ಬೆಂಗಳೂರು: ಶುಭ್‌ಮನ್ ಗಿಲ್ ನೇತೃತ್ವದ ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎದುರಿನ ಮೊದಲ ಟೆಸ್ಟ್ ಸೋಲುತ್ತಿದ್ದಂತೆಯೇ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿಯನ್ನು ಮತ್ತಷ್ಟು ದುರ್ಗಮ ಮಾಡಿಕೊಂಡಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೇರಲು ಭಾರತ ಏನು ಮಾಡಬೇಕು ನೋಡೋಣ ಬನ್ನಿ
ಶ್ರೀಲಂಕಾ ಹಾಗೂ ನ್ಯೂಜಿಲೆಂಡ್‌ನಲ್ಲಿ ತಲಾ 2, ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲಿ 5 ಪಂದ್ಯಗಳು ಬಾಕಿ ಇವೆ. ಈ ಪಂದ್ಯಗಳು ಭಾರತದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಣೆಬರಹ ನಿರ್ಧರಿಸಲಿವೆ.
56
10ರಲ್ಲಿ 7 ಪಂದ್ಯ ಗೆಲ್ಲಬೇಕಾದ ಒತ್ತಡದಲ್ಲಿ ಭಾರತ
ಸದ್ಯದ ಲೆಕ್ಕಾಚಾರದ ಪ್ರಕಾರ, ಭಾರತ ವಿಶ್ವ ಚಾಂಪಿಯನ್‌ಶಿಪ್ ಫೈನಲ್ ಪ್ರವೇಶಿಸಬೇಕಿದ್ದರೆ ಬಾಕಿ ಇರುವ 10 ಪಂದ್ಯಗಳಲ್ಲಿ ಕನಿಷ್ಠ 7ರಲ್ಲಿ ಗೆಲ್ಲಬೇಕಿದೆ. ತವರಿನಾಚೆ ಕಿವೀಸ್ ಎದುರು ಹಾಗೂ ತವರಿನಲ್ಲಿ ಆಸ್ಟ್ರೇಲಿಯಾ ಎದುರಿನ ಪ್ರದರ್ಶನ ಭಾರತಕ್ಕೆ ಸವಾಲಾಗುವ ಸಾಧ್ಯತೆಯಿದೆ
66
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ರೇಸ್‌ನಿಂದ ಹೊರಬೀಳುವ ಭೀತಿ
ಮೂರನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲೂ ಟೀಂ ಇಂಡಿಯಾ ಮೊದಲ ಸಲ ಫೈನಲ್‌ಗೇರಲು ವಿಫಲವಾಗಿತ್ತು. ಸದ್ಯದ ಭಾರತ ತಂಡದ ಪ್ರದರ್ಶನ ಗಮನಿಸಿದರೇ, ಟೀಂ ಇಂಡಿಯಾ ಮತ್ತೊಮ್ಮೆ ಫೈನಲ್ ರೇಸ್‌ನಿಂದ ಹೊರಬೀಳುವ ಭೀತಿ ಎದುರಾಗಿದೆ.