ಭಾರತ-ನ್ಯೂಜಿಲೆಂಡ್ ನಡುವಿನ ಮ್ಯಾಚ್ ಫ್ರೀ ಆಗಿ ಎಲ್ಲಿ ವೀಕ್ಷಿಸಬಹುದು? ಇಲ್ಲಿದೆ ಡೀಟೈಲ್ಸ್

Published : Jan 05, 2026, 05:36 PM IST

India vs New Zealand ODI Streaming: ಭಾರತ-ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಇದೇ ಜನವರಿ 11ರಿಂದ ಆರಂಭವಾಗಲಿದೆ. ಬನ್ನಿ ನಾವಿಂದು ಎಲ್ಲಿ ಉಚಿತವಾಗಿ ಈ ಪಂದ್ಯವನ್ನು ವೀಕ್ಷಿಸಬಹುದು ಎನ್ನುವುದನ್ನು ತಿಳಿಯೋಣ. 

PREV
17
ಭಾರತ-ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿ

ಭಾರತ-ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಜನವರಿ 11ರಿಂದ ಆರಂಭವಾಗಲಿದೆ. ಭಾರತ ತಂಡವು ಈ ಟಸರಣಿಗೆ ಆತಿಥ್ಯ ವಹಿಸಿದ್ದು, ವರ್ಷದ ಮೊದಲ ಸರಣಿಯಲ್ಲಿ ಟೀಂ ಇಂಡಿಯಾ ಶುಭಾರಂಭ ಮಾಡುವ ನಿರೀಕ್ಷೆಯಲ್ಲಿದೆ.

27
ಭಾರತ ತಂಡ ಘೋಷಣೆ:

ಮೂರು ಪಂದ್ಯಗಳ ಏಕದಿನ ಸರಣಿಗೆ ಈಗಾಗಲೇ ಭಾರತ ತಂಡ ಘೋಷಣೆಯಾಗಿದ್ದು, ಶುಭ್‌ಮನ್ ಗಿಲ್ ನಾಯಕನಾಗಿ ಹಾಗೂ ಶ್ರೇಯಸ್ ಅಯ್ಯರ್ ಉಪನಾಯಕನಾಗಿ ಕಮ್‌ಬ್ಯಾಕ್ ಮಾಡಿದ್ದಾರೆ.

37
ಪಂದ್ಯದ ನೇರ ಪ್ರಸಾರದ ಬಗ್ಗೆ:

ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಎಲ್ಲಿ ಪ್ರಸಾರವಾಗಲಿದೆ ಎನ್ನುವುದರ ಬಗ್ಗೆ ಅಭಿಮಾನಿಗಳಲ್ಲಿ ಸಾಕಷ್ಟು ಸಸ್ಪೆನ್ಸ್ ಇದೆ. ನಾವು ಈ ಪಂದ್ಯಗಳು ಯಾವೆಲ್ಲಾ ಫ್ಲಾಟ್‌ಫಾರಂನಲ್ಲಿ ವೀಕ್ಷಿಸಬಹುದು? ಫ್ರೀ ಆಗಿ ಎಲ್ಲಿ ವೀಕ್ಷಿಸಬಹುದು ಎನ್ನುವುದನ್ನು ತಿಳಿಯೋಣ.

47
ಭಾರತ-ನ್ಯೂಜಿಲೆಂಡ್ ಸರಣಿಯ ಬಗ್ಗೆ

ನ್ಯೂಜಿಲೆಂಡ್ ತಂಡವು ಭಾರತ ಪ್ರವಾಸದಲ್ಲಿ ಮೊದಲಿಗೆ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಇದಾದ ಬಳಿಕ ಉಭಯ ತಂಡಗಳು ಐದು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ.

57
ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು:

ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಪಂದ್ಯವನ್ನು ಸ್ಟಾರ್‌ ಸ್ಪೋರ್ಸ್‌ ಟಿವಿ ವಾಹಿನಿಯಲ್ಲಿ ಕನ್ನಡ, ಇಂಗ್ಲಿಷ್ ಸೇರಿದಂತೆ ಹಲವು ಭಾಷೆಗಳಲ್ಲಿ ವೀಕ್ಷಿಸಹುದು.ಇದಷ್ಟೇ ಅಲ್ಲದೇ ಆನ್‌ಲೈನ್ ಸ್ಟ್ರೀಮಿಂಗ್ ಹಾಟ್‌ಸ್ಟಾರ್‌ನಲ್ಲಿಯೂ ವೀಕ್ಷಿಸಬಹುದಾಗಿದೆ.

67
ಫ್ರೀ ಆಗಿ ಎಲ್ಲಿ ವೀಕ್ಷಿಸಬಹುದು:

ಭಾರತ-ನ್ಯೂಜಿಲೆಂಡ್ ತಂಡಗಳ ನಡುವಿನ ಸೀಮಿತ ಓವರ್‌ಗಳ ಸರಣಿಯ ಪಂದ್ಯಗಳನ್ನು ಜಿಯೋ ಹಾಟ್‌ಸ್ಟಾರ್‌ನಲ್ಲಿ ರೀಚಾರ್ಜ್‌ ಮಾಡಿಕೊಂಡು ವೀಕ್ಷಿಸಬಹುದಾಗಿದೆ. ಆದರೆ ಡಿಡಿ ಫ್ರೀ ಡಿಶ್‌ನಲ್ಲಿ ಡಿಡಿ ಸ್ಪೋರ್ಟ್ಸ್‌ನಲ್ಲಿ ಉಚಿತವಾಗಿ ಪಂದ್ಯಗಳನ್ನು ವೀಕ್ಷಿಸಬಹುದಾಗಿದೆ.

77
ನ್ಯೂಜಿಲೆಂಡ್ ಎದುರಿನ ಏಕದಿನ ಸರಣಿಗೆ ಭಾರತ ತಂಡ ಹೀಗಿದೆ:

ಶುಭ್‌ಮನ್ ಗಿಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆ ಎಲ್ ರಾಹುಲ್(ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್(ಉಪನಾಯಕ), ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ಪ್ರಸಿದ್ದ್ ಕೃಷ್ಣ, ಕುಲ್ದೀಪ್ ಯಾದವ್, ರಿಷಭ್ ಪಂತ್, ನಿತೀಶ್ ಕುಮಾರ್ ರೆಡ್ಡಿ, ಅರ್ಶದೀಪ್ ಸಿಂಗ್, ಯಶಸ್ವಿ ಜೈಸ್ವಾಲ್.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories