1. ರೋಹಿತ್ ಶರ್ಮಾ:
ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಚುಟುಕು ಕ್ರಿಕೆಟ್‌ನಲ್ಲಿ ಈಗಾಗಲೇ 11 ಸಾವಿರಕ್ಕೂ ಅಧಿಕ ರನ್ ಬಾರಿಸಿದ್ದಾರೆ. ಒಟ್ಟಾರೆ ಟಿ20 ಕ್ರಿಕೆಟ್‌ನಲ್ಲಿ 8 ಶತಕ ಹಾಗೂ 74 ಅರ್ಧಶತಕ ಬಾರಿಸಿರುವ ಹಿಟ್‌ಮ್ಯಾನ್, ಪ್ರಸಕ್ತ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿಯೂ ಭರ್ಜರಿ ಲಯದಲ್ಲಿದ್ದಾರೆ.
2. ಯಶಸ್ವಿ ಜೈಸ್ವಾಲ್:
ಪ್ರತಿಭಾನ್ವಿತ ಎಡಗೈ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್, ಸದ್ಯ ಐಪಿಎಲ್‌ನಲ್ಲಿ ಫಾರ್ಮ್ ಸಮಸ್ಯೆ ಎದುರಿಸುತ್ತಿದ್ದಾರೆ. ಆದರೆ ಭಾರತ ಪರ ಮೂರು ಮಾದರಿಯ ಕ್ರಿಕೆಟ್‌ನಲ್ಲೂ ಅಬ್ಬರಿಸುತ್ತಿರುವ ಜೈಸ್ವಾಲ್, ಚುಟುಕು ವಿಶ್ವಕಪ್ ಟೂರ್ನಿಗೆ ಸ್ಥಾನ ಪಡೆಯುವುದು ಬಹುತೇಕ ಖಚಿತ.
3. ಶುಭ್‌ಮನ್ ಗಿಲ್:
ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾಗೂ ಆರಂಭಿಕ ಬ್ಯಾಟರ್ ಶುಭ್‌ಮನ್ ಗಿಲ್, ಈಗಾಗಲೇ ಈ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಗಿಲ್ ತಾನಾಡಿದ ಮೊದಲ 8 ಪಂದ್ಯಗಳಲ್ಲಿ 298 ರನ್ ಸಿಡಿಸಿದ್ದು, ಬ್ಯಾಕ್ಅಪ್ ಆರಂಭಿಕನಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ
4. ವಿರಾಟ್ ಕೊಹ್ಲಿ:
ಟೀಂ ಇಂಡಿಯಾ ರನ್ ಮಷೀನ್ ವಿರಾಟ್ ಕೊಹ್ಲಿ ಮೊದಲ 8 ಪಂದ್ಯಗಳಿಂದಲೂ ಆರೆಂಜ್ ಕ್ಯಾಪ್ ತಮ್ಮದಾಗಿಸಿಕೊಂಡಿದ್ದಾರೆ. ಮೊದಲ 8 ಪಂದ್ಯಗಳಿಂದ 379 ರನ್ ಸಿಡಿಸಿರುವ ಕೊಹ್ಲಿ, ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವುದು ಖಚಿತ.
5. ಸೂರ್ಯಕುಮಾರ್ ಯಾದವ್:
ಭಾರತದ ಮಿಸ್ಟರ್ 360 ಖ್ಯಾತಿಯ ಸೂರ್ಯಕುಮಾರ್ ಯಾದವ್ ಕೂಡಾ ಭಾರತ ತಂಡದಲ್ಲಿ ಸ್ಥಾನ ಪಡೆಯುವುದರಲ್ಲಿ ಯಾವುದೇ ಅನುಮಾನವಿಲ್ಲ. ಫಿಟ್ನೆಸ್ ಸಮಸ್ಯೆಯಿಂದ ಐಪಿಎಲ್‌ನ ಆರಂಭಿಕ ಕೆಲ ಪಂದ್ಯಗಳಿಂದ ಹೊರಗುಳಿದಿದ್ದ ಸೂರ್ಯ, ಇದೀಗ ಮೈಚಳಿ ಬಿಟ್ಟು ಬ್ಯಾಟ್ ಬೀಸುತ್ತಿದ್ದಾರೆ.
6. ರಿಷಭ್ ಪಂತ್:
ಅಪಘಾತದಿಂದಾಗಿ ಒಂದು ವರ್ಷಗಳ ಕಾಲ ಕ್ರಿಕೆಟ್‌ನಿಂದ ಹೊರಗುಳಿದಿದ್ದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್, ಐಒಉಎಲ್ ಮೂಲಕ ಭರ್ಜರಿಯಾಗಿಯೇ ಕ್ರಿಕೆಟ್‌ಗೆ ಕಮ್‌ಬ್ಯಾಕ್ ಮಾಡಿದ್ದಾರೆ. ಪಂತ್ ಕೂಡಾ ಭಾರತ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ.
7. ಸಂಜು ಸ್ಯಾಮ್ಸನ್:
ಸದ್ಯದ ಸಂಜು ಸ್ಯಾಮ್ಸನ್ ಬ್ಯಾಟಿಂಗ್ ಪ್ರದರ್ಶನವನ್ನು ಗಮನಿಸಿದರೆ, ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಎರಡನೇ ಆಯ್ಕೆಯ ವಿಕೆಟ್ ಕೀಪರ್ ರೂಪದಲ್ಲಿ ಭಾರತ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ದಟ್ಟವಾಗಿದೆ. ಸಂಜು 7 ಪಂದ್ಯಗಳಿಂದ 3 ಅರ್ಧಶತಕ ಸಹಿತ 276 ರನ್ ಚಚ್ಚಿದ್ದಾರೆ.
8. ರಿಂಕು ಸಿಂಗ್:
ಈ ಬಾರಿಯ ಟಿ20 ವಿಶ್ವಕಪ್ ಟೂರ್ನಿಯಲ್ಲಿ ರಿಂಕು ಸಿಂಗ್ ಮ್ಯಾಚ್ ಫಿನಿಶರ್ ಪಾತ್ರವನ್ನು ನಿಭಾಯಿಸುವ ಸಾಧ್ಯತೆಯಿದೆ. ಪವರ್‌ಫುಲ್ ಹಿಟ್ಟರ್ ಅಗಿರುವ ರಿಂಕು, ಪಂದ್ಯದ ದಿಕ್ಕನ್ನೇ ಬದಲಿಸುವ ಕ್ಷಮತೆ ಹೊಂದಿದ್ದಾರೆ.
9. ಹಾರ್ದಿಕ್ ಪಾಂಡ್ಯ:
ಸದ್ಯದ ಮಟ್ಟಿಗೆ ಹಾರ್ದಿಕ್ ಪಾಂಡ್ಯ ಅಷ್ಟೇನು ಉತ್ತಮ ಲಯದಲ್ಲಿ ಇಲ್ಲವಾದರೂ, ಅವರ ಆಲ್ರೌಂಡ್ ಸಾಮರ್ಥ್ಯವನ್ನು ಅಲ್ಲಗಳೆಯುವಂತಿಲ್ಲ. ಪಾಂಡ್ಯ ತಂಡದೊಳಗಿದ್ದರೆ ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗಕ್ಕೆ ಮತ್ತಷ್ಟು ಬಲ ಬರುವ ಸಾಧ್ಯತೆಯಿದ್ದು, ವಿಶ್ವಕಪ್ ತಂಡಕ್ಕೆ ಆಯ್ಕೆಯಾಗುವ ಸಾಧ್ಯತೆ ಹೆಚ್ಚಿದೆ.
10. ರವೀಂದ್ರ ಜಡೇಜಾ:
ಟೀಂ ಇಂಡಿಯಾದ ಮತ್ತೋರ್ವ ಅನುಭವಿ ಆಲ್ರೌಂಡರ್ ರವೀಂದ್ರ ಜಡೇಜಾ ಅವರ ಜಾದೂ ಈ ಬಾರಿಯ ಐಪಿಎಲ್‌ನಲ್ಲೂ ಮುಂದುವರೆಸಿದ್ದಾರೆ. ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್‌ನಲ್ಲಿ ಜಡ್ಡೂ ತಂಡದ ಆಸ್ತಿ ಎಂದರೆ ಅತಿಶಯೋಕ್ತಿಯಾಗಲಾರದು.
11. ಕುಲ್ದೀಪ್ ಯಾದವ್:
ಸದ್ಯ ಒಳ್ಳೆಯ ಫಾರ್ಮ್‌ನಲ್ಲಿರುವ ಲೆಗ್‌ಸ್ಪಿನ್ನರ್ ಕುಲ್ದೀಪ್ ಯಾದವ್, ಈಗಾಗಲೇ ಈ ಐಪಿಎಲ್ ಟೂರ್ನಿಯಲ್ಲಿ ಮೊದಲ 5 ಪಂದ್ಯಗಳನ್ನಾಡಿ 10 ವಿಕೆಟ್ ಕಬಳಿಸಿದ್ದಾರೆ. ಕುಲ್ದೀಪ್ ಕೂಡಾ ಭಾರತ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಹೆಚ್ಚಿದೆ.
12. ಯುಜುವೇಂದ್ರ ಚಹಲ್:
17ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಅತಿ ಅಪಾಯಕಾರಿ ಸ್ಪಿನ್ನರ್ ಎನಿಸಿಕೊಂಡಿರುವ ಚಹಲ್, ಪರ್ಪಲ್ ಕ್ಯಾಪ್‌ನಲ್ಲಿ ಬುಮ್ರಾಗೆ ಸಡ್ಡು ಹೊಡೆಯುತ್ತಿದ್ದು, ಚುಟುಕು ಕ್ರಿಕೆಟ್ ವಿಶ್ವಕಪ್ ಟೂರ್ನಿಗೆ ಮೊದಲ ಆಯ್ಕೆಯ ಸ್ಪಿನ್ನರ್ ಆಗಿ ಸ್ಥಾನ ಪಡೆಯುವ ಸಾಧ್ಯತೆಯಿದೆ.
13. ಜಸ್ಪ್ರೀತ್ ಬುಮ್ರಾ:
ಭಾರತದ ನಂ.1 ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ, ಸದ್ಯ ಐಪಿಎಲ್‌ನಲ್ಲೂ ಅದ್ಭುತ ಪ್ರದರ್ಶನ ತೋರಿ ಪರ್ಪಲ್ ಕ್ಯಾಪ್ ತಮ್ಮದಾಗಿಸಿಕೊಂಡಿದ್ದಾರೆ. ಬುಮ್ರಾ ಭಾರತ ತಂಡದ ಬೌಲಿಂಗ್ ವಿಭಾಗವನ್ನು ಮುನ್ನಡೆಸಲಿದ್ದಾರೆ.
14. ಮೊಹಮ್ಮದ್ ಸಿರಾಜ್:
ಮೊಹಮ್ಮದ್ ಸಿರಾಜ್, ಈ ಬಾರಿಯ ಐಪಿಎಲ್‌ನಲ್ಲಿ ಲಯ ಕಳೆದುಕೊಂಡಿದ್ದಾರೆ. ಆದರೆ ಚುಟುಕು ಕ್ರಿಕೆಟ್‌ನಲ್ಲಿ ಸಾಕಷ್ಟು ಅನುಭವಿ ಹೊಂದಿರುವ ಸಿರಾಜ್‌ಗೆ ಆಯ್ಕೆ ಸಮಿತಿ ಮಣೆಹಾಕುವ ಸಾಧ್ಯತೆ ಹೆಚ್ಚಿದೆ.
15. ಆರ್ಶದೀಪ್ ಸಿಂಗ್:
ಎಡಗೈ ವೇಗಿ ಆರ್ಶದೀಪ್ ಸಿಂಗ್, ಪಂಜಾಬ್ ಕಿಂಗ್ಸ್ ತಂಡದ ಪ್ರಮುಖ ವೇಗಿಯಾಗಿದ್ದು, ಪವರ್ ಪ್ಲೇ ಹಾಗೂ ಡೆತ್ ಓವರ್‌ನಲ್ಲಿ ಮಿಂಚಿನ ದಾಳಿ ನಡೆಸುವ ಸಾಮರ್ಥ್ಯ ಹೊಂದಿದ್ದು, ಮತ್ತೊಮ್ಮೆ ಟಿ20 ವಿಶ್ವಕಪ್ ತಂಡಕ್ಕೆ ಆಯ್ಕೆಯಾಗುವುದು ಬಹುತೇಕ ಖಚಿತ ಎನಿಸಿದೆ.