ಭಾರತ-ಆಸ್ಟ್ರೇಲಿಯಾ ಏಕದಿನ ಸರಣಿ: ಎಷ್ಟು ಗಂಟೆಗೆ ಪಂದ್ಯ ಆರಂಭ? ಯಾವ ಚಾನೆಲ್‌ನಲ್ಲಿ ನೋಡಬಹುದು?

Published : Oct 17, 2025, 04:32 PM IST

ಬೆಂಗಳೂರು: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಆರಂಭಕ್ಕೆ ಇದೀಗ ಕ್ಷಣಗಣನೆ ಆರಂಭವಾಗಿದೆ. ಅಕ್ಟೋಬರ್ 19ರಿಂದ 3 ಪಂದ್ಯಗಳ ಸರಣಿ ಆರಂಭವಾಗಲಿದ್ದು, ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ? ಯಾವ ಚಾನೆಲ್‌ನಲ್ಲಿ ವೀಕ್ಷಿಸಬಹುದು ನೋಡೋಣ ಬನ್ನಿ. 

PREV
17
ಕಾಂಗರೂ ನಾಡಿಗೆ ಬಂದಿಳಿದ ಭಾರತ

ಭಾರತ ಕ್ರಿಕೆಟ್ ತಂಡವು ಈಗಾಗಲೇ ಅಸ್ಟ್ರೇಲಿಯಾಗೆ ಬಂದಿಳಿದಿದೆ. ಆಸೀಸ್ ಪ್ರವಾಸದಲ್ಲಿ ಭಾರತ ತಂಡವು ಮೂರು ಪಂದ್ಯಗಳ ಏಕದಿನ ಸರಣಿ ಹಾಗೂ 5 ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ.

27
ಅಕ್ಟೋಬರ್ 19ರಿಂದ ಏಕದಿನ ಸರಣಿ ಆರಂಭ

ಆಸೀಸ್ ಎದುರು ಅಕ್ಟೋಬರ್ 19, 23 ಹಾಗೂ 25ರಂದು ಕ್ರಮವಾಗಿ ಪರ್ತ್, ಅಡಿಲೇಡ್ ಹಾಗೂ ಸಿಡ್ನಿಯಲ್ಲಿ ಮೂರು ಪಂದ್ಯಗಳ ಏಕದಿನ ಸರಣಿಯನ್ನಾಡಲಿದೆ. ಇದಾದ ಬಳಿಕ ಟಿ20 ಸರಣಿ ಆರಂಭವಾಗಲಿದೆ.

37
ಬೆಳಗ್ಗೆ 9 ಗಂಟೆಯಿಂದ ಪಂದ್ಯ ಆರಂಭ

ಇನ್ನು ಏಕದಿನ ಪಂದ್ಯಗಳು ಭಾರತೀಯ ಕಾಲಮಾನ ಬೆಳಗ್ಗೆ 9 ಗಂಟೆಯಿಂದ ಆರಂಭವಾಗಲಿದೆ. ಇದಕ್ಕೂ ಅರ್ಧಗಂಟೆ ಮುಂಚಿತವಾಗಿ ಅಂದರೆ ಬೆಳಗ್ಗೆ 8.30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ.

47
ಸ್ಟಾರ್ ಸ್ಪೋಟ್ಸ್‌ ವಾಹಿನಿಯಲ್ಲಿ ನೇರ ಪ್ರಸಾರ

ಈ ಎಲ್ಲಾ ಪಂದ್ಯಗಳ ನೇರ ಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್‌ ವಾಹಿನಿಯಲ್ಲಿ ವೀಕ್ಷಿಸಬಹುದು. ಇನ್ನು ಜಿಯೋ ಸಿನಿಮಾ ಓಟಿಟಿ ಅಪ್ಲಿಕೇಷನ್‌ನಲ್ಲಿ ಈ ಪಂದ್ಯಗಳನ್ನು ವೀಕ್ಷಿಸಬಹುದಾಗಿದೆ.

57
ಚಾಂಪಿಯನ್ಸ್ ಟ್ರೋಫಿ ಬಳಿಕ ರೋಹಿತ್-ಕೊಹ್ಲಿ ಕಣಕ್ಕೆ

2025ರ ಮಾರ್ಚ್‌ನಲ್ಲಿ ನಡೆದಿದ್ದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಬಳಿಕ ಇದೇ ಮೊದಲ ಬಾರಿಗೆ ಟೀಂ ಇಂಡಿಯಾ ದಿಗ್ಗಜ ಕ್ರಿಕೆಟಿಗರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಟೀಂ ಇಂಡಿಯಾ ಜೆರ್ಸಿಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

67
ಗಿಲ್‌ಗೆ ಏಕದಿನ ನಾಯಕತ್ವ ಪಟ್ಟ

ಇದೀಗ ಆಸ್ಟ್ರೇಲಿಯಾ ಎದುರಿನ ಸರಣಿಗೂ ಮುನ್ನ ರೋಹಿತ್ ಶರ್ಮಾ ಕೆಳಗಿಳಿಸಿ ಶುಭ್‌ಮನ್ ಗಿಲ್‌ಗೆ ನಾಯಕತ್ವ ಪಟ್ಟ ಕಟ್ಟಲಾಗಿದೆ. ಇನ್ನು ಟಿ20 ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.

77
ಕೊಹ್ಲಿ-ರೋಹಿತ್ ನಿವೃತ್ತಿ?

ಆಸ್ಟ್ರೇಲಿಯಾ ಎದುರಿನ ಸರಣಿಯ ಬಳಿಕ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಲಿದ್ದಾರೆ ಎನ್ನುವಂತಹ ಚರ್ಚೆ ಜೋರಾಗಿದೆ. ಆದರೆ ಈ ಬಗ್ಗೆ ಯಾರಿಗೂ ಯಾವುದೇ ಖಚಿತ ಮಾಹಿತಿಯಿಲ್ಲ.

Read more Photos on
click me!

Recommended Stories