Ind vs NZ 2nd Test: ಮುಂಬೈ ಟೆಸ್ಟ್‌ನಲ್ಲಿ 25% ಪ್ರೇಕ್ಷಕರಿಗೆ ಮೈದಾನ ಪ್ರವೇಶಿಸಲು ಅವಕಾಶ..!

First Published Nov 28, 2021, 11:19 AM IST

ಮುಂಬೈ: ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ತಂಡಗಳ ನಡುವಿನ ಎರಡನೇ ಟೆಸ್ಟ್‌ ಪಂದ್ಯವು ಡಿಸೆಂಬರ್ 03ರಿಂದ ಮುಂಬೈ ವಾಂಖೆಡೆ ಮೈದಾನದಲ್ಲಿ (Wankhede Stadium) ಆರಂಭವಾಗಲಿದೆ. ಈ ಪಂದ್ಯಕ್ಕೂ ಮಹತ್ವದ ತೀರ್ಮಾನವೊಂದು ಹೊರಬಿದ್ದಿದ್ದು, ಮಹಾರಾಷ್ಟ್ರ ಸರ್ಕಾರವು 25% ಮಂದಿ ಮಾತ್ರ ಮೈದಾನ ಪ್ರವೇಶಿಸಲು ಅವಕಾಶ ನೀಡಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಮೊದಲ ಟೆಸ್ಟ್ ಪಂದ್ಯವು ಕಾನ್ಪುರದ ಗ್ರೀನ್‌ ಪಾರ್ಕ್‌ ಮೈದಾನದಲ್ಲಿ ನಡೆಯುತ್ತಿದ್ದು, 100% ಪ್ರೇಕ್ಷಕರು ಮೈದಾನ ಪ್ರವೇಶಿಸಲು ಅವಕಾಶ ನೀಡಲಾಗಿದೆ.

ಇದೀಗ ಡಿಸೆಂಬರ್‌ 03ರಿಂದ ಉಭಯ ತಂಡಗಳು ಮುಂಬೈನ ವಾಂಖೆಡೆ ಮೈದಾನದಲ್ಲಿ ಎರಡನೇ ಟೆಸ್ಟ್‌ ಪಂದ್ಯವನ್ನಾಡಲಿದ್ದು, ಕೋವಿಡ್‌ ರೂಪಾಂತರಿ ತಳಿ ಪತ್ತೆಯಾದ ಬೆನ್ನಲ್ಲೇ ಮುನ್ನೆಚ್ಚರಿಕಾ ಕ್ರಮವಾಗಿ ವಾಂಖೆಡೆ ಸ್ಟೇಡಿಯಂನಲ್ಲಿ ಶೇ.25ರಷ್ಟು ಪ್ರೇಕ್ಷಕರಿಗೆ ಮೈದಾನ ಪ್ರವೇಶಿಸಲು ಅವಕಾಶ ನೀಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ ಎಂದು ವರದಿಯಾಗಿದೆ.

ಮುಂಬೈನ ವಾಂಖೆಡೆ ಮೈದಾನದಲ್ಲಿ 30,000 ಮಂದಿ ಏಕಕಾಲದಲ್ಲಿ ಪಂದ್ಯವನ್ನು ವೀಕ್ಷಿಸಬಹುದಾಗಿದೆ. ಅದರಲ್ಲಿ ಇದೀಗ 25% ಅಂದರೆ ಕೇವಲ 7,500 ಅಭಿಮಾನಿಗಳು ಮಾತ್ರ ಮೈದಾನದೊಳಗೆ ಎರಡನೇ ಟೆಸ್ಟ್ ಪಂದ್ಯವನ್ನು ವೀಕ್ಷಿಸಬಹುದಾಗಿದೆ

ಆಟಗಾರರು, ಅಧಿಕಾರಿಗಳು ಹಾಗೂ ಪಂದ್ಯಾಟದಲ್ಲಿ ಪಾಲ್ಗೊಳ್ಳುವ ಎಲ್ಲರೂ ಸಂಪೂರ್ಣ ಲಸಿಕೆ ಪಡೆದಿರಬೇಕು ಎಂದು ಸರ್ಕಾರ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಇದೇ ವೇಳೆ ಮೈದಾನ ಪ್ರವೇಶಿಸುವ ಪ್ರೇಕ್ಷಕರಿಗೆ ಮಾಸ್ಕ್ ಹಾಗೂ ಸಾಮಾಜಿಕ ಅಂತರವನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ.

ಮುಂಬೈನ ವಾಂಖೆಡೆ ಮೈದಾನದಲ್ಲಿ ಬರೋಬ್ಬರಿ 5 ವರ್ಷಗಳ ಬಳಿಕ ಮೊದಲ ಟೆಸ್ಟ್ ಪಂದ್ಯ ಆತಿಥ್ಯಕ್ಕೆ ಸಜ್ಜಾಗಿದೆ. ಇನ್ನು 2019ರ ಡಿಸೆಂಬರ್‌ನಲ್ಲಿ ಕೊನೆಯ ಬಾರಿಗೆ ವಾಂಖೆಡೆ ಮೈದಾನದಲ್ಲಿ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವೆ ಸೀಮಿತ ಓವರ್‌ಗಳ ಪಂದ್ಯ ನಡೆದಿತ್ತು.

Mumbai India

ಮಹಾರಾಷ್ಟ್ರ ಸರ್ಕಾರ ಅನುಮತಿ ನೀಡಿದರೆ, 50% ಪ್ರವೇಶಕ್ಕೆ ವ್ಯವಸ್ಥೆ ಕಲ್ಪಿಸಲು ಮುಂಬೈ ಕ್ರಿಕೆಟ್‌ ಮಂಡಳಿ ಎದುರು ನೋಡುತ್ತಿದೆ. ಆದರೆ ರಾಜ್ಯ ಸರ್ಕಾರ ಅಂತಿಮವಾಗಿ ಯಾವ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.

click me!