2025 ಭಾರತೀಯ ಕ್ರಿಕೆಟ್ ಪಾಲಿಗೆ ಮುಟ್ಟಿದ್ದೆಲ್ಲಾ ಚಿನ್ನ; ಇಲ್ಲಿವೆ ನೋಡಿ 5 ಅವಿಸ್ಮರಣೀಯ ಕ್ಷಣಗಳು!

Published : Dec 22, 2025, 01:02 PM IST

ಬೆಂಗಳೂರು: 2025ರ ಮುಕ್ತಾಯಕ್ಕೆ ಇನ್ನು ಕೆಲವೇ ಕೆಲವು ದಿನಗಳು ಬಾಕಿ ಉಳಿದಿವೆ. ಹೀಗಿರುವಾಗಲೇ ಭಾರತ ಕ್ರಿಕೆಟ್ ಪಾಲಿಗೆ ಈ ವರ್ಷ ಹಲವು ಅವಿಸ್ಮರಣೀಯ ಕ್ಷಣಗಳು ಸಿಕ್ಕಿವೆ. ಭಾರತ ಕ್ರಿಕೆಟ್‌ ಪಾಲಿಗೆ ಸಿಕ್ಕ ಐದು ಅಪರೂಪದ ಕ್ಷಣಗಳನ್ನು ಮತ್ತೊಮ್ಮೆ ಮೆಲುಕು ಹಾಕೋಣ ಬನ್ನಿ. 

PREV
15
1. ಅಜೇಯವಾಗಿ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ

ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ವರ್ಷದ ಆರಂಭದಲ್ಲೇ ಐಸಿಸಿ ಟ್ರೋಫಿ ಭೇಟೆಯಾಡುವಲ್ಲಿ ಯಶಸ್ವಿಯಾಗಿದೆ. 2013ರ ಬಳಿಕ ಟೀಂ ಇಂಡಿಯಾ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಅಜೇಯವಾಗಿ ಫೈನಲ್ ಪ್ರವೇಶಿಸಿ, ಪ್ರಶಸ್ತಿ ಸುತ್ತಿನಲ್ಲಿ ನ್ಯೂಜಿಲೆಂಡ್ ತಂಡವನ್ನು ಬಗ್ಗುಬಡಿದು ಟೀಂ ಇಂಡಿಯಾ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ.

25
2. ಏಷ್ಯಾಕಪ್ ಟೂರ್ನಿಯಲ್ಲೂ ಭಾರತದ ಅಜೇಯ ಓಟ

ಇನ್ನು 2025ರ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಮತ್ತೊಮ್ಮೆ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಯಶಸ್ವಿಯಾಯಿತು. ಬದ್ದ ಎದುರಾಳಿ ಪಾಕಿಸ್ತಾನ ಎದುರು ಹ್ಯಾಟ್ರಿಕ್ ಗೆಲುವು ಸಾಧಿಸುವ ಮೂಲಕ ಭಾರತ ಅಭಿಮಾನಿಗಳಿಗೆ ಅವಿಸ್ಮರಣೀಯ ಕ್ಷಣಗಳನ್ನು ಕಟ್ಟಿಕೊಟ್ಟಿತು.

35
3. ಇಂಗ್ಲೆಂಡ್ ಪ್ರವಾಸದಲ್ಲಿ ಯುವ ಪಡೆಯ ದಿಟ್ಟ ಹೋರಾಟ:

ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಶುಭ್‌ಮನ್ ಗಿಲ್ ನೇತೃತ್ವದ ಅನನುಭವಿ ಆಟಗಾರರನ್ನೊಳಗೊಂಡ ತಂಡವು ಇಂಗ್ಲೆಂಡ್ ನೆಲದಲ್ಲಿ ದಿಟ್ಟ ಪ್ರದರ್ಶನ ತೋರುವ ಮೂಲಕ ಸರಣಿಯಲ್ಲಿ 2-2ರ ಸಮಬಲ ಸಾಧಿಸುವ ಮೂಲಕ ಮುಂಬರುವ ಸವಾಲಿಗೆ ರೆಡಿ ಎನ್ನುವ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

45
4. ಐತಿಹಾಸಿಕ ಚೊಚ್ಚಲ ಐಸಿಸಿ ಏಕದಿನ ವಿಶ್ವಕಪ್ ಗೆದ್ದ ಭಾರತ ಮಹಿಳಾ ತಂಡ:

ಭಾರತದಲ್ಲೇ ನಡೆದ 2025ರ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿನಲ್ಲಿ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ಮಹಿಳಾ ತಂಡವು ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಯಶಸ್ವಿಯಾಯಿತು. ಈ ಮೂಲಕ ಭಾರತ ಮಹಿಳಾ ತಂಡವು ಚೊಚ್ಚಲ ಬಾರಿಗೆ ಐಸಿಸಿ ಟ್ರೋಫಿ ಗೆದ್ದು ಇತಿಹಾಸ ನಿರ್ಮಿಸಿತ್ತು.

55
5. ಟಿ20 ವಿಶ್ವಕಪ್ ಗೆದ್ದ ಭಾರತ ಮಹಿಳಾ ತಂಡ:

ಶ್ರೀಲಂಕಾದಲ್ಲಿ ನಡೆದ ಚೊಚ್ಚಲ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯ ಫೈನಲ್‌ನಲ್ಲಿ ಭಾರತ ತಂಡವು ನೇಪಾಳವನ್ನು ಏಳು ವಿಕೆಟ್‌ಗಳಿಂದ ಮಣಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಬಲಿಷ್ಠ ಆಸ್ಟ್ರೇಲಿಯಾ, ಪಾಕಿಸ್ತಾವನ್ನು ಸೋಲಿಸಿ ಭಾರತ ತಂಡವು ಫೈನಲ್ ಪ್ರವೇಶಿಸಿತ್ತು.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories