Ind vs Aus: ಆಸ್ಟ್ರೇಲಿಯಾ ಎದುರಿನ ನಿರ್ಣಾಯಕ ಟಿ20 ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಎರಡು ಮಹತ್ವದ ಬದಲಾವಣೆ..?

First Published Sep 25, 2022, 12:25 PM IST

ಹೈದರಾಬಾದ್‌(ಸೆ.25): ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೂರನೇ ಹಾಗೂ ನಿರ್ಣಾಯಕ ಟಿ20 ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಮೊಹಾಲಿ ಪಂದ್ಯ ಗೆದ್ದು ಬೀಗಿದ್ದ ಆಸ್ಟ್ರೇಲಿಯಾ ತಂಡಕ್ಕೆ ನಾಗ್ಪುರದಲ್ಲಿ ಟೀಂ ಇಂಡಿಯಾ ತಿರುಗೇಟು ನೀಡಿತ್ತು. ಇದೀಗ ಮೂರನೇ ಹಾಗೂ ನಿರ್ಣಾಯಕ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಎರಡು ಮಹತ್ವದ ಬದಲಾವಣೆಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ. 
 

1. ರೋಹಿತ್ ಶರ್ಮಾ:

ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಎರಡನೇ ಟಿ20 ಪಂದ್ಯದಲ್ಲಿ ಕೇವಲ 20 ಎಸೆತಗಳಲ್ಲಿ ಸ್ಪೋಟಕ 46 ರನ್‌ ಬಾರಿಸುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೀಗ ನಿರ್ಣಾಯಕ ಟಿ20 ಪಂದ್ಯದಲ್ಲೂ ಅಬ್ಬರಿಸಲು ಹಿಟ್‌ಮ್ಯಾನ್ ಹಾತೊರೆಯುತ್ತಿದ್ದಾರೆ.
 

2. ಕೆ ಎಲ್ ರಾಹುಲ್‌:

ಟೀಂ ಇಂಡಿಯಾ ಮತ್ತೋರ್ವ ಆರಂಭಿಕ ಬ್ಯಾಟರ್ ರಾಹುಲ್‌, ಸ್ಪೋಟಕ ಬ್ಯಾಟಿಂಗ್ ಮೂಲಕ ಮಿಂಚಿದ್ದು, ತಮ್ಮ ಲಯವನ್ನು ಮುಂದುವರೆಸಿಕೊಂಡು ಹೋಗಲು ಎದುರು ನೋಡುತ್ತಿದ್ದಾರೆ.

3. ವಿರಾಟ್ ಕೊಹ್ಲಿ:

ಏಷ್ಯಾಕಪ್ ಟೂರ್ನಿಯಲ್ಲಿ ಅಬ್ಬರಿಸಿದ್ದ ವಿರಾಟ್ ಕೊಹ್ಲಿ, ಆಸೀಸ್‌ ಸರಣಿಯಲ್ಲಿ ದೊಡ್ಡ ಮೊತ್ತ ಪೇರಿಸಲು ವಿಫಲವಾಗಿದ್ದರು. ಇದೀಗ ಕೊನೆಯ ಪಂದ್ಯದಲ್ಲಿ ಕೊಹ್ಲಿಯಿಂದ ಅಭಿಮಾನಿಗಳು ದೊಡ್ಡ ಇನಿಂಗ್ಸ್ ನಿರೀಕ್ಷಿಸುತ್ತಿದ್ದಾರೆ.

4. ಸೂರ್ಯಕುಮಾರ್ ಯಾದವ್:

ಟೀಂ ಇಂಡಿಯಾ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಬೆನ್ನೆಲುಬು ಎನಿಸಿಕೊಂಡಿರುವ ಸೂರ್ಯಕುಮಾರ್ ಯಾದವ್, ಎರಡನೇ ಟಿ20 ಪಂದ್ಯದಲ್ಲಿ ಶೂನ್ಯ ಸುತ್ತಿದರು. ಸೂರ್ಯ ಮೂರನೇ ಪಂದ್ಯದಲ್ಲಿ ಸಿಡಿಯುವ ಸಾಧ್ಯತೆಯಿದೆ.
 

5. ದಿನೇಶ್ ಕಾರ್ತಿಕ್‌:

ಕಳೆದ ಪಂದ್ಯದಲ್ಲಿ ಕೇವಲ 2 ಎಸೆತಗಳಲ್ಲಿ 10 ರನ್ ಬಾರಿಸುವ ಮೂಲಕ ಮ್ಯಾಚ್ ಫಿನಿಶ್ ಮಾಡಿದ್ದರು. ಹೀಗಾಗಿ ಪಂತ್ ಹಿಂದಿಕ್ಕಿ ಕಾರ್ತಿಕ್‌ ಅಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಉಳಿಸಿಕೊಳ್ಳುವುದು ಬಹುತೇಕ ಖಚಿತ ಎನಿಸಿದೆ.
 

6. ಹಾರ್ದಿಕ್ ಪಾಂಡ್ಯ:

ಟೀಂ ಇಂಡಿಯಾ ಆಲ್ರೌಂಡರ್ ಹಾರ್ದಿಕ್‌ ಪಾಂಡ್ಯ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ತಂಡಕ್ಕೆ ಆಸರೆಯಾಗುವ ಕ್ಷಮತೆಹೊಂದಿದ್ದು, ಮತ್ತೊಮ್ಮೆ ಮಿಂಚಲು ಹಾತೊರೆಯುತ್ತಿದ್ದಾರೆ.

7. ಅಕ್ಷರ್ ಪಟೇಲ್‌:

ರವೀಂದ್ರ ಜಡೇಜಾ ಅನುಪಸ್ಥಿತಿಯಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದಿರುವ ಅಕ್ಷರ್ ಪಟೇಲ್‌, ಬೌಲಿಂಗ್‌ನಲ್ಲಿ ಆಸೀಸ್‌ ಬ್ಯಾಟರ್‌ಗಳನ್ನು ಕಾಡುತ್ತಿದ್ದಾರೆ. ಬ್ಯಾಟಿಂಗ್‌ನಲ್ಲಿ ಮಿಂಚಲು ಅಕ್ಷರ್ ಅವಕಾಶಕ್ಕಾಗಿ ಕಾಯುತ್ತಿದ್ದಾರೆ.
 

8. ಭುವನೇಶ್ವರ್ ಕುಮಾರ್:

ಆಸ್ಟ್ರೇಲಿಯಾ ಎದುರು ಭಾರತೀಯ ಬೌಲರ್‌ಗಳ ದಯನೀಯ ವೈಫಲ್ಯ ಅನುಭವಿಸುತ್ತಿದ್ದಾರೆ. ಹೀಗಾಗಿ ರಿಷಭ್‌ ಪಂತ್ ಅವರಿಗೆ ವಿಶ್ರಾಂತಿ ನೀಡಿ ಭುವಿಗೆ ಮಣೆ ಹಾಕುವ ಸಾಧ್ಯತೆಯಿದೆ.

9. ಹರ್ಷಲ್‌ ಪಟೇಲ್‌:

ಡೆತ್ ಓವರ್ ಸ್ಪೆಷಲಿಸ್ಟ್ ಎನಿಸಿಕೊಂಡಿರುವ ಹರ್ಷಲ್ ಪಟೇಲ್‌ ಸಾಕಷ್ಟು ದುಬಾರಿ ಎನಿಸಿಕೊಂಡಿದ್ದು, ಕೊನೆಯ ಪಂದ್ಯದಲ್ಲಿ ಮತ್ತೊಂದು ಅವಕಾಶ ಸಿಗುವ ಸಾಧ್ಯತೆಯಿದೆ.

10. ರವಿಚಂದ್ರನ್ ಅಶ್ವಿನ್‌:

ಯುಜುವೇಂದ್ರ ಚಹಲ್‌ ಮೊದಲೆರಡು ಪಂದ್ಯಗಳಲ್ಲಿ ದುಬಾರಿಯಾಗಿದ್ದಾರೆ. ಹೀಗಾಗಿ ಅನುಭವಿ ಆಫ್‌ಸ್ಪಿನ್ನರ್ ಆರ್ ಅಶ್ವಿನ್‌ಗೆ ಮಣೆಹಾಕುವ ಸಾಧ್ಯತೆಯಿದೆ.
 

11. ಜಸ್ಪ್ರೀತ್ ಬುಮ್ರಾ:

ಗಾಯದ ಸಮಸ್ಯೆಯ ಬಳಿಕ ತಂಡ ಕೂಡಿಕೊಂಡಿರುವ ಬುಮ್ರಾ ಕರಾರುವಕ್ಕಾದ ಯಾರ್ಕರ್ ಮೂಲಕ ಗಮನ ಸೆಳೆದಿದ್ದು, ಮತ್ತೊಮ್ಮೆ ಆಸೀಸ್‌ ಬ್ಯಾಟರ್‌ಗಳನ್ನು ಕಾಡಲು ಸಜ್ಜಾಗಿದ್ದಾರೆ.

click me!