ಜುಲೈ ತಿಂಗಳಿನಲ್ಲಿ ಭಾರತ ಸೀಮಿತ ಓವರ್‌ಗಳ ಕ್ರಿಕೆಟ್ ತಂಡ ಶ್ರೀಲಂಕಾ ಎದುರು ಏಕದಿನ ಹಾಗೂ ಟಿ20 ಸರಣಿಯನ್ನು ಆಡಲಿದೆ
undefined
ಭಾರತ ತಂಡ ಮುಂದಿನ ತಿಂಗಳು ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದ್ದು, 3 ಏಕದಿನ ಹಾಗೂ 3 ಟಿ20 ಪಂದ್ಯಗಳನ್ನು ಆಡಲಿದೆ.
undefined
ಜುಲೈ 13ರಿಂದ ಜುಲೈ 25ರ ವರೆಗೂ ಸರಣಿ ನಡೆಯಲಿದೆ ಎಂದು ಪಂದ್ಯಗಳ ಪ್ರಸಾರ ಹಕ್ಕು ಹೊಂದಿರುವ ಸೋನಿ ಸಂಸ್ಥೆ ಸೋಮವಾರ ತಿಳಿಸಿದೆ.
undefined
ಜುಲೈ 13, 16 ಹಾಗೂ 18ರಂದು ಏಕದಿನ ಪಂದ್ಯಗಳು ನಡೆಯಲಿದ್ದು, ಜುಲೈ 21, 23 ಹಾಗೂ 25ರಂದು ಟಿ20 ಪಂದ್ಯಗಳು ನಡೆಯಲಿವೆ.
undefined
ವಿರಾಟ್ ಕೊಹ್ಲಿ ನೇತೃತ್ವದ ತಂಡ ಇಂಗ್ಲೆಂಡ್‌ನಲ್ಲಿ ಟೆಸ್ಟ್ ಆಡುತ್ತಿರುವ ವೇಳೆಯೇ ಲಂಕಾದಲ್ಲಿ ಸೀಮಿತ ಓವರ್ ಸರಣಿ ನಡೆಯಲಿರುವ ಕಾರಣ, ತಂಡಕ್ಕೆ ಹೊಸ ನಾಯಕನ ನೇಮಕವಾಗಲಿದೆ.
undefined
ಗಬ್ಬರ್ ಸಿಂಗ್ ಖ್ಯಾತಿಯ ಶಿಖರ್ ಧವನ್, ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕನಾಗಿರುವ ಶ್ರೇಯಸ್ ಅಯ್ಯರ್ ನಡುವೆ ಟೀಂ ಇಂಡಿಯಾ ನಾಯಕತ್ವದ ರೇಸ್‌ನಲ್ಲಿದ್ದಾರೆ.
undefined
ಈ ಮೊದಲು ದೀಪಕ್ ಚಹಾರ್ ಲಂಕಾ ಸರಣಿಯಲ್ಲಿ ಶಿಖರ್ ಧವನ್ ಟೀಂ ಇಂಡಿಯಾದ ನಾಯಕತ್ವ ವಹಿಸಿದ್ದರೆ ಚೆನ್ನಾಗಿರುತ್ತಿತ್ತು ಎಂದು ಅಭಿಪ್ರಾಯಪಟ್ಟಿದ್ದರು.
undefined
ಟೀಂ ಇಂಡಿಯಾ ಹೆಡ್ ಕೋಚ್ ರವಿಶಾಸ್ತ್ರಿ ಹಾಗೂ ಸಹಾಯಕ ಸಿಬ್ಬಂದಿ ಇಂಗ್ಲೆಂಡ್ ಪ್ರವಾಸದಲ್ಲಿರುವ ಕಾರಣ, ಲಂಕಾ ಪ್ರವಾಸಕ್ಕೆ ರಾಹುಲ್ ದ್ರಾವಿಡ್ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ವರದಿಯಾಗಿದೆ.
undefined