IPL 2021 ಟೂರ್ನಿಯ ಎರಡನೇ ಭಾಗವನ್ನು ಸೋಲಿನೊಂದಿಗೆ ಆರಂಭಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು(Royal Challengers Bengaluru) ತಂಡ ಇದೀಗ ಚೆನ್ನೈ ಸೂಪರ್ ಕಿಂಗ್ಸ್(CSK) ವಿರುದ್ಧ ಹೋರಾಟಕ್ಕೆ ಸಜ್ಜಾಗಿದೆ. ಇದು ಉಭಯ ತಂಡಗಳಿಗೂ ಮಹತ್ವದ ಪಂದ್ಯವಾಗಿದೆ. ಈ ಪಂದ್ಯದಲ್ಲಿ ಉಭಯ ತಂಡದ ಕ್ರಿಕೆಟಿಗರು ಹಲವು ದಾಖಲೆ ನಿರ್ಮಿಸಲು ಸಜ್ಜಾಗಿದ್ದಾರೆ.
ಟಿ20 ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ 10,000 ರನ್ ಪೂರೈಸಲು ಇನ್ನು ಕೇವಲ 66 ರನ್ ಅವಶ್ಯಕತೆ ಇದೆ. ಸಿಎಸ್‌ಕೆ ವಿರುದ್ಧ ಕೊಹ್ಲಿ 66 ರನ್ ಸಿಡಿಸಿ 10,000 ಟಿ20 ರನ್ ಪೂರೈಸಿದರ, ಈ ಸಾಧನೆ ಮಾಡಿದ ಮೊದಲ ಭಾರತೀಯ ಕ್ರಿಕೆಟಿಗ ಅನ್ನೋ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಲಿದ್ದಾರೆ. ವಿಶ್ವ ಕ್ರಿಕೆಟಿಗರ ಪೈಕಿ ಕೊಹ್ಲಿ(Virat Kohi) 5ನೇಯವರಾಗಿ ಗುರುತಿಸಿಕೊಳ್ಳಲಿದ್ದಾರೆ.
ಸಿಎಸ್‌ಕೆ ಬ್ಯಾಟ್ಸ್‌ಮನ್ ಸುರೇಶ್ ರೈನಾ (Suresh Raina)ಐಪಿಎಲ್ ಕ್ರಿಕೆಟ್‌ನಲ್ಲಿ 5,500 ರನ್ ಪೂರೈಸಲು ಕೇವಲ 5 ರನ್ ಬೇಕಿದೆ. ಸದ್ಯ 5,455 ರನ್ ಸಿಡಿಸಿರುವ ರೈನಾ, ಆರ್‌ಸಿಬಿ ವಿರುದ್ಧ 5 ರನ್ ಸಿಡಿಸಿದರೆ ಐತಿಹಾಸಿಕ ಸಾಧನೆ ಮಾಡಲಿದ್ದಾರೆ. ಇಂದು ರೈನಾ 5,500 ರನ್ ಪೂರೈಸಿದರೆ ಐಪಿಎಲ್ ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡುತ್ತಿರುವ 3ನೇ ಕ್ರಿಕೆಟಿಗ ಎನಿಸಿಕೊಳ್ಳಲಿದ್ದಾರೆ.
ಆರ್‌ಸಿಬಿ ಹಾಗೂ ಸಿಎಸ್‌ಕೆ ನಡುವಿನ ಪಂದ್ಯದಲ್ಲಿ ರವೀಂದ್ರ ಜಡೇಜಾ(Ravindra Jadeja) ಕೂಡ ದಾಖಲೆ ಬರೆಯಲು ಸಜ್ಜಾಗಿದ್ದಾರೆ. ರವೀಂದ್ರ ಜಡೇಜಾ 2 ಸಿಕ್ಸರ್ ಸಿಡಿಸಿದರೆ ಐಪಿಎಲ್ ಟೂರ್ನಿಯಲ್ಲಿ 50 ಸಿಕ್ಸರ್ ಸಿಡಿಸಿದ ದಾಖಲೆ ಬರೆಯಲಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂ.ಎಸ್.ಧೋನಿ(MS Dhoni)ಕೂಡ ದಾಖಲೆ ಬರೆಯಲು ಸಜ್ಜಾಗಿದ್ದಾರೆ. ಐಪಿಎಲ್ ಟೂರ್ನಿಯಲ್ಲಿ ಅತೀ ಹೆಚ್ಚು ಕ್ಯಾಚ್ ಹಿಡಿದ ವಿಕೆಟ್ ಕೀಪರ್ ಅನ್ನೋ ಹೆಗ್ಗಳಿಕೆಗೆ ಪಾತ್ರರಾಗಲು ಧೋನಿಗೆ ಒಂದು ಕ್ಯಾಚ್ ಅವಶ್ಯಕತೆ ಇದೆ. ಸದ್ಯ ಧೋನಿ ಹಾಗೂ ದಿನೇಶ್ ಕಾರ್ತಿಕ್ ತಲಾ 114 ಕ್ಯಾಚ್ ಮೂಲಕ ಮೊದಲ ಸ್ಥಾನ ಹಂಚಿಕೊಂಡಿದ್ದಾರೆ
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಫೋಟಕ ಬ್ಯಾಟ್ಸ್‌ಮನ್ ಎಬಿ ಡಿವಿಲಿಯರ್ಸ್(ab de villiers) ಸಿಕ್ಸರ್ ಮೈಲಿಗಲ್ಲು ನಿರ್ಮಿಸಲು ಸಜ್ಜಾಗಿದ್ದಾರೆ. ಐಪಿಎಲ್ ಟೂರ್ನಿಯಲ್ಲಿ 245 ಸಿಕ್ಸರ್ ಸಿಡಿಸಿರುವ ಎಬಿಡಿಗೆ ಇನ್ನು 5 ಸಿಕ್ಸರ್ ಸಿಡಿಸಿದರೆ 250 ಸಿಕ್ಸರ್ ಪೂರೈಸಲಿದ್ದಾರೆ. ಹೀಗಾದಲ್ಲಿ ಐಪಿಎಲ್ ಟೂರ್ನಿಯಲ್ಲಿ 250 ಸಿಕ್ಸರ್ ಸಿಡಿಸಿದ 2ನೇ ಕ್ರಿಕೆಟಿಗ ಅನ್ನೋ ಕೀರ್ತಿಗೆ ಪಾತ್ರರಾಗಲಿದ್ದಾರೆ. ಮೊದಲ ಸ್ಥಾನದಲ್ಲಿ ಕ್ರಿಸ್ ಗೇಲ್(Chris gayle) ವಿರಾಜಮಾನರಾಗಿದ್ದಾರೆ.
ಐಪಿಎಲ್ ಟೂರ್ನಿ 2021ರ ಅಂಕಪಟ್ಟಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್(Chennai Super Kings) ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2 ಮತ್ತು 3ನೇ ಸ್ಥಾನದಲ್ಲಿದೆ. ಚೆನ್ನೈ 8ರಲ್ಲಿ 6 ಗೆಲುವು ದಾಖಲಿಸಿದ್ದರೆ, ಬೆಂಗಳೂರು 8ರಲ್ಲಿ 5 ಪಂದ್ಯದಲ್ಲಿ ಗೆಲುವು ದಾಖಲಿಸಿದೆ.