Ind vs SL:ಟೆಸ್ಟ್‌ ಸರಣಿಗೂ ಮುನ್ನ ಕ್ರಿಕೆಟ್ ಫ್ಯಾನ್ಸ್‌ ತಿಳಿದಿರಬೇಕಾದ 5 ಇಂಟ್ರೆಸ್ಟಿಂಗ್ ಸಂಗತಿಗಳಿವು

First Published | Mar 2, 2022, 3:18 PM IST

ಬೆಂಗಳೂರು: ಭಾರತ ಹಾಗೂ ಶ್ರೀಲಂಕಾ (India vs Sri Lanka) ತಂಡಗಳ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯು ಮಾರ್ಚ್‌ 04ರಿಂದ ಆರಂಭವಾಗಿವೆ. ಭಾರತ ಹಾಗೂ ಲಂಕಾ ತಂಡಗಳ ನಡುವಿನ ಮೊದಲ ಟೆಸ್ಟ್ ಪಂದ್ಯಕ್ಕೆ ಮೊಹಾಲಿ ಸ್ಟೇಡಿಯಂ ಆತಿಥ್ಯವನ್ನು ವಹಿಸಲಿದೆ. ಭಾರತ ಹಾಗೂ ಲಂಕಾ ಎದುರಿನ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ಕ್ರಿಕೆಟ್‌ ಅಭಿಮಾನಿಗಳು ತಿಳಿದಿರಲೇಬೇಕಾದ ಇಂಟ್ರೆಸ್ಟಿಂಗ್ ಸಂಗತಿಗಳು ಇಲ್ಲಿವೆ ನೋಡಿ.
 

ಶ್ರೀಲಂಕಾ ಎದುರಿನ 3 ಪಂದ್ಯಗಳ ಟಿ20 ಸರಣಿಯಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಕ್ಲೀನ್ ಸ್ವೀಪ್ ಮಾಡುವ ಮೂಲಕ ಅಮೋಘ ಪ್ರದರ್ಶನ ತೋರಿದ್ದು, ಇದೀಗ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಸಜ್ಜಾಗಿದೆ. 

ಸದ್ಯ ಭಾರತ ಕ್ರಿಕೆಟ್ ತಂಡವು ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ಮೂರನೇ ಸ್ಥಾನದಲ್ಲಿದ್ದರೆ, ಶ್ರೀಲಂಕಾ ತಂಡವು 7ನೇ ಸ್ಥಾನದಲ್ಲಿದೆ. ಶ್ರೇಯಾಂಕ ವಿಚಾರದಲ್ಲಿ ಈ ಎರಡು ತಂಡಗಳ ನಡುವೆ ಸಾಕಷ್ಟು ಅಂತರವಿದ್ದರೂ ಸಹಾ, ಈ ಹಿಂದೆ ಈ ಎರಡು ತಂಡಗಳಲ್ಲಿ ಹಲವು ದಿಗ್ಗಜ ಆಟಗಾರರು ಟೆಸ್ಟ್ ಕ್ರಿಕೆಟ್ ಜಗತ್ತನ್ನು ಆಳಿದ್ದಾರೆ. ಟೆಸ್ಟ್‌ ಸರಣಿ ಆರಂಭಕ್ಕೂ ಕ್ರಿಕೆಟ್ ಅಭಿಮಾನಿಗಳು ತಿಳಿದಿರಲೇಬೇಕಾದ ಇಂಟ್ರೆಸ್ಟಿಂಗ್ ಸಂಗತಿಗಳು ಇಲ್ಲಿವೆ ನೋಡಿ
 

Tap to resize

1. ಲಂಕಾ-ಇಂಡಿಯಾ ನಡುವೆ ದಾಖಲಾಗಿದೆ ಗರಿಷ್ಠ ಟೆಸ್ಟ್ ಸ್ಕೋರ್

ಟೆಸ್ಟ್‌ ಪಂದ್ಯವೊಂದರಲ್ಲಿ ಗರಿಷ್ಠ ರನ್ ದಾಖಲಾದ ಇತಿಹಾಸ ಭಾರತ ಹಾಗೂ ಶ್ರೀಲಂಕಾ ತಂಡಗಳ ಹೆಸರಿನಲ್ಲಿದೆ. 1997ರಲ್ಲಿ ಕೊಲಂಬೋದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ತಂಡವು ಮೊದಲ ಇನಿಂಗ್ಸ್‌ನಲ್ಲಿ 6 ವಿಕೆಟ್ ಕಳೆದುಕೊಂಡು 952 ರನ್ ಗಳಿಸಿತ್ತು. ಇದು ಈ ವರೆಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ತಂಡವೊಂದು ದಾಖಲಿಸಿದ ಗರಿಷ್ಠ ಮೊತ್ತವಾಗಿದೆ. ಇದಕ್ಕುತ್ತರವಾಗಿ ಭಾರತ ತಂಡವು 8 ವಿಕೆಟ್ ಕಳೆದುಕೊಂಡು 537 ರನ್ ಬಾರಿಸಿತು. ಪರಿಣಾಮ ಪಂದ್ಯ ಡ್ರಾನಲ್ಲಿ ಅಂತ್ಯವಾಗಿತ್ತು.
 

sachin test 241

2. ಲಂಕಾ ಎದುರು ಸಾಮ್ರಾಟನಾಗಿ ಮೆರೆದಾಡಿರುವ ಸಚಿನ್ ತೆಂಡುಲ್ಕರ್ 

ಶ್ರೀಲಂಕಾ ಎದುರು ಭಾರತದ ಹಲವು ಬ್ಯಾಟರ್‌ಗಳು ಅಮೋಘ ಪ್ರದರ್ಶನ ನೀಡುತ್ತಲೇ ಬಂದಿದ್ದಾರೆ. ಅದರಲ್ಲೂ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ 36 ಇನಿಂಗ್ಸ್‌ಗಳಲ್ಲಿ 60.45ರ ಬ್ಯಾಟಿಂಗ್ ಸರಾಸರಿಯಲ್ಲಿ 1,995 ರನ್ ಬಾರಿಸಿದ್ದಾರೆ. ಇದರಲ್ಲಿ 9 ಶತಕ ಹಾಗೂ 6 ಅರ್ಧಶತಕಗಳು ಸೇರಿವೆ.

3. ಲಂಕಾ ಎದುರು ಅಬ್ಬರಿಸಿದ್ದಾರೆ ವಿರಾಟ್ ಕೊಹ್ಲಿ

ಇನ್ನು ಭಾರತ ಹಾಗೂ ಲಂಕಾ ನಡುವಿನ ಸರಣಿಯೊಂದರಲ್ಲಿ ಗರಿಷ್ಠ ರನ್ ಬಾರಿಸಿದ ದಾಖಲೆ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. 2017-18ರ ಲಂಕಾ ಪ್ರವಾಸದಲ್ಲಿ ಭಾರತ ತಂಡವು 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿತ್ತು. ಈ ಸರಣಿಯಲ್ಲಿ ವಿರಾಟ್ ಕೊಹ್ಲಿ 5 ಇನಿಂಗ್ಸ್‌ಗಳಲ್ಲಿ 152.5ರ ಬ್ಯಾಟಿಂಗ್ ಸರಾಸರಿಯಲ್ಲಿ 3 ಶತಕ ಹಾಗೂ ಒಂದು ಅರ್ಧಶತಕ ಸಹಿತ 610 ರನ್ ಬಾರಿಸಿದ್ದಾರೆ. 

4. ಭಾರತೀಯ ಬ್ಯಾಟರ್‌ಗಳನ್ನು ಕಾಡಿದ್ದಾರೆ ಮುತ್ತಯ್ಯ ಮುರುಳೀಧರನ್

ಸ್ಪಿನ್ ದಿಗ್ಗಜ ಮುತ್ತಯ್ಯ ಮುರುಳೀಧರನ್‌ ಟೆಸ್ಟ್ ಕ್ರಿಕೆಟ್‌ನಲ್ಲಿ ಹೆಚ್ಚಾಗಿ ಭಾರತೀಯ ಬ್ಯಾಟರ್‌ಗಳನ್ನು ಕಾಡಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಗರಿಷ್ಠ ವಿಕೆಟ್ (800) ಕಬಳಿಸಿದ ದಾಖಲೆ ಹೊಂದಿರುವ, ಮುರುಳಿ ಭಾರತ ವಿರುದ್ದ 115 ವಿಕೆಟ್ ಕಬಳಿಸಿದ್ದಾರೆ.
 

5. ಕುಂಬ್ಳೆ, ಹರ್ಭಜನ್ ಹಾಗೂ ಮುರುಳಿ ಟೆಸ್ಟ್ ಸರಣಿಯಲ್ಲಿ ಸ್ಥಿರ ಪ್ರದರ್ಶನ ತೋರಿದ ಬೌಲರ್‌ಗಳು

ಭಾರತ ಹಾಗೂ ಲಂಕಾ ಟೆಸ್ಟ್ ಸರಣಿಯಲ್ಲಿ ಮುತ್ತಯ್ಯ ಮುರುಳೀಧರನ್‌ ನಿರೀಕ್ಷೆಯಂತೆಯೇ ಸ್ಥಿರ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದಾರೆ. ಮುರುಳೀಧರನ್ ಭಾರತ ವಿರುದ್ದ 7 ಬಾರಿ 5+ ವಿಕೆಟ್ ಕಬಳಿಸಿದ ಸಾಧನೆ ಮಾಡಿದ್ದಾರೆ. ಇನ್ನು ಅನಿಲ್ ಕುಂಬ್ಳೆ ಹಾಗೂ ಹರ್ಭಜನ್ ಸಿಂಗ್ ಇಬ್ಬರೂ ತಲಾ ಎರಡು ಬಾರಿ 10+ ವಿಕೆಟ್ ಕಬಳಿಸಿದ ಸಾಧನೆ ಮಾಡಿದ್ದಾರೆ.

Latest Videos

click me!