ಟಿ20 ಹಾಗೂ ಏಕದಿನ ವಿಶ್ವಕಪ್ ಗೆದ್ದ ಟೀಂ ಇಂಡಿಯಾ ಕ್ರಿಕೆಟಿಗರಿವರು..!

First Published | Jun 4, 2024, 1:38 PM IST

ಬೆಂಗಳೂರು: 9ನೇ ಅವೃತ್ತಿಯ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಗೆ ಭರ್ಜರಿಯಾಗಿಯೇ ಚಾಲನೆ ಸಿಕ್ಕಿದೆ. ನಾವಿಂದು ಭಾರತ ಪರ ಐಸಿಸಿ ಟಿ20 ವಿಶ್ವಕಪ್ ಹಾಗೂ ಐಸಿಸಿ ಏಕದಿನ ವಿಶ್ವಕಪ್ ಗೆದ್ದ ಕ್ರಿಕೆಟಿಗರು ಯಾರು ಎನ್ನುವುದನ್ನು ನೋಡೋಣ ಬನ್ನಿ.
 

1. ಎಂ ಎಸ್ ಧೋನಿ:

ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ತಮ್ಮ ನಾಯಕತ್ವದಲ್ಲೇ 2007ರ ಐಸಿಸಿ ಟಿ20 ವಿಶ್ವಕಪ್ ಹಾಗೂ 2011ರಲ್ಲಿ ಐಸಿಸಿ ಏಕದಿನ ವಿಶ್ವಕಪ್ ಜಯಿಸುವಲ್ಲಿ ಯಶಸ್ವಿಯಾಗಿತ್ತು.

2. ಗೌತಮ್ ಗಂಭೀರ್:

ಟೀಂ ಇಂಡಿಯಾ ಮಾಜಿ ಆರಂಭಿಕ ಬ್ಯಾಟರ್ ಗೌತಮ್ ಗಂಭೀರ್ ಕೂಡಾ ಟಿ20 ಹಾಗೂ ಏಕದಿನ ವಿಶ್ವಕಪ್ ಜಯಿಸಿದ್ದಾರೆ. ಈ ಎರಡು ವಿಶ್ವಕಪ್ ಟೂರ್ನಿಯ ಫೈನಲ್‌ನಲ್ಲಿ ಗಂಭೀರ್ ಟೀಂ ಇಂಡಿಯಾ ಪರ ಗರಿಷ್ಠ ರನ್ ಸ್ಕೋರ್ ದಾಖಲಿಸಿದ್ದರು.

Tap to resize

3. ವಿರೇಂದ್ರ ಸೆಹ್ವಾಗ್:

ಟೀಂ ಇಂಡಿಯಾ ಮಾಜಿ ಆರಂಭಿಕ ಬ್ಯಾಟರ್ ವಿರೇಂದ್ರ ಸೆಹ್ವಾಗ್ ಕೂಡಾ ಎರಡು ವಿಶ್ವಕಪ್ ಜಯಿಸಿದ ತಂಡದ ಸದಸ್ಯರಾಗಿದ್ದಾರೆ. ಸೆಹ್ವಾಗ್ ಕೂಡಾ ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.

4. ಯುವರಾಜ್ ಸಿಂಗ್

ಟೀಂ ಇಂಡಿಯಾ ಮಾಜಿ ಸ್ಟಾರ್ ಆಲ್ರೌಂಡರ್ ಯುವರಾಜ್ ಸಿಂಗ್ 2007ರ ಟಿ20 ಹಾಗೂ 2011ರ ವಿಶ್ವಕಪ್ ಗೆಲುವಿನ ರೂವಾರಿ ಎನಿಸಿಕೊಂಡಿದ್ದಾರೆ. ಯುವಿ 2011ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದರು.

5. ಯೂಸುಫ್ ಪಠಾಣ್:

ಟೀಂ ಇಂಡಿಯಾ ಮಾಜಿ ಆಲ್ರೌಂಡರ್ ಯೂಸುಫ್ ಪಠಾಣ್ 2007ರ ಟಿ20 ವಿಶ್ವಕಪ್ ಹಾಗೂ 2011ರ ಏಕದಿನ ವಿಶ್ವಕಪ್ ವಿಜೇತ ತಂಡದ ಸದಸ್ಯರಾಗಿದ್ದರು.

6. ಪೀಯೂಸ್ ಚಾವ್ಲಾ

ಟೀಂ ಇಂಡಿಯಾ ಅನುಭವಿ ಲೆಗ್‌ಸ್ಪಿನ್ನರ್ ಪೀಯೂಸ್ ಚಾವ್ಲಾ 2007ರ ಟಿ20 ಹಾಗೂ 2011ರ ಏಕದಿನ ವಿಶ್ವಕಪ್ ವಿಜೇತ ತಂಡದ ಸದಸ್ಯರಾಗಿದ್ದರು.

7. ಹರ್ಭಜನ್ ಸಿಂಗ್:

ಟೀಂ ಇಂಡಿಯಾ ಮಾಜಿ ಆಫ್‌ಸ್ಪಿನ್ನರ್ ಹರ್ಭಜನ್ ಸಿಂಗ್ ಕೂಡಾ ಟಿ20 ಹಾಗೂ ಏಕದಿನ ವಿಶ್ವಕಪ್ ಟ್ರೋಫಿಗೆ ಮುತ್ತಿಕ್ಕುವಲ್ಲಿ ಯಶಸ್ವಿಯಾಗಿದ್ದಾರೆ.

8. ಎಸ್ ಶ್ರೀಶಾಂತ್:

ಟೀಂ ಇಂಡಿಯಾ ಮಾಜಿ ವೇಗಿ ಎಸ್ ಶ್ರೀಶಾಂತ್ ಕೂಡಾ 2007 ಹಾಗೂ 2011ರ ಏಕದಿನ ವಿಶ್ವಕಪ್ ವಿಜೇತ ತಂಡದ ಸದಸ್ಯರಾಗಿದ್ದರು.

Latest Videos

click me!