Ind vs Ban ಬಾಂಗ್ಲಾದೇಶ ಎದುರಿನ ಎರಡನೇ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಒಂದು ಮಹತ್ತರ ಬದಲಾವಣೆ..?

Published : Dec 06, 2022, 05:52 PM IST

ಮೀರ್‌ಪುರ್(ಡಿ.06): ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಆಘಾತಕಾರಿ ಸೋಲು ಅನುಭವಿಸಿದೆ. ಹೀಗಾಗಿ ಸರಣಿ ಗೆಲ್ಲುವ ಕನಸನ್ನು ಜೀವಂತವಾಗಿರಿಸಿಕೊಳ್ಳಬೇಕಿದ್ದರೇ ಎರಡನೇ ಏಕದಿನ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ಡಿಸೆಂಬರ್ 07ರಂದು ನಡೆಯಲಿರುವ ಎರಡನೇ ಏಕದಿನ ಪಂದ್ಯಕ್ಕೆ ಭಾರತದ ಸಂಭಾವ್ಯ ತಂಡ ಹೀಗಿದೆ ನೋಡಿ.

PREV
111
Ind vs Ban ಬಾಂಗ್ಲಾದೇಶ ಎದುರಿನ ಎರಡನೇ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಒಂದು ಮಹತ್ತರ ಬದಲಾವಣೆ..?

1. ಶಿಖರ್ ಧವನ್: ಗಬ್ಬರ್ ಸಿಂಗ್ ಖ್ಯಾತಿಯ ಶಿಖರ್ ಧವನ್ ಮೊದಲ ಏಕದಿನ ಪಂದ್ಯದಲ್ಲಿ ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸಿ ನಿರಾಸೆ ಅನುಭವಿಸಿದ್ದರು . ಹೀಗಾಗಿ ಧವನ್ ಎರಡನೇ ಪಂದ್ಯದಲ್ಲಿ ದೊಡ್ಡ ಮೊತ್ತ ಗಳಿಸುವ ವಿಶ್ವಾಸದಲ್ಲಿದ್ದಾರೆ.
 

211

2. ರೋಹಿತ್ ಶರ್ಮಾ: ಮೊದಲ ಏಕದಿನ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ 27 ರನ್ ಬಾರಿಸಿ ಉತ್ತಮ ಆರಂಭ ಪಡೆದರಾದರೂ ಅದನ್ನು ದೊಡ್ಡ ಮೊತ್ತವನ್ನಾಗಿ ಪರಿವರ್ತಿಸಲು ವಿಫಲವಾಗಿದ್ದರು. ರೋಹಿತ್ ಶರ್ಮಾ, ಆರಂಭಿಕನಾಗಿ ಹಾಗೂ ನಾಯಕನಾಗಿ ಘರ್ಜಿಸಬೇಕಾಗಿದೆ
 

311

3. ವಿರಾಟ್ ಕೊಹ್ಲಿ: ಟೀಂ ಇಂಡಿಯಾ ರನ್ ಮಷೀನ್ ವಿರಾಟ್ ಕೊಹ್ಲಿ ಕೂಡಾ ಕಳೆದ ಪಂದ್ಯದಲ್ಲಿ ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸಿ ನಿರಾಸೆ ಅನುಭವಿಸಿದ್ದರು. ಕೊಹ್ಲಿ, ಬಾಂಗ್ಲಾದೇಶ ಎದುರು ದೊಡ್ಡ ಮೊತ್ತ ಕಲೆಹಾಕಬೇಕಿದೆ.
 

411

4. ಶ್ರೇಯಸ್ ಅಯ್ಯರ್: ಪ್ರತಿಭಾನ್ವಿತ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್, ಮೊದಲ ಏಕದಿನ ಪಂದ್ಯದಲ್ಲಿ 24 ರನ್ ಬಾರಿಸಿ ವಿಕೆಟ್ ಒಪ್ಪಿಸಿದ್ದರು. ಶ್ರೇಯಸ್ ಏಕದಿನ ಕ್ರಿಕೆಟ್‌ನಲ್ಲಿ ತಮ್ಮ ಸ್ಥಾನ ಭದ್ರಪಡಿಸಿಕೊಳ್ಳಲು ಈ ಸರಣಿಯನ್ನು ಸರಿಯಾಗಿ ಬಳಸಿಕೊಳ್ಳಬೇಕಿದೆ.

511

5. ಕೆ ಎಲ್ ರಾಹುಲ್: ವಿಕೆಟ್ ಕೀಪರ್ ಬ್ಯಾಟರ್ ರಾಹುಲ್, ಮೊದಲ ಏಕದಿನ ಪಂದ್ಯದಲ್ಲಿ ಆಕರ್ಷಕ 73 ರನ್ ಬಾರಿಸುವ ಮೂಲಕ ತಂಡ ಗೌರವಾನ್ವಿತ ಮೊತ್ತ ಕಲೆಹಾಕಲು ನೆರವಾಗಿದ್ದರು. ರಾಹುಲ್ ಬ್ಯಾಟಿಂಗ್‌ ಜತೆಗೆ ವಿಕೆಟ್ ಕೀಪಿಂಗ್‌ನಲ್ಲೂ ಮಿಂಚಬೇಕಿದೆ.
 

611

6. ವಾಷಿಂಗ್ಟನ್‌ ಸುಂದರ್: ಟೀಂ ಇಂಡಿಯಾ ತಾರಾ ಆಲ್ರೌಂಡರ್ ವಾಷಿಂಗ್ಟನ್ ಸುಂದರ್, ಬೌಲಿಂಗ್ ಹಾಗೂ ಬ್ಯಾಟಿಂಗ್‌ನಲ್ಲಿ ಜವಾಬ್ದಾರಿಯುತ ಪ್ರದರ್ಶನ ನೀಡಿದ್ದರು. ಇದೀಗ ಅದೇ ಲಯ ಮುಂದುವರೆಸಿಕೊಂಡು ಹೋಗಲು ಎದುರು ನೋಡುತ್ತಿದ್ದಾರೆ.

711

7. ಅಕ್ಷರ್ ಪಟೇಲ್: ಕಳೆದ ಪಂದ್ಯದಲ್ಲಿ ಶಾಬಾಜ್ ಅಹಮ್ಮದ್ ನಿರೀಕ್ಷಿತ ಪ್ರದರ್ಶನ ತೋರಲು ವಿಫಲವಾಗಿದ್ದರು. ಇದೀಗ ಶಾಬಾಜ್ ಬದಲಿಗೆ ಅಕ್ಷರ್ ಪಟೇಲ್ ಆಡುವ ಹನ್ನೊಂದರ ಬಳಗ ಕೂಡಿಕೊಳ್ಳುವ ಸಾಧ್ಯತೆಯಿದೆ.
 

811

8. ಶಾರ್ದೂಲ್ ಠಾಕೂರ್: ಟೀಂ ಇಂಡಿಯಾದ ಮತ್ತೋರ್ವ ಪ್ರತಿಭಾನ್ವಿತ ಆಲ್ರೌಂಡರ್ ಶಾರ್ದೂಲ್ ಠಾಕೂರ್, ಬೌಲಿಂಗ್‌ನಲ್ಲಿ ಮಿಂಚಿನ ದಾಳಿ ನಡೆಸಿದ್ದರು. ಶಾರ್ದೂಲ್ ಠಾಕೂರ್ ಬ್ಯಾಟಿಂಗ್‌ನಲ್ಲೂ ತಂಡಕ್ಕೆ ಆಸರೆಯಾಗಬೇಕಿದೆ.
 

911

9. ದೀಪಕ್ ಚಹರ್: ಟೀಂ ಇಂಡಿಯಾ ಸ್ವಿಂಗ್ ಸ್ಪೆಷಲಿಸ್ಟ್ ದೀಪಕ್ ಚಹರ್, ಮೊದಲ ಪಂದ್ಯದ ಮೊದಲ ಎಸೆತದಲ್ಲೇ ವಿಕೆಟ್ ಕಬಳಿಸಿ ಮಿಂಚಿದ್ದರು. ದೀಪಕ್ ಚಹರ್ ಮತ್ತೊಮ್ಮೆ ಶಿಸ್ತುಬದ್ದ ದಾಳಿ ನಡೆಸಬೇಕಿದೆ.
 

1011

10. ಮೊಹಮ್ಮದ್ ಸಿರಾಜ್: ಟೀಂ ಇಂಡಿಯಾ ಅನುಭವಿ ವೇಗಿ ಸಿರಾಜ್ ಕೂಡಾ ಮೊದಲ ಪಂದ್ಯದಲ್ಲಿ ಮಾರಕ ದಾಳಿ ನಡೆಸುವ ಮೂಲಕ ಗಮನ ಸೆಳೆದಿದ್ದರು. ಸಿರಾಜ್ ಅದೇ ಲಯ ಮುಂದುವರೆಸಿಕೊಂಡು ಹೋಗಲು ಎದುರು ನೋಡುತ್ತಿದ್ದಾರೆ.
 

1111

11. ಕುಲ್ದೀಪ್ ಸೆನ್: ಪಾದಾರ್ಪಣೆ ಪಂದ್ಯದಲ್ಲೇ 2 ವಿಕೆಟ್ ಕಬಳಿಸಿ ಮಿಂಚಿದ್ದ ಕುಲ್ದೀಪ್ ಸೆನ್‌ಗೆ ಎರಡನೇ ಪಂದ್ಯದಲ್ಲೂ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ದೊರೆಯುವ ಸಾಧ್ಯತೆಯಿದ್ದು, ಅವಕಾಶ ಬಳಸಿಕೊಳ್ಳಲು ಎದುರು ನೋಡುತ್ತಿದ್ದಾರೆ.
 

Read more Photos on
click me!

Recommended Stories