ಹರಾರೆ: ಭಾರತ ಹಾಗೂ ಜಿಂಬಾಬ್ವೆ ನಡುವಿನ ಮೂರು ಪಂದ್ಯಗಳ ಟಿ20 ಸರಣಿ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಈ ಸರಣಿಯು ಹೊಸ ಚಾನೆಲ್‌ನಲ್ಲಿ ಭಾರತದಲ್ಲಿ ನೇರ ಪ್ರಸಾರವಾಗಲಿದೆ. ಇದರ ಜತೆಗೆ ಒಂದು ರುಪಾಯಿ ಖರ್ಚಿಲ್ಲದೇ ಭಾರತೀಯ ಕ್ರಿಕೆಟ್ ಫ್ಯಾನ್ಸ್ ಈ ಚಾನೆಲ್‌ನಲ್ಲಿ ಉಚಿತವಾಗಿ ವೀಕ್ಷಿಸಬಹುದಾಗಿದೆ.
ಐರ್ಲೆಂಡ್ ಹಾಗೂ ಇಂಗ್ಲೆಂಡ್ ಎದುರು ಅವಮಾನಕಾರಿ ಸರಣಿ ಸೋಲಿನ ಬಳಿಕ ಇದೀಗ ಟೀಂ ಇಂಡಿಯಾ, ಜಿಂಬಾಬ್ವೆ ಎದುರು ಮೂರು ಪಂದ್ಯಗಳ ಟಿ20 ಸರಣಿ ಆಡಲು ರೆಡಿಯಾಗಿದೆ. ಭಾರತ-ಜಿಂಬಾಬ್ವೆ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯು ಜುಲೈ 23ರಿಂದ ಇಲ್ಲಿನ ಹರಾರೆ ಕ್ರಿಕೆಟ್ ಕ್ಲಬ್ ಮೈದಾನದಲ್ಲಿ ಆರಂಭವಾಗಲಿದೆ.
26
ನಾಯಕನಾಗಿ ಶ್ರೇಯಸ್ ಅಯ್ಯರ್‌ಗೆ ಅಗ್ನಿ ಪರೀಕ್ಷೆ
ನಾಯಕನಾಗಿ ಕಳೆದೆರಡು ಟಿ20 ಸರಣಿ ಸೋತಿರುವ ಶ್ರೇಯಸ್ ಅಯ್ಯರ್‌ಗೆ ಇದೀಗ ಜಿಂಬಾಬ್ವೆ ಎದುರಿನ ಸರಣಿಯು ಒಂದು ರೀತಿ ಅಗ್ನಿ ಪರೀಕ್ಷೆಯಾಗಿದೆ. ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಭಾರತ ತಂಡವು ಮೊದಲ ಟಿ20 ಗೆಲುವಿಗಾಗಿ ಎದುರು ನೋಡುತ್ತಿದೆ. ಇನ್ನು ಭಾರತ-ಜಿಂಬಾಬ್ವೆ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯು ಹೊಸ ಚಾನೆಲ್‌ನಲ್ಲಿ ಪ್ರಸಾರವಾಗುತ್ತಿದೆ.
36
ಭಾರತ-ಜಿಂಬಾಬ್ವೆ ಟಿ20 ಸರಣಿ ಯುನೈಟ್8 ಚಾನೆಲ್‌ನಲ್ಲಿ ನೇರ ಪ್ರಸಾರ
ಹೌದು, ಭಾರತದ ಮ್ಯಾಚ್‌ಗಳು ಭಾರತದಾಚೆ ಎಲ್ಲೇ ನಡೆದರೂ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಇಲ್ಲವೇ ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಪ್ರಸಾರವಾಗುವುದನ್ನು ನಾವೆಲ್ಲರೂ ನೋಡಿದ್ದೇವೆ. ಆದರೆ ಈ ಬಾರಿ ಭಾರತ ಹಾಗೂ ಜಿಂಬಾಬ್ವೆ ನಡುವಿನ ಟಿ20 ಸರಣೀಯ ನೇರ ಪ್ರಸಾರದ ಹಕ್ಕನ್ನು ಯುನೈಟ್8 (Unite8) ಚಾನೆಲ್ ಪಡೆದುಕೊಂಡಿದೆ. ಹೀಗಾಗಿ ಭಾರತ-ಜಿಂಬಾಬ್ವೆ ಟಿ20 ಸರಣಿಯ ಮ್ಯಾಚ್‌ಗಳು ಯುನೈಟ್8 ಚಾನೆಲ್‌ನಲ್ಲಿ ನೇರ ಪ್ರಸಾರವಾಗಲಿದೆ.
ಫ್ಯಾನ್‌ಕೋಡ್‌ನಲ್ಲಿ 35 ರುಪಾಯಿ ರೀಚಾರ್ಜ್ ಮಾಡಿ ಮ್ಯಾಚ್ ನೋಡಬಹುದು
ಇನ್ನು ಓಟಿಟಿ ಫ್ಲಾಟ್‌ಫಾರಂನಲ್ಲಿ ಜಿಯೋ ಹಾಟ್‌ಸ್ಟಾರ್ ಅಥವಾ ಸೋನಿ ಸ್ಪೋರ್ಟ್ಸ್ ಲಿವ್‌ನಲ್ಲಿಯೂ ಭಾರತ-ಜಿಂಬಾಬ್ವೆ ನಡುವಿನ ಮ್ಯಾಚ್ ನೇರ ಪ್ರಸಾರವಾಗುವುದಿಲ್ಲ. ಇದಕ್ಕೆ ಬದಲಾಗಿ ಫ್ಯಾನ್‌ಕೋಡ್ ಓಟಿಟಿಯಲ್ಲಿ ನೇರ ಪ್ರಸಾರವಾಗಲಿದೆ. ಫ್ಯಾನ್‌ಕೋಡ್‌ನಲ್ಲಿ ಮ್ಯಾಚ್ ವೀಕ್ಷಿಸಲು ನೀವು 35 ರುಪಾಯಿ ರೀಚಾರ್ಜ್ ಮಾಡಬೇಕಾಗುತ್ತದೆ.
56
ಭಾರತದಲ್ಲಿ ಉಚಿತವಾಗಿ ಎಲ್ಲಿ? ಹೇಗೆ ವೀಕ್ಷಿಸಬಹುದು?
ಇನ್ನು ಭಾರತ ಹಾಗೂ ಜಿಂಬಾಬ್ವೆ ನಡುವಿನ ಮ್ಯಾಚ್ ಅನ್ನು ಡಿಡಿ ಫ್ರೀ ಡಿಶ್‌ನಲ್ಲಿ ಡಿಡಿ ಸ್ಪೋರ್ಟ್ಸ್‌ನಲ್ಲಿ ಉಚಿತವಾಗಿ ವೀಕ್ಷಿಸಬಹುದಾಗಿದೆ. ಡಿಡಿ ಸ್ಪೋರ್ಟ್ಸ್‌ನಲ್ಲಿ ಯಾವುದೇ ರೀಚಾರ್ಜ್ ಮಾಡಬೇಕಿಲ್ಲ. ಇನ್ನು ನಿಮ್ಮ ಬಳಿ ಜಿಯೋಫೈಬರ್ ಸಂಪರ್ಕವಿದ್ದರೇ ಉಚಿತವಾಗಿ ಯುನೈಟ್8 ಚಾನೆಲ್‌ನಲ್ಲಿ ಭಾರತ-ಜಿಂಬಾಬ್ವೆ ನಡುವಿನ ಮ್ಯಾಚ್ ವೀಕ್ಷಿಸಬಹುದಾಗಿದೆ.
66
ಶುಭಾರಂಭ ಮಾಡುವ ವಿಶ್ವಾಸದಲ್ಲಿ ಟೀಂ ಇಂಡಿಯಾ
ಭಾರತ ಹಾಗೂ ಜಿಂಬಾಬ್ವೆ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ಸಂಜೆ 4.30ರಿಂದ ಆರಂಭವಾಗಲಿದೆ. ಶ್ರೇಯಸ್ ಅಯ್ಯರ್ ನೇತೃತ್ವದ ಟೀಂ ಇಂಡಿಯಾ ಶುಭಾರಂಭ ಮಾಡುವ ಮೂಲಕ ಗೆಲುವಿನ ಹಳಿಗೆ ಮರಳಲು ಎದುರು ನೋಡುತ್ತಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.