 9 ಗಂಟೆಯಿಂದ ಆರಂಭವಾಗಲಿದೆ. ಟಾಸ್ ಪ್ರಕ್ರಿಯೆ ಬೆಳಗ್ಗೆ 8.30ಕ್ಕೆ ನಡೆಯಲಿದೆ.
56
ಸ್ಟಾರ್ ಸ್ಪೋರ್ಟ್ಸ್-ಜಿಯೋ ಹಾಟ್‌ಸ್ಟಾರ್‌ನಲ್ಲಿ ನೇರ ಪ್ರಸಾರ
ಇನ್ನು ಈ ಪಂದ್ಯವು ಸ್ಟಾರ್ ಸ್ಪೋರ್ಟ್ಸ್ ವಾಹಿನಿಯಲ್ಲಿ ನೇರಪ್ರಸಾರವಾಗಲಿದೆ. ಇದರ ಜತೆಗೆ ಓಟಿಟಿಯಲ್ಲಿ ಜಿಯೋ ಹಾಟ್‌ಸ್ಟಾರ್‌ನಲ್ಲೂ ಈ ಪಂದ್ಯವನ್ನು ನೀವು ಬೆರಳ ತುದಿಯಲ್ಲಿ ವೀಕ್ಷಿಸಬಹುದಾಗಿದೆ.
66
ಎರಡನೇ ಪಂದ್ಯಕ್ಕೆ ಕ್ಷಣಗಣನೆ
ಕಳೆದ ಪಂದ್ಯ ಮಳೆಯಿಂದಾಗಿ ಕೇವಲ 26 ಓವರ್‌ಗಳ ಮ್ಯಾಚ್‌ಗೆ ಸಾಕ್ಷಿಯಾಗಿತ್ತು. ಇದೀಗ ಅಡಿಲೇಡ್‌ನ ಪಿಚ್ ವಾತಾವರಣ ಪೂರ್ಣ ಪ್ರಮಾಣದ ಮ್ಯಾಚ್‌ಗೆ ಸಾಕ್ಷಿಯಾಗುವ ನಿರೀಕ್ಷೆಯಿದ್ದು, ಹೈವೋಲ್ಜೇಜ್ ಮ್ಯಾಚ್ ಕಣ್ತುಂಬಿಕೊಳ್ಳಲು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ.