ಏಷ್ಯಾಕಪ್ 2025: ಭಾರತ-ಪಾಕಿಸ್ತಾನ ಮ್ಯಾಚ್‌ ಎಷ್ಟು ಗಂಟೆಗೆ ಆರಂಭವಾಗತ್ತೆ? ಮೊಬೈಲ್‌ನಲ್ಲಿ ಲೈವ್‌ ನೋಡಿ

Published : Sep 13, 2025, 04:49 PM IST

ದುಬೈ: 17ನೇ ಆವೃತ್ತಿಯ ಏಷ್ಯಾಕಪ್ ಟೂರ್ನಿಯಲ್ಲಿನ ಬಹುನಿರೀಕ್ಷಿತ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಈ ಪಂದ್ಯದ ಕಂಪ್ಲೀಟ್ ಅಪ್ಡೇಟ್ಸ್ ಇಲ್ಲಿದೆ ನೋಡಿ. 

PREV
16
ಇಂಡೋ-ಪಾಕ್ ಮ್ಯಾಚ್

ಭಾರತ ಹಾಗೂ ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಮ್ಯಾಚ್ ಇದೇ ಸೆಪ್ಟೆಂಬರ್ 14ರಂದು ನಡೆಯಲಿದೆ. ಕ್ರಿಕೆಟ್ ಜಗತ್ತಿನ ಬದ್ದ ಎದುರಾಳಿಗಳ ನಡುವಿನ ಕಾದಾಟ ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ.

26
ದುಬೈನಲ್ಲಿ ನಡೆಯಲಿರುವ ಮ್ಯಾಚ್

ಈ ಪಂದ್ಯಕ್ಕೆ ದುಬೈನ ಅಂತಾರಾಷ್ಟ್ರೀಯ ಮೈದಾನ ಆತಿಥ್ಯ ವಹಿಸಿದ್ದು, ಭಾನುವಾರ ಸಂಜೆ 8 ಗಂಟೆಗೆ ಪಂದ್ಯಾಟ ಆರಂಭವಾಗಲಿದೆ. ಇನ್ನು ಇದಕ್ಕೂ ಅರ್ಧಗಂಟೆ ಮೊದಲು ಅಂದರೆ 7.30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ.

36
ಟೀಂ ಇಂಡಿಯಾ ಶುಭಾರಂಭ

ಏಷ್ಯಾಕಪ್ ಟೂರ್ನಿಯಲ್ಲಿ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ, ತಾನಾಡಿದ ಮೊದಲ ಪಂದ್ಯದಲ್ಲಿ ಯುಎಇ ಎದುರು 9 ವಿಕೆಟ್ ಅಂತರದ ಭರ್ಜರಿ ಜಯ ಸಾಧಿಸುವ ಮೂಲಕ ಶುಭಾರಂಭ ಮಾಡಿದೆ.

46
ಪಾಕ್‌ಗೆ ಅಗ್ನಿ ಪರೀಕ್ಷೆ

ಇನ್ನೊಂದೆಡೆ ಪಾಕಿಸ್ತಾನ ತಂಡವು ಓಮಾನ್ ಎದುರು ಸುಲಭ ಜಯ ದಾಖಲಿಸಿದ್ದು, ಇದೀಗ ಭಾರತದ ಸವಾಲನ್ನು ಎದುರು ನೋಡುತ್ತಿದೆ.

56
ಸೋನಿ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ

ಇನ್ನು ಈ ಬಾರಿಯ ಏಷ್ಯಾಕಪ್ ಟೂರ್ನಿಯ ಪ್ರಸಾರದ ಹಕ್ಕನ್ನು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ ಪಡೆದುಕೊಂಡಿದೆ. ಟಿವಿಯಲ್ಲಿ ಸೋನಿ ಸ್ಪೋರ್ಟ್ಸ್‌ ಹಾಗೂ ಓಟಿಟಿಯಲ್ಲಿ ಸೋನಿ ಲಿವ್‌ನಲ್ಲಿ ನೇರಪ್ರಸಾರದ ಪಂದ್ಯಗಳನ್ನು ವೀಕ್ಷಿಸಬಹುದಾಗಿದೆ.

66
ರೋಚಕ ಪೈಪೋಟಿ ನಿರೀಕ್ಷೆ

ಈ ಪಂದ್ಯದಲ್ಲಿ ಗೆಲುವು ಸಾಧಿಸಿದ ತಂಡವು ಬಹುತೇಕ ಸೂಪರ್ 4 ಹಂತಕ್ಕೆ ಲಗ್ಗೆಯಿಡಲಿದೆ. ಹೀಗಾಗಿ ಈ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories