ಮೊದಲ ಪಂದ್ಯ: ಏಪ್ರಿಲ್ 10
ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮುಂಬೈನ ವಾಂಖೆಡೆ ಮೈದಾನದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಿತ್ತು. ಈ ಪಂದ್ಯದಲ್ಲಿ ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 7 ವಿಕೆಟ್‌ಗಳ ಜಯ ಸಾಧಿಸಿತ್ತು. ಸಿಎಸ್‌ಕೆ ಸೋಲಿನೊಂದಿಗೆ ಅಭಿಯಾನ ಆರಂಭಿಸಿತ್ತು. ಶಿಖರ್ ಧವನ್ ಆಕರ್ಷಕ ಅರ್ಧಶತಕ ಬಾರಿಸುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು
(photo Source- www.iplt20.com)
ಎರಡನೇ ಪಂದ್ಯ: ಏಪ್ರಿಲ್ 16
ಸಿಎಸ್‌ಕೆ ಎರಡನೇ ಪಂದ್ಯದಲ್ಲಿ ಗೆಲುವಿನ ಖಾತೆ ತೆರೆದಿತ್ತು. ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಧೋನಿ ಪಡೆ ಪಂಜಾಬ್ ಕಿಂಗ್ಸ್ ಎದುರು 6 ವಿಕೆಟ್‌ಗಳ ಜಯ ಸಾಧಿಸುವ ಮೂಲಕ ಅಂಕಗಳ ಖಾತೆ ತೆರೆದಿತ್ತು. ದೀಪಕ್ ಚಹಾರ್ 4 ವಿಕೆಟ್ ಕಬಳಿಸಿ ಗೆಲುವಿನ ರೂವಾರಿ ಎನಿಸಿದರು.
ಮೂರನೇ ಪಂದ್ಯ: ಏಪ್ರಿಲ್ 19
ರಾಜಸ್ಥಾನ ರಾಯಲ್ಸ್ ವಿರುದ್ದ ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು 45 ರನ್‌ಗಳ ಅಂತರದ ಭರ್ಜರಿ ಗೆಲುವು ಸಾಧಿಸಿತ್ತು. ಆಲ್ರೌಂಡ್ ಪ್ರದರ್ಶನದ ಮೂಲಕ ಮೋಯಿನ್ ಅಲಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
4ನೇ ಪಂದ್ಯ: ಏಪ್ರಿಲ್ 21
ನಾಲ್ಕನೇ ಪಂದ್ಯದಲ್ಲಿ ಕೋಲ್ಕತ ನೈಟ್ ರೈಡರ್ಸ್ ಎದುರು ಚೆನ್ನೈ ಸೂಪರ್ ಕಿಂಗ್ಸ್ ತಂಡವು 18 ರನ್‌ಗಳ ಜಯ ದಾಖಲಿಸಿತ್ತು. ಈ ಪಂದ್ಯಕ್ಕೆ ಮುಂಬೈನ ವಾಂಖೆಡೆ ಮೈದಾನ ಆತಿಥ್ಯ ವಹಿಸಿತ್ತು. ಫಾಫ್ ಡು ಪ್ಲೆಸಿಸ್ 95 ರನ್ ಬಾರಿಸಿ ಸಿಎಸ್‌ಕೆ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
5ನೇ ಪಂದ್ಯ: ಏಪ್ರಿಲ್ 25
ವಾಂಖೆಡೆ ಮೈದಾನದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ದ ನಡೆದ ಐದನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು 69 ರನ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಟೂರ್ನಿಯಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿತ್ತು. ರವೀಂದ್ರ ಜಡೇಜಾ ಸ್ಫೋಟಕ ಬ್ಯಾಟಿಂಗ್ ಮೂಲಕ ಮಿಂಚಿದ್ದರು.
6ನೇ ಪಂದ್ಯ: ಏಪ್ರಿಲ್ 28
ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ದ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 7 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿ ವಿಜಯದ ನಾಗಾಲೋಟ ಮುಂದುವರೆಸಿತ್ತು. ಋತುರಾಜ್ ಗಾಯಕ್ವಾಡ್ 75 ರನ್ ಬಾರಿಸುವ ಮೂಲಕ ತಂಡ ಸುಲಭ ಗೆಲುವು ದಾಖಲಿಸಲು ನೆರವಾದರು.
7ನೇ ಪಂದ್ಯ: ಮೇ 01
ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಮತ್ತೊಂದು ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ದ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವು 4 ವಿಕೆಟ್‌ಗಳ ಜಯ ಸಾಧಿಸುವ ಮೂಲಕ ಚೆನ್ನೈ ಗೆಲುವಿನ ನಾಗಾಲೋಟಕ್ಕೆ ತಡೆಯೊಡ್ಡಿತ್ತು. ಮುಂಬೈ ಆಲ್ರೌಂಡರ್ ಪೊಲ್ಲಾರ್ಡ್ ಏಕಾಂಗಿಯಾಗಿ ತಂಡಕ್ಕೆ ಗೆಲುವು ತಂದುಕೊಟ್ಟಿದ್ದರು.
8ನೇ ಪಂದ್ಯ: ಸೆಪ್ಟೆಂಬರ್ 19
ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ರನ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಕಳೆದ ಪಂದ್ಯದ ಸೋಲಿಗೆ ತಿರುಗೇಟು ನೀಡಿತ್ತು. ಈ ಮೂಲಕ ಯುಎಇ ಚರಣದಲ್ಲಿ ಶುಭಾರಂಭ ಮಾಡಿತ್ತು. ಋತುರಾಜ್ ಗಾಯಕ್ವಾಡ್ ಅಜೇಯ ಅರ್ಧಶತಕ ಸಿಡಿಸಿ ಸಿಎಸ್‌ಕೆ ತಂಡಕ್ಕೆ ಗೆಲುವು ತಂದಿಕೊಟ್ಟಿದ್ದರು.
9ನೇ ಪಂದ್ಯ: ಸೆಪ್ಟೆಂಬರ್ 24
ಶಾರ್ಜಾ ಮೈದಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 6 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ತನ್ನ ಪ್ಲೇ ಆಫ್ ಹಾದಿಯನ್ನು ಸುಗಮಗೊಳಿಸಿಕೊಂಡಿತ್ತು. ಡ್ವೇನ್ ಬ್ರಾವೋ 3 ವಿಕೆಟ್ ಕಬಳಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು.
10ನೇ ಪಂದ್ಯ: ಸೆಪ್ಟೆಂಬರ್ 26
ಅಬುಧಾಬಿಯ ಶೇಕ್ ಜಾಯೆದ್ ಮೈದಾನದಲ್ಲಿ ಕೋಲ್ಕತ ನೈಟ್ ರೈಡರ್ಸ್ ವಿರುದ್ದದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 2 ವಿಕೆಟ್‌ಗಳ ಅಂತರದ ರೋಚಕ ಜಯ ಸಾಧಿಸಿತ್ತು. ರವೀಂದ್ರ ಜಡೇಜಾ ಆಲ್ರೌಂಡ್ ಪ್ರದರ್ಶನದ ಮೂಲಕ ಸಿಎಸ್‌ಕೆ ಗೆಲುವಿಗೆ ನೆರವಾಗಿದ್ದರು.
11ನೇ ಪಂದ್ಯ: ಸೆಪ್ಟೆಂಬರ್ 30
ಸನ್‌ರೈಸರ್ಸ್ ಹೈದರಾಬಾದ್ ವಿರುದ್ದ ಶಾರ್ಜಾ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು 6 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿ ಮತ್ತೆ ಗೆಲುವಿನ ನಾಗಾಲೋಟ ಮುಂದುವರೆಸಿತ್ತು. ಇದೀಗ ಸಿಎಸ್‌ಕೆ ತಂಡವು ಇನ್ನೂ 3 ಪಂದ್ಯಗಳು ಬಾಕಿ ಇರುವಾಗಲೇ ಪ್ಲೇ ಆಫ್ ಸ್ಥಾನ ಖಚಿತಪಡಿಸಿಕೊಂಡಿತು. ಜೋಶ್ ಹೇಜಲ್‌ವುಡ್ 3 ವಿಕೆಟ್ ಕಬಳಿಸಿ ಮಿಂಚಿದ್ದರು.
12ನೇ ಪಂದ್ಯ: ಅಕ್ಟೋಬರ್ 02
ಅಬುಧಾಬಿಯ ಶೇಕ್ ಜಾಯೆದ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಎದುರು ರಾಜಸ್ಥಾನ ರಾಯಲ್ಸ್ 7 ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ಸಾಧಿಸಿ ಬಲಿಷ್ಠ ಧೋನಿ ಪಡೆಗೆ ಶಾಕ್ ನೀಡಿತ್ತು. ಋತುರಾಜ್ ಗಾಯಕ್ವಾಡ್ ಅಜೇಯ ಶತಕ ವ್ಯರ್ಥವಾಯಿತು
13ನೇ ಪಂದ್ಯ: ಅಕ್ಟೋಬರ್ 04
ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದೆದುರು ಚೆನ್ನೈ ಸೂಪರ್ ಕಿಂಗ್ಸ್ 3 ವಿಕೆಟ್‌ಗಳಿಂದ ಶರಣಾಗುವ ಮೂಲಕ ನಿರಾಸೆ ಅನುಭವಿಸಿತ್ತು. ಅಕ್ಷರ್ ಪಟೇಲ್ ಡೆಲ್ಲಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
KL Rahul
14ನೇ ಪಂದ್ಯ: ಅಕ್ಟೋಬರ್ 07
ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ಚೆನ್ನೈ ಪಾಲಿನ ಲೀಗ್ ಹಂತದ ಕೊನೆಯಲ್ಲಿ ಪಂಜಾಬ್ ಕಿಂಗ್ಸ್ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು. ಇದರೊಂದಿಗೆ ಸಿಎಸ್‌ಕೆ ತಂಡವು ಹ್ಯಾಟ್ರಿಕ್ ಸೋಲಿನ ಮುಖಭಂಗ ಅನುಭವಿಸಿತು. ಪಂಜಾಬ್ ಕಿಂಗ್ಸ್ ನಾಯಕ ಕೆ.ಎಲ್. ರಾಹುಲ್ ಅಜೇಯ 98 ರನ್ ಬಾರಿಸಿ ಸಿಎಸ್‌ಕೆಗೆ ಸೋಲಿನ ಕಹಿ ಉಣಬಡಿಸಿದರು.
ಮೊದಲ ಕ್ವಾಲಿಫೈಯರ್ ಪಂದ್ಯ: ಅಕ್ಟೋಬರ್ 10
ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಎದುರು ಚೆನ್ನೈ ಸೂಪರ್ ಕಿಂಗ್ಸ್ 4 ವಿಕೆಟ್‌ಗಳ ರೋಚಕ ಜಯ ಸಾಧಿಸಿತು. ಗಾಯಕ್ವಾಡ್, ಉತ್ತಪ್ಪ ಜತೆಗೆ ಕೊನೆಗೆ ನಾಯಕ ಧೋನಿ ಆಕರ್ಷಕ ಬ್ಯಾಟಿಂಗ್ ನಡೆಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದ್ದರು.==