18ನೇ ಸೀಸನ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟ್ರೋಫಿಗೆ ಮುತ್ತಿಟ್ಟಿದೆ. ಇಂದು ರಾಜಧಾನಿ ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯಯಾತ್ರೆ ನಡೆಯಲಿದೆ. ಟ್ರೋಫಿ ಜೊತೆ ತಂಡದ ಆಟಗಾರರು ಮೆರವಣಿಗೆಯಲ್ಲಿ ಭಾಗಿಯಾಗಲಿದ್ದಾರೆ.
25
ಇಂದು ಮಧ್ಯಾಹ್ನ 3.30ಕ್ಕೆ ಬೆಂಗಳೂರು ತಂಡದ ವಿಜಯಯಾತ್ರೆ ನಡೆಯಲಿದೆ. ವಿಧಾನಸೌಧದಿಂದ ಚಿನ್ನಸ್ವಾಮಿ ಕ್ರೀಡಾಂಗಣದವರೆಗೆ ವಿಜಯಯಾತ್ರೆ ನಡೆಯಲಿದೆ. ಈ ವೇಳೆ ಆರ್‌ಸಿಬಿ ಅಭಿಮಾನಿಗಳು ಟ್ರೋಫಿಯನ್ನು ಕಣ್ತುಂಬಿಕೊಳ್ಳಬಹುದು.
35
ಅಹಮ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ, ಪಂಜಾಬ್ ಕಿಂಗ್ಸ್ ವಿರುದ್ದ 6 ರನ್ ಗೆಲುವು ದಾಖಲಿಸಿದೆ. ಈ ಮೂಲಕ ಚೊಚ್ಚಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದುಕೊಂಡಿದೆ.
45
ಆರ್‌ಸಿಬಿ ಗೆಲುವು ದಾಖಲಿಸುತ್ತಿದ್ದಂತೆ ವಿರಾಟ್ ಕೊಹ್ಲಿ ಭಾವುಕರಾಗಿದ್ದರೆ. ಮೈದಾನದಲ್ಲೇ ಕಣ್ಣೀರಿಟ್ಟಿದ್ದಾರೆ. ಇತ್ತ ಸಂಭ್ರಮ ಮುಗಿಲು ಮುಟ್ಟಿದೆ. ಇಡೀ ತಂಡ ಭಾವುಕಗೊಂಡಿತ್ತು.
55
ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಬಗ್ಗು ಬಡಿದು ಕಪ್ ಮುಡುಗೇರಿಸಿಕೊಂಡ ಆರ್‌ಸಿಬಿ ತಂಡಕ್ಕೆ ಅಭಿನಂದನೆಗಳು. ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.