ಮುಂಬೈ(ಮಾ.16): ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯವು ಮಾರ್ಚ್ 17ರಂದು ಮುಂಬೈನ ವಾಂಖೆಡೆ ಮೈದಾನದಲ್ಲಿ ಜರುಗಲಿದ್ದು, ಸರಣಿಯಲ್ಲಿ ಶುಭಾರಂಭ ಮಾಡಲು ಆತಿಥೇಯ ಟೀಂ ಇಂಡಿಯಾ ಸಜ್ಜಾಗಿದೆ. ಮೊದಲ ಏಕದಿನ ಪಂದ್ಯಕ್ಕೆ ನಾಯಕ ರೋಹಿತ್ ಶರ್ಮಾ ವೈಯುಕ್ತಿಕ ಕಾರಣದಿಂದ ಅಲಭ್ಯರಾಗಿದ್ದು, ರೋಹಿತ್ ಅನುಪಸ್ಥಿತಿಯಲ್ಲಿ ಹಾರ್ದಿಕ್ ಪಾಂಡ್ಯ, ಮೊದಲ ಬಾರಿಗೆ ಭಾರತ ಏಕದಿನ ತಂಡವನ್ನು ನಾಯಕರಾಗಿ ಮುನ್ನಡೆಸಲಿದ್ದಾರೆ. ಮೊದಲ ಏಕದಿನ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ ಹೀಗಿದೆ ನೋಡಿ.
ಟೀಂ ಇಂಡಿಯಾ ಪ್ರತಿಭಾನ್ವಿತ ಆರಂಭಿಕ ಬ್ಯಾಟರ್ ಶುಭ್‌ಮನ್ ಗಿಲ್, ತಮ್ಮ ಕ್ರಿಕೆಟ್ ವೃತ್ತಿಜೀವನದ ರೆಡ್ ಹಾಟ್ ಫಾರ್ಮ್‌ನಲ್ಲಿದ್ದು, ಮೂರು ಮಾದರಿಯಲ್ಲೂ ರನ್ ಸುರಿಮಳೆ ಹರಿಸುತ್ತಿದ್ದಾರೆ. ಇದೀಗ ಗಿಲ್ ಮತ್ತೆ ಏಕದಿನ ಕ್ರಿಕೆಟ್‌ನಲ್ಲಿ ಮಿಂಚಲು ರೆಡಿಯಾಗಿದ್ದಾರೆ.
211
2. ಇಶಾನ್ ಕಿಶನ್:
ಕೆಲ ತಿಂಗಳ ಹಿಂದಷ್ಟೇ ಏಕದಿನ ಕ್ರಿಕೆಟ್‌ನಲ್ಲಿ ದ್ವಿಶತಕ ಚಚ್ಚಿದ್ದ ಇಶಾನ್ ಕಿಶನ್, ಇದೀಗ ನಾಯಕ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಆರಂಭಿಕನಾಗಿ ಕಣಕ್ಕಿಳಿಯಲಿದ್ದು, ಈ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳಲು ತುದಿಗಾಲಿನಲ್ಲಿ ನಿಂತಿದ್ದಾರೆ.
311
3. ವಿರಾಟ್ ಕೊಹ್ಲಿ:
ಮಾಜಿ ನಾಯಕ ವಿರಾಟ್ ಕೊಹ್ಲಿ, ಟೀಂ ಇಂಡಿಯಾ ರನ್ ಮಷೀನ್ ಎನಿಸಿಕೊಂಡಿದ್ದು, ಆಸ್ಟ್ರೇಲಿಯಾ ಎದುರು ಉತ್ತಮ ಟ್ರ್ಯಾಕ್ ರೆಕಾರ್ಡ್ ಹೊಂದಿದ್ದಾರೆ. ಮುಂಬೈನಲ್ಲಿ ಕೊಹ್ಲಿ, ಮತ್ತೊಮ್ಮೆ ಮೂರಂಕಿ ಮೊತ್ತ ದಾಖಲಿಸಲು ಎದುರು ನೋಡುತ್ತಿದ್ದಾರೆ.
411
4. ಸೂರ್ಯಕುಮಾರ್ ಯಾದವ್:
ಶ್ರೇಯಸ್ ಅಯ್ಯರ್ ಗಾಯದ ಸಮಸ್ಯೆಯಿಂದಾಗಿ ಈ ಸರಣಿಯಿಂದ ಹೊರಬಿದ್ದಿದ್ದು, ಅಯ್ಯರ್ ಅನುಪಸ್ಥಿತಿಯನ್ನು ಸೂರ್ಯಕುಮಾರ್ ಯಾದವ್ ಯಾವ ರೀತಿ ಬಳಸಿಕೊಳ್ಳುತ್ತಾರೆ ಎನ್ನುವ ಕುತೂಹಲ ಕ್ರಿಕೆಟ್ ಅಭಿಮಾನಿಗಳಲ್ಲಿದೆ.
511
5. ಕೆ ಎಲ್ ರಾಹುಲ್:
ಟೆಸ್ಟ್ ಕ್ರಿಕೆಟ್‌ನಲ್ಲಿ ದಯನೀಯ ಬ್ಯಾಟಿಂಗ್ ವೈಫಲ್ಯ ಅನುಭವಿಸಿ ಟೆಸ್ಟ್ ತಂಡದಿಂದ ಹೊರಬಿದ್ದಿದ್ದ, ಕೆ ಎಲ್ ರಾಹುಲ್, ಇದೀಗ ಏಕದಿನ ಕ್ರಿಕೆಟ್‌ನಲ್ಲಿ ಫಾರ್ಮ್‌ಗೆ ಮರಳಲು ಇದು ಸುವರ್ಣಾವಕಾಶವಾಗಿದೆ.
611
6. ಹಾರ್ದಿಕ್ ಪಾಂಡ್ಯ
ತಾರಾ ಆಲ್ರೌಂಡರ್ ಪಾಂಡ್ಯ, ಮೊದಲ ಬಾರಿಗೆ ನಾಯಕನಾಗಿ ಭಾರತ ಏಕದಿನ ತಂಡವನ್ನು ಮುನ್ನಡೆಸುತ್ತಿದ್ದು, ಬಲಿಷ್ಠ ಆಸ್ಟ್ರೇಲಿಯಾ ಎದುರು ನಾಯಕನಾಗಿ ಹಾಗೂ ಆಟಗಾರನಾಗಿ ಯಶಸ್ವಿಯಾಗಬೇಕಾದ ದೊಡ್ಡ ಜವಾಬ್ದಾರಿಯಿದೆ.
711
7. ರವೀಂದ್ರ ಜಡೇಜಾ:
ಟೀಂ ಇಂಡಿಯಾ ಮತ್ತೋರ್ವ ಸ್ಟಾರ್ ಆಲ್ರೌಂಡರ್, ಸಾಕಷ್ಟು ಸಮಯದ ಬಳಿಕ ಸೀಮಿತ ಓವರ್‌ಗಳ ಕ್ರಿಕೆಟ್‌ಗೆ ಕಮ್‌ಬ್ಯಾಕ್ ಮಾಡುತ್ತಿದ್ದು, ಟೆಸ್ಟ್ ಕ್ರಿಕೆಟ್‌ನಲ್ಲಿ ತೋರಿದ ಆಲ್ರೌಂಡ್ ಪ್ರದರ್ಶನ ಮುಂದುವರೆಸುವ ವಿಶ್ವಾಸದಲ್ಲಿದ್ದಾರೆ.
811
8. ಕುಲ್ದೀಪ್ ಯಾದವ್:
ಟೀಂ ಇಂಡಿಯಾ ಅನುಭವಿ ಲೆಗ್‌ಸ್ಪಿನ್ನರ್ ಕುಲ್ದೀಪ್ ಯಾದವ್, ಸದ್ಯ ಉತ್ತಮ ಫಾರ್ಮ್‌ನಲ್ಲಿದ್ದು, ಐಪಿಎಲ್‌ಗೂ ಮುನ್ನ ಭರ್ಜರಿ ಪ್ರದರ್ಶನ ತೋರುವ ನಿರೀಕ್ಷೆಯಲ್ಲಿದ್ದಾರೆ.
911
9. ಮೊಹಮ್ಮದ್ ಶಮಿ:
ಟೀಂ ಇಂಡಿಯಾ ಅನುಭವಿ ವೇಗಿ ಮೊಹಮ್ಮದ್ ಶಮಿ, ಟೆಸ್ಟ್ ಕ್ರಿಕೆಟ್‌ನಲ್ಲಿ ಮಾರಕ ದಾಳಿ ನಡೆಸಿದ್ದರು. ಇದೀಗ ಬುಮ್ರಾ ಅನುಪಸ್ಥಿತಿಯಲ್ಲಿ ವೇಗದ ದಾಳಿಯ ಮುಂಚೂಣಿ ವಹಿಸಲಿದ್ದಾರೆ.
1011
10. ಮೊಹಮ್ಮದ್ ಸಿರಾಜ್:
ಏಕದಿನ ಕ್ರಿಕೆಟ್‌ನ ನಂ.1 ವೇಗಿ ಮೊಹಮ್ಮದ್ ಸಿರಾಜ್, ಕೊನೆಯ ಟೆಸ್ಟ್ ಪಂದ್ಯದಲ್ಲಿ ವಿಶ್ರಾಂತಿ ಪಡೆದಿದ್ದರು. ಇದೀಗ ಹೊಸ ಹುರುಪಿನಲ್ಲಿ ಆಸೀಸ್ ಬ್ಯಾಟರ್‌ಗಳನ್ನು ಕಾಡಲು ರೆಡಿಯಾಗಿದ್ದಾರೆ.
1111
11. ಉಮ್ರಾನ್ ಮಲಿಕ್:
ಜಮ್ಮು ಕಾಶ್ಮೀರ ಮೂಲದ ಮಾರಕ ವೇಗಿ ಉಮ್ರಾನ್ ಮಲಿಕ್, ತಮ್ಮ ಮಾರಕ ದಾಳಿಯ ಮೂಲಕವೇ ಮಿಂಚುತ್ತಿದ್ದು, ಆಸ್ಟ್ರೇಲಿಯಾ ಎದುರಿನ ಸರಣಿಯಲ್ಲಿ ತಮ್ಮ ಪ್ರತಿಭೆ ಮತ್ತೊಮ್ಮೆ ಅನಾವರಣ ಮಾಡಲು ರೆಡಿಯಾಗಿದ್ದಾರೆ.