14ನೇ ಐಪಿಎಲ್‌ಗೂ ಮುನ್ನ ಆರ್‌ಸಿಬಿಗೆ ಬಿಗ್‌ ಶಾಕ್‌: ಆಸೀಸ್‌ ಸ್ಫೋಟಕ ಬ್ಯಾಟ್ಸ್‌ಮನ್‌ ಟೂರ್ನಿಯಿಂದ ಔಟ್‌..!

Suvarna News   | Asianet News
Published : Mar 12, 2021, 09:28 AM IST

ಬೆಂಗಳೂರು: ಬಹುನಿರೀಕ್ಷಿತ 14ನೇ ಆವೃತ್ತಿಯ ಐಪಿಎಲ್‌ ಟೂರ್ನಿಗೆ ಕ್ಷಣಗಣನೆ ಆರಂಭವಾಗಿದ್ದು, ಬಿಸಿಸಿಐ ಈಗಾಗಲೇ ವೇಳಾಪಟ್ಟಿಯನ್ನು ಪ್ರಕಟಿಸಿದೆ. 14ನೇ ಆವೃತ್ತಿಯ ಐಪಿಎಲ್‌ ಟೂರ್ನಿಯು ಏಪ್ರಿಲ್‌ 09ರಿಂದ ಆರಂಭವಾಗಲಿದೆ. ಇನ್ನು ಚೊಚ್ಚಲ ಐಪಿಎಲ್‌ ಟ್ರೋಫಿಯ ಕನವರಿಕೆಯಲ್ಲಿರುವ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಬಾರಿ ನಡೆದ ಆಟಗಾರರ ಹರಾಜಿನಲ್ಲಿ ಸಾಕಷ್ಟು ಅಳೆದು-ತೂಗಿ ಆಟಗಾರರನ್ನು ಖರೀದಿಸುವ ಮೂಲಕ ಸಿದ್ದತೆ ಆರಂಭಿಸಿತ್ತು. ಹೀಗಿರುವಾಗಲೇ ಆರ್‌ಸಿಬಿ ತಂಡದ ಸ್ಪೋಟಕ ಬ್ಯಾಟ್ಸ್‌ಮನ್ 14ನೇ ಆವೃತ್ತಿಯ ಐಪಿಎಲ್‌ನಿಂದ ಹಿಂದೆ ಸರಿದಿದ್ದಾರೆ. ಆತನ ಬದಲಿಗೆ ಮತ್ತೊಬ್ಬ ಕಿವೀಸ್ ಆಟಗಾರ ಆರ್‌ಸಿಬಿ ತಂಡ ಕೂಡಿಕೊಂಡಿದ್ದಾರೆ.  

PREV
19
14ನೇ ಐಪಿಎಲ್‌ಗೂ ಮುನ್ನ ಆರ್‌ಸಿಬಿಗೆ ಬಿಗ್‌ ಶಾಕ್‌: ಆಸೀಸ್‌ ಸ್ಫೋಟಕ ಬ್ಯಾಟ್ಸ್‌ಮನ್‌ ಟೂರ್ನಿಯಿಂದ ಔಟ್‌..!

ಚೊಚ್ಚಲ ಐಪಿಎಲ್‌ ಟ್ರೋಫಿ ಮೇಲೆ ಕಣ್ಣಿಟ್ಟಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಈ ಬಾರಿಯಾದರೂ ಕಪ್‌ ಗೆದ್ದೇ ತೀರುವ ಹುಮ್ಮಸ್ಸಿನೊಂದಿಗೆ ಸಿದ್ದತೆ ನಡೆಸುತ್ತಿದೆ.

29

ಇತ್ತೀಚೆಗಷ್ಟೇ ಮುಕ್ತಾಯವಾದ ಐಪಿಎಲ್‌ ಆಟಗಾರರ ಹರಾಜಿನಲ್ಲಿ ಕೈಲ್ ಜೇಮಿಸನ್‌, ಗ್ಲೆನ್‌ ಮ್ಯಾಕ್ಸ್‌ವೆಲ್‌ರನ್ನು ದುಬಾರಿ ಮೊತ್ತ ನೀಡಿ ಖರೀದಿಸುವ ಮೂಲಕ ತಂಡದ ಆರ್‌ಸಿಬಿ ಆಡಳಿತ ಮಂಡಳಿ ತನ್ನ ನ್ಯೂನ್ಯತೆಗಳನ್ನು ಸರಿಪಡಿಸುವ ಯತ್ನ ನಡೆಸಿತ್ತು.

39

ಹೀಗಿರುವಾಗಲೇ ಟೂರ್ನಿ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗಲೇ ಆರ್‌ಸಿಬಿ ಯುವ ಸ್ಫೋಟಕ ಬ್ಯಾಟ್ಸ್‌ಮನ್‌ ಜೋಶ್ವಾ ಫಿಲಿಪಿ 14ನೇ ಆವೃತ್ತಿಯ ಐಪಿಎಲ್‌ನಿಂದ ಹಿಂದೆ ಸರಿದಿದ್ದಾರೆ.

49

ಯುಎಇನಲ್ಲಿ ನಡೆದ 13ನೇ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲಿ ಜೋಶ್ವಾ ಫಿಲಿಪಿ ಆರ್‌ಸಿಬಿ ಪರ 5 ಪಂದ್ಯಗಳನ್ನಾಡಿ 78 ರನ್‌ ಬಾರಿಸಿದ್ದರು.

59

ಬಿಗ್‌ಬ್ಯಾಶ್‌ ಟೂರ್ನಿಯಲ್ಲಿ ತಮ್ಮ ವಿಸ್ಪೋಟಕ ಬ್ಯಾಟಿಂಗ್ ಮೂಲಕ ಸಂಚಲನ ಮೂಡಿಸಿದ್ದ ಜೋಶ್ವಾ ಫಿಲಿಪಿಯನ್ನು ಆರ್‌ಸಿಬಿ ಫ್ರಾಂಚೈಸಿ ಕೇವಲ 20 ಲಕ್ಷ ರುಪಾಯಿ ಮೂಲ ಬೆಲೆಗೆ ಖರೀದಿಸಿತ್ತು. ಇದಾದ ಬಳಿಕ 14ನೇ ಆವೃತ್ತಿಯ ಆಟಗಾರರ ಹರಾಜಿಗೂ ಮುನ್ನ ಫಿಲಿಪಿಯನ್ನು ರೀಟೈನ್‌ ಮಾಡಿಕೊಂಡಿತ್ತು. 

69

ಜೋಶ್ವಾ ಫಿಲಿಪಿ 2021ರ ಐಪಿಎಲ್‌ನಿಂದ ಹಿಂದೆ ಸರಿದಿದ್ದು, ಅವರ ಬದಲಿಗೆ ನ್ಯೂಜಿಲೆಂಡ್‌ನ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ಫಿನ್‌ ಆ್ಯಲನ್‌ರನ್ನು ಆರ್‌ಸಿಬಿ ತನ್ನ ತಂಡಕ್ಕೆ ಸೇರ್ಪಡೆ ಮಾಡಿಕೊಂಡಿದೆ. 

79

21 ವರ್ಷದ ಆ್ಯಲನ್‌ ಕಳೆದ ವರ್ಷ ನ್ಯೂಜಿಲೆಂಡ್‌ ದೇಸಿ ಟಿ20 ಟೂರ್ನಿಯಲ್ಲಿ 11 ಇನ್ನಿಂಗ್ಸ್‌ಗಳಲ್ಲಿ 512 ರನ್‌ ಚಚ್ಚಿದ್ದರು. ಟಿ20 ಮಾದರಿಯಲ್ಲಿ ಅವರ ಸ್ಟ್ರೈಕ್‌ರೇಟ್‌ 183.27 ಇದೆ.

89

ಏಪ್ರಿಲ್‌ 09ರಂದು ನಡೆಯಲಿರುವ 14ನೇ ಆವೃತ್ತಿಯ ಐಪಿಎಲ್‌ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ವಿರುದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಮೊದಲ ಪಂದ್ಯವನ್ನಾಡಲಿದೆ. 

99

14ನೇ ಆವೃತ್ತಿಯಲ್ಲಾದರೂ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡ ಐಪಿಎಲ್‌ ಚಾಂಪಿಯನ್ ಆಗಿ ಹೊರಹೊಮ್ಮಲಿ ಎನ್ನುವುದು ಕೋಟ್ಯಾಂತರ ಅಭಿಮಾನಿಗಳ ಹಾರೈಕೆಯಾಗಿದೆ.

click me!

Recommended Stories