ಬೆಂಗಳೂರು: ಬಹುನಿರೀಕ್ಷಿತ 14ನೇ ಆವೃತ್ತಿಯ ಐಪಿಎಲ್ (IPL 2021) ಚಾಂಪಿಯನ್ ಯಾರಾಗಲಿದ್ದಾರೆ ಎನ್ನುವ ಕುತೂಹಲ ಕ್ಷಣದಿಂದ ಕ್ಷಣಕ್ಕೆ ಹೆಚ್ಚಾಗುತ್ತಿದೆ. ಮಹೇಂದ್ರ ಸಿಂಗ್ ಧೋನಿ (MS Dhoni) ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ಹಾಗೂ ಇಯಾನ್ ಮಾರ್ಗನ್ (Eoin Morgan) ನೇತೃತ್ವದ ಕೋಲ್ಕತ ನೈಟ್ ರೈಡರ್ಸ್ (Kolkata Knight Riders) ತಂಡಗಳಿಂದು ದುಬೈನ ಅಂತಾರಾಷ್ಟ್ರೀಯ ಮೈದಾನದಲ್ಲಿ ಸೆಣಸಾಟ ನಡೆಸಲಿವೆ. ಐಪಿಎಲ್ ಫೈನಲ್ ಪಂದ್ಯ ನಡೆಯಲಿರುವ ದುಬೈ ಅಂತಾರಾಷ್ಟ್ರೀಯ ಮೈದಾನದ ಅಂಕಿ-ಅಂಶಗಳ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ
2021ನೇ ಸಾಲಿನ ಐಪಿಎಲ್ ಟೂರ್ನಿಯ ಫೈನಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೋಲ್ಕತ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗುತ್ತಿದ್ದು, ಈ ಹೈವೋಲ್ಟೇಜ್ ಪಂದ್ಯಕ್ಕೆ ದುಬೈನ ಅಂತಾರಾಷ್ಟ್ರೀಯ ಮೈದಾನ ಆತಿಥ್ಯವನ್ನು ವಹಿಸಿದೆ.
210
CSK vs KKR
ಎರಡು ಬಲಿಷ್ಠ ತಂಡಗಳ ನಡುವಿನ ಕಾದಾಟಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇಂದು(ಅ.15) ಸಂಜೆ 7.30ಕ್ಕೆ ಸರಿಯಾಗಿ ಐಪಿಎಲ್ ಕಪ್‌ಗಾಗಿ ಕೆಕೆಆರ್ ಹಾಗೂ ಸಿಎಸ್‌ಕೆ ತಂಡಗಳ ನಡುವೆ ಸೆಣಸಾಟ ಆರಂಭವಾಗಲಿದೆ.
310
ಯುಎಇ ಚರಣದ ಐಪಿಎಲ್ ಪಂದ್ಯಾವಳಿಯಲ್ಲಿ ದುಬೈ ಅಂತಾರಾಷ್ಟ್ರೀಯ ಮೈದಾನದ ಪಿಚ್ ಬ್ಯಾಟ್ಸ್‌ಮನ್ ಹಾಗೂ ಬೌಲರ್‌ಗಳಿಗೆ ಸಮಾನ ಬೆಂಬಲ ನೀಡಿರುವುದರಿಂದ ಫೈನಲ್ ಪಂದ್ಯ ಸಾಕಷ್ಟು ಜಿದ್ದಾಜಿದ್ದಿನಿಂದ ಕೂಡಿರುವ ನಿರೀಕ್ಷೆಯಿದೆ.
410
ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ಒಟ್ಟಾರೆ ಇದುವರೆಗೂ 105 ಪಂದ್ಯಗಳು ನಡೆದಿದ್ದು, ಮೊದಲು ಬ್ಯಾಟಿಂಗ್ ಮಾಡಿದ ತಂಡವು 41 ಬಾರಿ ಗೆಲುವು ದಾಖಲಿಸಿದ್ದರೆ, ಚೇಸಿಂಗ್ ಮಾಡಿದ ತಂಡ 63 ಬಾರಿ ಗೆಲುವಿನ ರುಚಿ ಕಂಡಿದೆ. ಒಂದು ಪಂದ್ಯ ಮಾತ್ರ ಟೈ ಆಗಿದೆ.
510
ಇನ್ನು ಐಪಿಎಲ್ ಫೈನಲ್‌ನಲ್ಲಿ ಟಾಸ್ ಕೂಡಾ ಮಹತ್ವದ ಮಾತ್ರ ವಹಿಸುವ ಸಾಧ್ಯತೆಯಿದೆ. ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ಕಳೆದ 8 ಪಂದ್ಯಗಳಲ್ಲಿ ಚೇಸಿಂಗ್ ಮಾಡಿದ ತಂಡ ಗೆಲುವು ಪಡೆದಿದೆ. ಹೀಗಾಗಿ ಇಂದಿನ ಪಂದ್ಯದಲ್ಲೂ ಟಾಸ್ ಗೆದ್ದ ನಾಯಕ ಮೊದಲು ಬೌಲಿಂಗ್ ಆಯ್ದುಕೊಳ್ಳುವ ಸಾಧ್ಯತೆ ಹೆಚ್ಚಿದೆ.
610
ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಗರಿಷ್ಠ ಸ್ಕೋರ್ 219 ರನ್ ದಾಖಲಾಗಿದದರೆ, ಕನಿಷ್ಠ ಸ್ಕೋರ್ 59 ರನ್ ಆಗಿದೆ. ಇನ್ನು ದುಬೈ ಪಿಚ್‌ನ ಸರಾಸರಿ ಸ್ಕೋರ್ 156 ರನ್‌ಗಳಾಗಿವೆ.
710
ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಿನ ಮೊದಲ ಕ್ವಾಲಿಫೈಯರ್ ಪಂದ್ಯಕ್ಕೂ ದುಬೈ ಅಂತಾರಾಷ್ಟ್ರೀಯ ಮೈದಾನ ಆತಿಥ್ಯವನ್ನು ವಹಿಸಿತ್ತು. ಡೆಲ್ಲಿ ಮಣಿಸಿದ ಸಿಎಸ್‌ಕೆ ಫೈನಲ್ ಪ್ರವೇಶಿಸಿತ್ತು.
810
ಮೊದಲು ಬ್ಯಾಟಿಂಗ್ ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್, ಪೃಥ್ವಿ ಶಾ ಹಾಗೂ ರಿಷಭ್ ಪಂತ್ ಬಾರಿಸಿದ ಸಮಯೋಚಿತ ಅರ್ಧಶತಕಗಳ ನೆರವಿನಿಂದ 5 ವಿಕೆಟ್ ಕಳೆದುಕೊಂಡು 172 ರನ್ ಕಲೆಹಾಕಿತ್ತು.
910
ಈ ಗುರಿ ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್, ಆರಂಭಿಕ ಬ್ಯಾಟ್ಸ್‌ಮನ್ ಋತುರಾಜ್ ಗಾಯಕ್ವಾಡ್ ಹಾಗೂ ಕನ್ನಡಿಗ ರಾಬಿನ್ ಉತ್ತಪ್ಪ ಬಾರಿಸಿದ ಆಕರ್ಷಕ ಅರ್ಧಶತಕಗಳ ನೆರವಿನಿಂದ 6 ವಿಕೆಟ್‌ಗಳ ರೋಚಕ ಜಯ ಸಾಧಿಸಿತ್ತು.
1010
ಈ ಪಂದ್ಯದಲ್ಲಿ ಒಟ್ಟು 11 ವಿಕೆಟ್‌ಗಳು ಉದುರಿದ್ದವು. ಈ ಪೈಕಿ 8 ವಿಕೆಟ್‌ಗಳು ವೇಗದ ಬೌಲರ್‌ಗಳ ಪಾಲಾದರೆ, ಕೇವಲ 3 ವಿಕೆಟ್‌ಗಳು ಸ್ಪಿನ್ನರ್ ಕೈವಶವಾಗಿದ್ದವು. ಹೀಗಾಗಿ ಇಂದಿನ ಪಂದ್ಯದಲ್ಲಿ ಯಾರೆಲ್ಲಾ ಕಣಕ್ಕಿಳಿಯಲಿದ್ದಾರೆ ಎನ್ನುವ ಕುರಿತಂತೆ ಕುತೂಹಲ ಜೋರಾಗಿದೆ.