2022ರಲ್ಲಿ ಮಹಿಳಾ ಕ್ರಿಕೆಟ್‌ನಲ್ಲಿ ಸಂಚಲನ ಮೂಡಿಸಿದ ಟಾಪ್ 5 ಕ್ಷಣಗಳಿವು...!

Published : Dec 28, 2022, 05:50 PM IST

ಬೆಂಗಳೂರು: 2022ರಲ್ಲಿ ಭಾರತೀಯ ಪುರುಷರ ತಂಡ ಮಾತ್ರವಲ್ಲದೇ ಮಹಿಳಾ ಕ್ರಿಕೆಟ್ ತಂಡವು ಅದ್ಭುತ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದಾರೆ. ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಕಾಮನ್‌ವೆಲ್ತ್‌ ಗೇಮ್ಸ್‌ನಿಂದ ಹಿಡಿದು ಇಂಗ್ಲೆಂಡ್ ನೆಲದಲ್ಲಿ ಏಕದಿನ ಸರಣಿ ಕ್ಲೀನ್‌ಸ್ವೀಪ್ ಮಾಡುವವರೆಗೆ ಹಲವು ಸ್ಮರಣೀಯ ಕ್ಷಣಗಳನ್ನು ಭಾರತೀಯ ಮಹಿಳಾ ಕ್ರಿಕೆಟ್ ತಂಡವು ಕಟ್ಟಿಕೊಟ್ಟಿದೆ. ಇದರ ಒಂದು ಝಲಕ್ ಇಲ್ಲಿದೆ ನೋಡಿ  

PREV
15
2022ರಲ್ಲಿ ಮಹಿಳಾ ಕ್ರಿಕೆಟ್‌ನಲ್ಲಿ ಸಂಚಲನ ಮೂಡಿಸಿದ ಟಾಪ್ 5 ಕ್ಷಣಗಳಿವು...!
1. ದೀಪ್ತಿ ಶರ್ಮಾ ಮಾಡಿದ ಮಂಕಡ್‌ ರನೌಟ್‌- ಟಾಕ್ ಆಫ್‌ ದಿ ಟೌನ್:

ಇಂಗ್ಲೆಂಡ್ ಎದುರಿನ ಮೂರನೇ ಏಕದಿನ ಪಂದ್ಯದ ವೇಳೆ ದೀಪ್ತಿ ಶರ್ಮಾ, ನಾನ್‌ಸ್ಟ್ರೈಕರ್‌ನಲ್ಲಿದ್ದ ಚಾರ್ಲಿ ಡೀನ್ ಅವರನ್ನು ರನೌಟ್‌ ಮಾಡಿದ್ದು, 2022ರಲ್ಲಿ ಅತಿಹೆಚ್ಚು ಚರ್ಚೆಗೆ ಒಳಪಟ್ಟ ವಿಚಾರ ಎನಿಸಿಕೊಂಡಿತ್ತು. ದೀಪ್ತಿ ಶರ್ಮಾ ಅವರ ಪರ ಹಾಗೂ ವಿರುದ್ದ ಹಲವು ಚರ್ಚೆಗಳು ನಡೆದಿದ್ದವು.

25
2. ಇಂಗ್ಲೆಂಡ್ ವಿರುದ್ದ ಇಂಗ್ಲೆಂಡ್ ನೆಲದಲ್ಲೇ ಏಕದಿನ ಸರಣಿ ಗೆದ್ದು ಬೀಗಿದ್ದ ಭಾರತ ಮಹಿಳಾ ಕ್ರಿಕೆಟ್ ತಂಡ

ಭಾರತ ಹಾಗೂ ಇಂಗ್ಲೆಂಡ್ ಮಹಿಳಾ ತಂಡಗಳ ನಡುವಿನ ಮೂರನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಗೆಲ್ಲಲು 17 ರನ್‌ಗಳಿದ್ದಾಗ, ದೀಪ್ತಿ ಶರ್ಮಾ ಮಂಕಡ್ ರನೌಟ್‌ ಮಾಡುವ ಮೂಲಕ ಭಾರತ ತಂಡವು ಗೆಲುವು ದಾಖಲಿಸುವಲ್ಲಿ ಮಹತ್ತರ ಪಾತ್ರವಹಿಸಿದ್ದರು. ಈ ಮೂಲಕ ಮೊದಲ ಬಾರಿಗೆ ಭಾರತ ಮಹಿಳಾ ಕ್ರಿಕೆಟ್‌ ತಂಡವು, ಇಂಗ್ಲೆಂಡ್‌ ನೆಲದಲ್ಲಿ 3-0 ಅಂತರದಲ್ಲಿ ಏಕದಿನ ಸರಣಿ ಕ್ಲೀನ್‌ಸ್ವೀಪ್ ಮಾಡಿ ಚಾರಿತ್ರಿಕ ಸಾಧನೆ ಮಾಡಿತ್ತು
 

35
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದ ಹರ್ಮನ್‌ಪ್ರೀತ್ ಕೌರ್ ಪಡೆ

ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ 2022ರ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ಗೆ ಅವಕಾಶ ಮಾಡಿಕೊಡಲಾಗಿತ್ತು. ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ಮಹಿಳಾ ಕ್ರಿಕೆಟ್ ತಂಡವು ಮೊದಲ ಪ್ರಯತ್ನದಲ್ಲೇ ಫೈನಲ್ ಪ್ರವೇಶಿಸಿ ಬೆಳ್ಳಿ ಪದಕ ಜಯಿಸುವಲ್ಲಿ ಯಶಸ್ವಿಯಾಗಿತ್ತು.
 

45
ಮಹತ್ವದ ಫೈನಲ್‌ನಲ್ಲಿ ಮತ್ತೊಮ್ಮೆ ಆಸ್ಟ್ರೇಲಿಯಾಗೆ ಶರಣಾದ ಭಾರತ ಮಹಿಳಾ ಕ್ರಿಕೆಟ್ ತಂಡ:

2020ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡವು ಆಸ್ಟ್ರೇಲಿಯಾಗೆ ಶರಣಾಗಿತ್ತು. ಇದೀಗ, ಬರ್ಮಿಂಗ್‌ಹ್ಯಾಮ್‌ ಕಾಮನ್‌ವೆಲ್ತ್‌ ಗೇಮ್ಸ್‌ನ ಫೈನಲ್‌ನಲ್ಲಿ ಆಸ್ಟ್ರೇಲಿಯಾ ಎದುರು 9 ರನ್‌ಗಳ ರೋಚಕ ಸೋಲು ಅನುಭವಿಸುವ ಮೂಲಕ ಚಿನ್ನದ ಪದಕ ಗೆಲ್ಲುವ ಅವಕಾಶವನ್ನು ಹರ್ಮನ್‌ಪ್ರೀತ್ ಕೌರ್ ಪಡೆ ಕೈಚೆಲ್ಲಿತ್ತು.
 

55
ಲಿಂಗ ಸಮಾನತೆ ವಿಚಾರದಲ್ಲಿ ಐತಿಹಾಸಿಕ ನಿರ್ಧಾರ ಕೈಗೊಂಡ ಬಿಸಿಸಿಐ

ಕಳೆದ ಅಕ್ಟೋಬರ್‌ನಲ್ಲಿ ಬಿಸಿಸಿಐ, ಲಿಂಗ ಸಮಾನತೆ ಸಾರುವ ಉದ್ದೇಶದಿಂದ ಐತಿಹಾಸಿಕ ತೀರ್ಮಾನವೊಂದನ್ನು ತೆಗೆದುಕೊಂಡಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ ಟೂರ್ನಿಯಲ್ಲಿ ಭಾರತವನ್ನು ಪ್ರತಿನಿಧಿಸುವ ಪುರುಷ ಹಾಗೂ ಮಹಿಳಾ ಕ್ರಿಕೆಟಿಗರಿಗೆ ಸಮಾನ ವೇತನ ನೀಡುವ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದೆ. ಈ ಮೂಲಕ ನ್ಯೂಜಿಲೆಂಡ್ ಬಳಿಕ ಪುರುಷ ಹಾಗೂ ಮಹಿಳಾ ಕ್ರಿಕೆಟಿಗರಿಗೆ ಸಮಾನ ವೇತನ ನೀಡಿದ ಎರಡನೇ ಕ್ರಿಕೆಟ್ ಮಂಡಳಿ ಎನ್ನುವ ಹಿರಿಮೆಗೆ ಬಿಸಿಸಿಐ ಪಾತ್ರವಾಗಿದೆ.
 

Read more Photos on
click me!

Recommended Stories