ದುಬೈ: 14ನೇ ಆವೃತ್ತಿಯ ಐಪಿಎಲ್ (IPL 2021) ಟೂರ್ನಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯವಾಗಿದ್ದು, ಅಗ್ರ 4 ತಂಡಗಳು ಪ್ಲೇ ಆಫ್‌ಗೆ ಲಗ್ಗೆಯಿಡುವಲ್ಲಿ ಯಶಸ್ವಿಯಾಗಿವೆ. ಪ್ಲೇ-ಆಫ್ (Play Off) ನಾಕೌಟ್ ಪಂದ್ಯಗಳು ಅಕ್ಟೋಬರ್ 10ರಿಂದ ಆರಂಭವಾಗಲಿವೆ. ಬರೋಬ್ಬರಿ 5 ದಿನಗಳ ಕಾಲ ಭರ್ಜರಿ ಪ್ಲೇ ಆಫ್ ಪಂದ್ಯಗಳು ನಡೆಯಲಿವೆ. ಲೀಗ್ ಹಂತದಲ್ಲಿ 56 ಪಂದ್ಯಗಳು ಅತ್ಯಂತ ಯಶಸ್ವಿಯಾಗಿ ಜರುಗಿದ್ದು, ಡೆಲ್ಲಿ ಕ್ಯಾಪಿಟಲ್ಸ್ (Delhi Capitals), ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) , ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ಹಾಗೂ ಕೋಲ್ಕತ ನೈಟ್ ರೈಡರ್ಸ್ (Kolkata Knight Riders) ತಂಡಗಳು ಪ್ಲೇ ಆಫ್‌ಗೆ ಲಗ್ಗೆಯಿಡುವಲ್ಲಿ ಯಶಸ್ವಿಯಾಗಿವೆ. ಇದೀಗ ಯಾವ ತಂಡವು ಪ್ಲೇ ಆಫ್‌ನಲ್ಲಿ ಮತ್ತೆ ಯಾವ ತಂಡವನ್ನು ಎಲ್ಲಿ? ಯಾವಾಗ ಎದುರಿಸಲಿವೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.
14ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಕಳೆದ ಆವೃತ್ತಿಯ ರನ್ನರ್ ಅಪ್ ಡೆಲ್ಲಿ ಕ್ಯಾಪಿಟಲ್ಸ್ ತಂಡವು 14 ಪಂದ್ಯಗಳನ್ನಾಡಿ 10 ಗೆಲುವುಗಳೊಂದಿಗೆ 20 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಇನ್ನು ಚೆನ್ನೈ ಸೂಪರ್ ಕಿಂಗ್ಸ್ 14 ಪಂದ್ಯಗಳಲ್ಲಿ 9 ಗೆಲುವು ಸಹಿತ 18 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.
27
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೂಡಾ 14 ಪಂದ್ಯಗಳಲ್ಲಿ 9 ಗೆಲುವು ಸಾಧಿಸಿ 18 ಅಂಕ ಪಡೆದಿದೆಯಾದರೂ, ನೆಟ್ ರನ್‌ರೇಟ್‌ನಲ್ಲಿ ಕೊಂಚ ಹಿನ್ನೆಡೆ ಅನುಭವಿಸಿದ್ದರಿಂದ ಮೂರನೇ ಸ್ಥಾನದಲ್ಲಿದೆ. ಇನ್ನು ಇಯಾನ್ ಮಾರ್ಗನ್ ನೇತೃತ್ವದ ಕೆಕೆಆರ್ ತಂಡವು 14 ಪಂದ್ಯಗಳಲ್ಲಿ 7 ಗೆಲುವು ದಾಖಲಿಸುವ ಮೂಲಕ 14 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ 4ನೇ ಸ್ಥಾನ ಪಡೆದು ಪ್ಲೇ ಆಫ್ ಸ್ಥಾನ ಖಚಿತ ಪಡಿಸಿಕೊಂಡಿದೆ.
Photo Credit-iplt20.com
37
ಪ್ಲೇ ಆಫ್‌ನಲ್ಲಿ ಮುಖಾಮುಖಿ
ಐಪಿಎಲ್ 2021 ಟೂರ್ನಿಯ ಮೊದಲ ಪ್ಲೇ ಆಫ್ ಪಂದ್ಯವು ಅಕ್ಟೋಬರ್ 10 ರಂದು ಸಂಜೆ 7.30 ಆರಂಭವಾಗಲಿದ್ದು, ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಅಂಕಪಟ್ಟಿಯಲ್ಲಿ ಮೊದಲೆರಡು ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಕಾದಾಡಲಿವೆ. ಈ ಹೈವೋಲ್ಟೆಜ್ ಪಂದ್ಯಕ್ಕೆ ದುಬೈ ಅಂತಾರಾಷ್ಟ್ರೀಯ ಮೈದಾನ ಆತಿಥ್ಯ ವಹಿಸಿದೆ. ಈ ಪಂದ್ಯದಲ್ಲಿ ಗೆಲುವು ಸಾಧಿಸಿದ ತಂಡವು ನೇರವಾಗಿ ಫೈನಲ್‌ಗೆ ಲಗ್ಗೆಯಿಟ್ಟರೆ, ಸೋತ ತಂಡವು ಎರಡನೇ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಪಡೆಯಲಿದೆ.
(photo Source- www.iplt20.com)
47
RCB vs KKR
ಇದಾದ ಬಳಿಕ ಅಕ್ಟೋಬರ್ 11ರಂದು ಸಂಜೆ 7.30ಕ್ಕೆ ಎಲಿಮಿನೇಟರ್ ಪಂದ್ಯವು ನಡೆಯಲಿದೆ. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ ನೈಟ್ ರೈಡರ್ಸ್ ತಂಡಗಳು ಸೆಣಸಾಡಲಿದ್ದು, ಈ ಪಂದ್ಯಕ್ಕೆ ಶಾರ್ಜಾ ಮೈದಾನ ಆತಿಥ್ಯವನ್ನು ವಹಿಸಿದೆ.
57
RCB IPL Trophy
ಎಲಿಮಿನೇಟರ್ ಪಂದ್ಯದಲ್ಲಿ ಗೆಲುವು ಸಾಧಿಸಿದ ತಂಡವು ಎರಡನೇ ಕ್ವಾಲಿಫೈಯರ್ ಪಂದ್ಯವನ್ನಾಡಲು ಅರ್ಹತೆಯನ್ನು ಪಡೆದರೆ, ಸೋತ ತಂಡವು ಅಧಿಕೃತವಾಗಿ ಟೂರ್ನಿಯಿಂದ ಹೊರಬೀಳಲಿವೆ. ಹೀಗಾಗಿ ಎರಡು ತಂಡಗಳು ಗೆಲುವಿಗಾಗಿ ಜಿದ್ದಾಜಿದ್ದಿನ ಪೈಪೋಟಿ ನಡೆಸಲಿವೆ.
67
ಇನ್ನು ಅಕ್ಟೋಬರ್ 12ರಂದು ಯಾವುದೇ ಪಂದ್ಯಗಳು ಇರುವುದಿಲ್ಲ. ಒಂದು ದಿನದ ಬಿಡುವಿನ ಬಳಿಕ ಅಕ್ಟೋಬರ್ 13ರಂದು ಎರಡನೇ ಕ್ವಾಲಿಫೈಯರ್ ಪಂದ್ಯವು ಜರುಗಲಿದ್ದು, ಈ ಪಂದ್ಯದಲ್ಲಿ ಮೊದಲ ಕ್ವಾಲಿಫೈಯರ್‌ನಲ್ಲಿ ಸೋತ ತಂಡ ಹಾಗೂ ಎಲಿಮಿನೇಟರ್ ಪಂದ್ಯದಲ್ಲಿ ಗೆಲುವು ಸಾಧಿಸಿದ ತಂಡಗಳು ಸೆಣಸಾಟ ನಡೆಸಲಿವೆ. ಈ ಪಂದ್ಯದಲ್ಲಿ ಗೆಲುವು ಸಾಧಿಸಿದ ತಂಡವು ಫೈನಲ್‌ಗೆ ಲಗ್ಗೆಯಿಟ್ಟರೆ, ಸೋತ ತಂಡ ಟೂರ್ನಿಯಿಂದ ಹೊರಬೀಳಲಿದೆ. ಈ ಪಂದ್ಯವು ಸಂಜೆ 7.30 ಕ್ಕೆ ಶಾರ್ಜಾ ಕ್ರಿಕೆಟ್ ಮೈದಾನದಲ್ಲಿ ಆರಂಭವಾಗಲಿದೆ.
(photo source- iplt20.com)
77
ಅಕ್ಟೋಬರ್ 15ರ ಸಂಜೆ 7.30ಕ್ಕೆ 14ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಫೈನಲ್ ಪಂದ್ಯವು ಆರಂಭವಾಗಲಿದ್ದು, ಪ್ರಶಸ್ತಿಗಾಗಿ ಪೈಪೋಟಿ ನಡೆಸಲಿವೆ. ಈ ಮಹತ್ವದ ಪಂದ್ಯಕ್ಕೆ ದುಬೈನ ಅಂತಾರಾಷ್ಟ್ರೀಯ ಮೈದಾನ ಆತಿಥ್ಯವನ್ನು ವಹಿಸಲಿದೆ. ಅಕ್ಟೋಬರ್ 15ರಂದು ಆರ್‌ಸಿಬಿ, ಡೆಲ್ಲಿ, ಕೆಕೆಆರ್ ಅಥವಾ ಸಿಎಸ್‌ಕೆ ಈ ನಾಲ್ಕು ತಂಡಗಳ ಪೈಕಿ ಒಂದು ತಂಡ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಲಿದೆ.