Asia Cup 2025 Super-4: ಪಾಕ್ ಎದುರಿನ ಹೈವೋಲ್ಟೇಜ್‌ ಮ್ಯಾಚ್‌ಗೆ ಭಾರತ ತಂಡದಲ್ಲಿ ಎರಡು ಚೇಂಜ್! ಇಲ್ಲಿದೆ ಸಂಭಾವ್ಯ ತಂಡ

Published : Sep 21, 2025, 04:17 PM IST

ದುಬೈ: ಏಷ್ಯಾಕಪ್ ಟೂರ್ನಿಯಲ್ಲಿಂದು ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗುತ್ತಿವೆ. ಈ ಪಂದ್ಯದಲ್ಲಿ ಭಾರತ ಎರಡು ಬದಲಾವಣೆಗಳೊಂದಿಗೆ ಕಣಕ್ಕಿಳಿಯುವುದು ಬಹುತೇಖ ಕನ್ಫರ್ಮ್ ಆಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ. 

PREV
17
ಇಂದು ಭಾರತ-ಪಾಕ್‌ ಫೈಟ್

ಇಂದು ಸಂಜೆ 8 ಗಂಟೆಯಿಂದ ಏಷ್ಯಾಕಪ್ ಟೂರ್ನಿಯ ಸೂಪರ್ 4 ಪಂದ್ಯದಲ್ಲಿ ಕ್ರಿಕೆಟ್ ಜಗತ್ತಿನ ಬದ್ದ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗುತ್ತಿವೆ. ಈ ಪಂದ್ಯಕ್ಕೆ ದುಬೈನ ಅಂತಾರಾಷ್ಟ್ರೀಯ ಮೈದಾನ ಆತಿಥ್ಯ ವಹಿಸಿದೆ.

27
ಪಾಕ್ ಎದುರು ಗೆದ್ದು ಬೀಗಿದ್ದ ಭಾರತ

ಏಷ್ಯಾಕಪ್ ಟೂರ್ನಿಯ ಗ್ರೂಪ್‌ ಹಂತದಲ್ಲಿ ಇದೇ ಸ್ಟೇಡಿಯಂನಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದವು. ಆಗ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ 7 ವಿಕೆಟ್ ಅಂತರದ ಸುಲಭ ಗೆಲುವು ದಾಖಲಿಸಿತ್ತು.

37
ಒಮಾನ್ ಎದುರು ಪ್ರಯಾಸದ ಗೆಲುವು ಸಾಧಿಸಿದ್ದ ಭಾರತ

ಇನ್ನು ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಒಮಾನ್ ಎದುರು ಭಾರತ ಕೆಲ ಬದಲಾವಣೆಗಳೊಂದಿಗೆ ಕಣಕ್ಕಿಳಿದಿತ್ತು. ಆದರೆ ಒಮಾನ್ ಎದುರು ಭಾರತ ಪ್ರಯಾಸದ ಗೆಲುವು ದಾಖಲಿಸಿತ್ತು. ಒಮಾನ್ ತಂಡದ ಕೇವಲ 4 ವಿಕೆಟ್ ಕಬಳಿಸಲಷ್ಟೇ ಭಾರತದ ಬೌಲರ್‌ಗಳು ಯಶಸ್ವಿಯಾಗಿದ್ದರು.

47
ಭಾರತ ತಂಡದಲ್ಲಿ ಎರಡು ಬದಲಾವಣೆ

ಇದೀಗ ಸೂಪರ್-4 ಹಂತದ ಪಂದ್ಯಗಳು ಆರಂಭವಾಗಿರುವುದರಿಂದ ಪ್ರತಿ ಪಂದ್ಯವು ಸಾಕಷ್ಟು ಮಹತ್ವದ್ದೆನಿಸಿದೆ. ಹೀಗಾಗಿ ಸೂರ್ಯ ಪಡೆ ಪಾಕಿಸ್ತಾನ ಎದುರು ಎರಡು ಪ್ರಮುಖ ಬದಲಾವಣೆಗಳೊಂದಿಗೆ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.

57
ಜಸ್ಪ್ರೀತ್ ಬುಮ್ರಾ ಕಮ್‌ಬ್ಯಾಕ್

ಹೌದು, ಒಮಾನ್ ಎದುರಿನ ಪಂದ್ಯಕ್ಕೆ ಟೀಂ ಇಂಡಿಯಾ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿತ್ತು. ಹೀಗಾಗಿ ಅರ್ಶದೀಪ್ ಸಿಂಗ್ ಆಡುವ ಹನ್ನೊಂದರ ಬಳಗ ಕೂಡಿಕೊಂಡಿದ್ದರು. ಇದೀಗ ಬುಮ್ರಾ ಪಾಕ್ ಎದುರು ಕಣಕ್ಕಿಳಿಯಲಿದ್ದಾರೆ. ಬುಮ್ರಾಗೆ ಅರ್ಶದೀಪ್ ಸಿಂಗ್ ಜಾಗ ಬಿಟ್ಟುಕೊಡಬೇಕಾದ ಸಾಧ್ಯತೆಯಿದೆ.

67
ವರುಣ್ ಚಕ್ರವರ್ತಿ ಕಮ್‌ಬ್ಯಾಕ್

ಇನ್ನು ಮಿಸ್ಟ್ರಿ ಸ್ಪಿನ್ನರ್ ಖ್ಯಾತಿಯ ವರುಣ್ ಚಕ್ರವರ್ತಿಗೂ ಕೂಡಾ ಕಳೆದ ಪಂದ್ಯದಲ್ಲಿ ವಿಶ್ರಾಂತಿ ನೀಡಲಾಗಿತ್ತು. ಅವರ ಸ್ಥಾನದಲ್ಲಿ ಹರ್ಷಿತ್ ರಾಣಾ ಕಣಕ್ಕಿಳಿದಿದ್ದರು. ಇದೀಗ ವರುಣ್ ಚಕ್ರವರ್ತಿ ಕೂಡಾ ಪಾಕ್ ಎದುರು ಬಹುತೇಕ ಪ್ಲೇಯಿಂಗ್ ಇಲೆವನ್‌ನಲ್ಲಿ ಕಾಣಿಸಿಕೊಳ್ಳೋದು ಪಕ್ಕಾ ಎನ್ನಲಾಗುತ್ತಿದೆ.

77
ಪಾಕ್ ಎದುರಿನ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ

ಅಭಿಷೇಕ್ ಶರ್ಮಾ, ಶುಭ್‌ಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ಅಕ್ಷ‌ರ್ ಪಟೇಲ್, ಕುಲ್ದೀಪ್, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ.

Read more Photos on
click me!

Recommended Stories