IPL 2021 ಹೀಗಿತ್ತು ನೋಡಿ ಚೆನ್ನೈ ಸೂಪರ್ ಕಿಂಗ್ಸ್‌ ಪ್ಲೇ ಆಫ್‌ವರೆಗಿನ ಹಾದಿ..!

Suvarna News   | Asianet News
Published : Oct 10, 2021, 04:13 PM IST

ದುಬೈ: 14ನೇ ಆವೃತ್ತಿಯ ಐಪಿಎಲ್‌ (IPL 2021) ಟೂರ್ನಿಯಲ್ಲಿ ಮಹೇಂದ್ರ ಸಿಂಗ್‌ ಧೋನಿ (MS Dhoni) ನೇತೃತ್ವದ ಚೆನ್ನೈ ಸೂಪರ್‌ ಕಿಂಗ್ಸ್‌ (Chennai Super Kings) ತಂಡವು ಪ್ಲೇ ಆಫ್‌ (Play Off) ಪ್ರವೇಶಿಸಿದ ಮೊದಲ ತಂಡ ಎನ್ನುವ ಕೀರ್ತಿಗೆ ಪಾತ್ರವಾಗಿದೆ. ಚೆನ್ನೈ ತಂಡವು ಲೀಗ್ ಹಂತ ಮುಕ್ತಾಯದ ವೇಳೆಗೆ 20 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದು, ಇದೀಗ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ಎದುರು ಮೊದಲ ಕ್ವಾಲಿಫೈಯರ್ ಪಂದ್ಯವನ್ನಾಡಲು ಸಜ್ಜಾಗಿದೆ. ಚೆನ್ನೈ ಸೂಪರ್‌ ಕಿಂಗ್ಸ್ ತಂಡದ ಪ್ಲೇ ಆಫ್‌ವರೆಗಿನ ಪಯಣ ಹೇಗಿತ್ತು ಎನ್ನುವುದನ್ನು ನೋಡೋಣ ಬನ್ನಿ

PREV
114
IPL 2021 ಹೀಗಿತ್ತು ನೋಡಿ ಚೆನ್ನೈ ಸೂಪರ್ ಕಿಂಗ್ಸ್‌ ಪ್ಲೇ ಆಫ್‌ವರೆಗಿನ ಹಾದಿ..!

ಮೊದಲ ಪಂದ್ಯ: ಏಪ್ರಿಲ್‌ 10

ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮುಂಬೈನ ವಾಂಖೆಡೆ ಮೈದಾನದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಿತ್ತು. ಈ ಪಂದ್ಯದಲ್ಲಿ ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್‌ ತಂಡವು 7 ವಿಕೆಟ್‌ಗಳ ಜಯ ಸಾಧಿಸಿತ್ತು. ಸಿಎಸ್‌ಕೆ ಸೋಲಿನೊಂದಿಗೆ ಅಭಿಯಾನ ಆರಂಭಿಸಿತ್ತು.

(Photo Source- www.iplt20.com)

214
CSK vs PBKS

ಎರಡನೇ ಪಂದ್ಯ: ಏಪ್ರಿಲ್‌ 16

ಸಿಎಸ್‌ಕೆ ಎರಡನೇ ಪಂದ್ಯದಲ್ಲಿ ಗೆಲುವಿನ ಖಾತೆ ತೆರೆದಿತ್ತು. ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಧೋನಿ ಪಡೆ ಪಂಜಾಬ್ ಕಿಂಗ್ಸ್ ಎದುರು 6 ವಿಕೆಟ್‌ಗಳ ಜಯ ಸಾಧಿಸುವ ಮೂಲಕ ಅಂಕಗಳ ಖಾತೆ ತೆರೆದಿತ್ತು.

314

Nevertheless, the side has not paid much attention to it, as they are off to a flying start in the ongoing season. They beat three-time champions CSK in their opening encounter.

ಮೂರನೇ ಪಂದ್ಯ: ಏಪ್ರಿಲ್‌ 19

ರಾಜಸ್ಥಾನ ರಾಯಲ್ಸ್ ವಿರುದ್ದ ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು 45 ರನ್‌ಗಳ ಅಂತರದ ಭರ್ಜರಿ ಗೆಲುವು ಸಾಧಿಸಿತ್ತು

414

4ನೇ ಪಂದ್ಯ: ಏಪ್ರಿಲ್‌ 21

ನಾಲ್ಕನೇ ಪಂದ್ಯದಲ್ಲಿ ಕೋಲ್ಕತ ನೈಟ್‌ ರೈಡರ್ಸ್‌ ಎದುರು ಚೆನ್ನೈ ಸೂಪರ್ ಕಿಂಗ್ಸ್ ತಂಡವು 18 ರನ್‌ಗಳ ಜಯ ದಾಖಲಿಸಿತ್ತು. ಈ ಪಂದ್ಯಕ್ಕೆ ಮುಂಬೈನ ವಾಂಖೆಡೆ ಮೈದಾನ ಆತಿಥ್ಯ ವಹಿಸಿತ್ತು.

514

5ನೇ ಪಂದ್ಯ: ಏಪ್ರಿಲ್ 25

ವಾಂಖೆಡೆ ಮೈದಾನದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ದ ನಡೆದ ಐದನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು 69 ರನ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಟೂರ್ನಿಯಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿತ್ತು.

614

6ನೇ ಪಂದ್ಯ: ಏಪ್ರಿಲ್ 28

ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ದ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ 7 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿ ವಿಜಯದ ನಾಗಾಲೋಟ ಮುಂದುವರೆಸಿತ್ತು.

714

7ನೇ ಪಂದ್ಯ: ಮೇ 01

ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಮತ್ತೊಂದು ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ದ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವು 4 ವಿಕೆಟ್‌ಗಳ ಜಯ ಸಾಧಿಸುವ ಮೂಲಕ ಚೆನ್ನೈ ಗೆಲುವಿನ ನಾಗಾಲೋಟಕ್ಕೆ ತಡೆಯೊಡ್ಡಿತ್ತು.

814

8ನೇ ಪಂದ್ಯ: ಸೆಪ್ಟೆಂಬರ್ 19

ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ರನ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಕಳೆದ ಪಂದ್ಯದ ಸೋಲಿಗೆ ತಿರುಗೇಟು ನೀಡಿತ್ತು. ಈ ಮೂಲಕ ಯುಎಇ ಚರಣದಲ್ಲಿ ಶುಭಾರಂಭ ಮಾಡಿತ್ತು.

914

9ನೇ ಪಂದ್ಯ: ಸೆಪ್ಟೆಂಬರ್ 24

ಶಾರ್ಜಾ ಮೈದಾನದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿರುದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 6 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ತನ್ನ ಪ್ಲೇ ಆಫ್‌ ಹಾದಿಯನ್ನು ಸುಗಮಗೊಳಿಸಿಕೊಂಡಿತ್ತು

1014

10ನೇ ಪಂದ್ಯ: ಸೆಪ್ಟೆಂಬರ್ 26

ಅಬುಧಾಬಿಯ ಶೇಕ್ ಜಾಯೆದ್ ಮೈದಾನದಲ್ಲಿ ಕೋಲ್ಕತ ನೈಟ್‌ ರೈಡರ್ಸ್ ವಿರುದ್ದದ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ 2 ವಿಕೆಟ್‌ಗಳ ಅಂತರದ ರೋಚಕ ಜಯ ಸಾಧಿಸಿತ್ತು.

1114

11ನೇ ಪಂದ್ಯ: ಸೆಪ್ಟೆಂಬರ್ 30

ಸನ್‌ರೈಸರ್ಸ್‌ ಹೈದರಾಬಾದ್ ವಿರುದ್ದ ಶಾರ್ಜಾ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ತಂಡವು 6 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿ ಮತ್ತೆ ಗೆಲುವಿನ ನಾಗಾಲೋಟ ಮುಂದುವರೆಸಿತ್ತು. ಇದೀಗ ಸಿಎಸ್‌ಕೆ ತಂಡವು ಇನ್ನೂ 3 ಪಂದ್ಯಗಳು ಬಾಕಿ ಇರುವಾಗಲೇ ಪ್ಲೇ ಆಫ್‌ ಸ್ಥಾನ ಖಚಿತಪಡಿಸಿಕೊಂಡಿತು. 

1214

12ನೇ ಪಂದ್ಯ: ಅಕ್ಟೋಬರ್ 02

ಅಬುಧಾಬಿಯ ಶೇಕ್ ಜಾಯೆದ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಎದುರು ರಾಜಸ್ಥಾನ ರಾಯಲ್ಸ್ 7 ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ಸಾಧಿಸಿ ಬಲಿಷ್ಠ ಧೋನಿ ಪಡೆಗೆ ಶಾಕ್ ನೀಡಿತ್ತು.

1314

13ನೇ ಪಂದ್ಯ: ಅಕ್ಟೋಬರ್ 04

ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದೆದುರು ಚೆನ್ನೈ ಸೂಪರ್ ಕಿಂಗ್ಸ್ 3 ವಿಕೆಟ್‌ಗಳಿಂದ ಶರಣಾಗುವ ಮೂಲಕ ನಿರಾಸೆ ಅನುಭವಿಸಿತ್ತು.

1414

14ನೇ ಪಂದ್ಯ: ಅಕ್ಟೋಬರ್ 07

ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ಚೆನ್ನೈ ಪಾಲಿನ ಲೀಗ್ ಹಂತದ ಕೊನೆಯಲ್ಲಿ ಪಂಜಾಬ್ ಕಿಂಗ್ಸ್ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು. ಇದರೊಂದಿಗೆ ಸಿಎಸ್‌ಕೆ ತಂಡವು ಹ್ಯಾಟ್ರಿಕ್ ಸೋಲಿನ ಮುಖಭಂಗ ಅನುಭವಿಸಿತು.
 

click me!

Recommended Stories