ಮಹಿಳಾ ಕ್ರಿಕೆಟ್‌: 10 ಸಾವಿರ ರನ್ ಬಾರಿಸಿ ಹೊಸ ದಾಖಲೆ ಬರೆದ ಮಿಥಾಲಿ ರಾಜ್‌..!

Suvarna News   | Asianet News
Published : Mar 12, 2021, 12:20 PM IST

ಲಖನೌ: ತಮ್ಮ 16ನೇ ವಯಸ್ಸಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿ ಇಂದಿಗೂ ತಮ್ಮ ಖದರ್ ಮುಂದುವರೆಸಿರುವ ಭಾರತ ಮಹಿಳಾ ಏಕದಿನ ತಂಡದ ನಾಯಕಿ ಮಿಥಾಲಿ ರಾಜ್‌ ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿ ಸೇರ್ಪಡೆಯಾಗಿದೆ. ದಕ್ಷಿಣ ಆಫ್ರಿಕಾ ವಿರುದ್ದ ಲಖನೌನ ಏಕಾನ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೂರನೇ ಏಕದಿನ ಪಂದ್ಯದಲ್ಲಿ ಮಿಥಾಲಿ ರಾಜ್‌ ಭಾರತದ ಪರ ಅಪರೂಪದ ದಾಖಲೆ ನಿರ್ಮಿಸಿದ್ದಾರೆ.   

PREV
16
ಮಹಿಳಾ ಕ್ರಿಕೆಟ್‌: 10 ಸಾವಿರ ರನ್ ಬಾರಿಸಿ ಹೊಸ ದಾಖಲೆ ಬರೆದ ಮಿಥಾಲಿ ರಾಜ್‌..!

ಭಾರತ ಮಹಿಳಾ ಏಕದಿನ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್‌ ಶುಕ್ರವಾರ(ಮಾ.12)ದಂದು ದಕ್ಷಿಣ ಆಫ್ರಿಕಾ ವಿರುದ್ದದ ಮೂರನೇ ಏಕದಿನ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 10 ಸಾವಿರ ರನ್‌ ಬಾರಿಸಿದ ಸಾಧನೆ ಮಾಡಿದ್ದಾರೆ.

26

ಈ ಮೂಲಕ 38 ವರ್ಷದ ಮಿಥಾಲಿ ರಾಜ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 10,000 ರನ್‌ ಬಾರಿಸಿದ ಭಾರತದ ಮೊದಲ ಹಾಗೂ ಒಟ್ಟಾರೆ ವಿಶ್ವದ ಎರಡನೇ ಬ್ಯಾಟ್ಸ್‌ವುಮೆನ್ ಎನ್ನುವ ಅಪರೂಪದ ದಾಖಲೆಗೆ ಭಾಜನರಾಗಿದ್ದಾರೆ.

36

ಈ ಮೊದಲು ಇಂಗ್ಲೆಂಡ್‌ನ ಮಹಿಳಾ ಆಟಗಾರ್ತಿ ಚಾರ್ಲೆಟ್ ಎಡ್ವರ್ಡ್ಸ್‌ 10 ಸಾವಿರ ರನ್‌ ಬಾರಿಸಿದ್ದ ಸಾಧನೆ ಮಾಡಿದ್ದರು. ಚಾರ್ಲೆಟ್‌ ಎಡ್ವರ್ಡ್ಸ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 10,273 ರನ್‌ ಬಾರಿಸಿದ್ದು, 2016ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. 

46

ಇದೀಗ ಮಿಥಾಲಿ ರಾಜ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 10,001 ರನ್‌ ಬಾರಿಸಿದ್ದು, ಇನ್ನು ಕೇವಲ 26 ರನ್‌ ಬಾರಿಸಿದರೆ ಏಕದಿನ ಕ್ರಿಕೆಟ್‌ನಲ್ಲಿ 7000 ಸಾವಿರ ರನ್‌ ಬಾರಿಸಿದ ವಿಶ್ವದ ಮೊದಲ ಆಟಗಾರ್ತಿ ಎನಿಸಿಕೊಳ್ಳಲಿದ್ದಾರೆ.

56

ದಕ್ಷಿಣ ಆಫ್ರಿಕಾ ವಿರುದ್ದದ 3ನೇ ಏಕದಿನ ಪಂದ್ಯಕ್ಕೂ ಮುನ್ನ ಮಿಥಾಲಿ ರಾಜ್‌ 10 ಸಾವಿರ ರನ್‌ ಪೂರೈಸಲು ಕೇವಲ 35 ರನ್‌ಗಳ ಅಗತ್ಯವಿತ್ತು. 3ನೇ ಏಕದಿನ ಪಂದ್ಯದಲ್ಲಿ 36 ರನ್‌ ಬಾರಿಸಿ ವಿಕೆಟ್‌ ಒಪ್ಪಿಸುವ ಮೂಲಕ ಹತ್ತು ಸಹಸ್ರ ರನ್‌ ಪೂರೈಸಿದ್ದಾರೆ.

66

ಮಿಥಾಲಿ ರಾಜ್‌ ಇದುವರೆಗೂ 212 ಏಕದಿನ ಪಂದ್ಯಗಳನ್ನಾಡಿದ್ದು, 7 ಶತಕ ಹಾಗೂ 54 ಅರ್ಧಶತಕ ಸಹಿತ 6974 ರನ್‌ ಬಾರಿಸಿದ್ದಾರೆ.

click me!

Recommended Stories