ಚೆನ್ನೈ ಸೂಪರ್‌ ಕಿಂಗ್ಸ್‌ ಕೂಡಿಕೊಂಡ ಕನ್ನಡದ ಕುವರ ರಾಬಿನ್ ಉತ್ತಪ್ಪ..!

ನವದೆಹಲಿ: 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ನೀರಸ ಪ್ರದರ್ಶನ ತೋರಿದ್ದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ ಈಗಿನಿಂದಲೇ ಬಲಿಷ್ಠ ತಂಡ ಕಟ್ಟಲು ಭರ್ಜರಿ ಸಿದ್ದತೆ ನಡೆಸುತ್ತಿದೆ. ಇದರ ಭಾಗವಾಗಿ ಜನವರಿ 20ರಂದು ಸಿಎಸ್‌ಕೆ ಫ್ರಾಂಚೈಸಿ ಕೆಲ ಆಟಗಾರರಿಗೆ ಗೇಟ್‌ಪಾಸ್‌ ನೀಡಿದೆ.
2021ರ ಐಪಿಎಲ್ ಆಟಗಾರರ ಹರಾಜಿಗೂ ಮುನ್ನ ಚೆನ್ನೈ ಸೂಪರ್‌ ಕಿಂಗ್ಸ್‌ ಫ್ರಾಂಚೈಸಿ ಕೊಡಗಿನ ಕುವರ ರಾಬಿನ್ ಉತ್ತಪ್ಪ ಅವರನ್ನು ತಮ್ಮ ತೆಕ್ಕೆಗೆ ಸೆಳೆದುಕೊಳ್ಳುವಲ್ಲಿ ಸಿಎಸ್‌ಕೆ ಫ್ರಾಂಚೈಸಿ ಯಶಸ್ವಿಯಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

ಮಿಲಿಯನ್ ಡಾಲರ್ ಕ್ರಿಕೆಟ್‌ ಟೂರ್ನಿಯಾದ ಐಪಿಎಲ್‌ ಟೂರ್ನಿಯ 14ನೇ ಆವೃತ್ತಿಯಲ್ಲಿ ಕನ್ನಡಿಗ ರಾಬಿನ್ ಉತ್ತಪ್ಪ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಕಣಕ್ಕಿಳಿಯಲಿದ್ದಾರೆ.
ಆಲ್‌ ಕ್ಯಾಷ್ ಡೀಲ್‌ ಮೂಲಕ ಹರಾಜಿಗೂ ಮುನ್ನವೇ ರಾಜಸ್ಥಾನ ರಾಯಲ್ಸ್ ತಂಡದ ಬ್ಯಾಟ್ಸ್‌ಮನ್ ರಾಬಿನ್‌ ಉತ್ತಪ್ಪ ಅವರನ್ನು ತನ್ನ ತೆಕ್ಕೆಗೆ ಸೆಳೆದುಕೊಳ್ಳುವಲ್ಲಿ ಚೆನ್ನೈ ಮೂಲದ ಫ್ರಾಂಚೈಸಿ ಯಶಸ್ವಿಯಾಗಿದೆ.

35 ವರ್ಷದ ರಾಬಿನ್‌ ಉತ್ತಪ್ಪ ಈ ಮೊದಲು ಮುಂಬೈ ಇಂಡಿಯನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪುಣೆ ವಾರಿಯರ್ಸ್ ಹಾಗೂ ಕೋಲ್ಕತ ನೈಟ್‌ ರೈಡರ್ಸ್‌ ತಂಡವನ್ನು ಪ್ರತಿನಿಧಿಸಿದ್ದರು.
ಇನ್ನು ಕಳೆದ ವರ್ಷ ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿ 3 ಕೋಟಿ ರುಪಾಯಿ ನೀಡಿ ರಾಬಿನ್ ಉತ್ತಪ್ಪ ಅವರನ್ನು ಖರೀದಿಸಿತ್ತು, ಇದೀಗ ಉತ್ತಪ್ಪ ಸಿಎಸ್‌ಕೆ ಜೆರ್ಸಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿ ಜತೆಗಿನ ಒಡನಾಟ ಅವಿಸ್ಮರಣೀಯವಾಗಿತ್ತು. ಇದೀಗ 2021ರ ಐಪಿಎಲ್‌ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಪ್ರತಿನಿಧಿಸಲು ಉತ್ಸುಕನಾಗಿದ್ದೇನೆಂದು ರಾಬಿನ್ ಉತ್ತಪ್ಪ ಹೇಳಿದ್ದಾರೆ.
ಎಲ್ಲಾ 13 ಐಪಿಎಲ್ ಆವೃತ್ತಿಗಳನ್ನು ಪ್ರತಿನಿಧಿಸಿರುವ ಉತ್ತಪ್ಪ ಇದುವರೆಗೂ ಒಟ್ಟು 189 ಪಂದ್ಯಗಳನ್ನಾಡಿ 129.99ರ ಸ್ಟ್ರೈಕ್‌ರೇಟ್‌ನಲ್ಲಿ 24 ಅರ್ಧಶತಕ ಸಹಿತ 4607 ರನ್‌ ಬಾರಿಸಿದ್ದಾರೆ.
2014ರ ಐಪಿಎಲ್‌ ಟೂರ್ನಿಯಲ್ಲಿ ಕೆಕೆಆರ್ ಪರ660 ರನ್‌ ಬಾರಿಸುವ ಮೂಲಕ ಆರೆಂಜ್‌ ಕ್ಯಾಪ್ ಜಯಿಸಿದ್ದ ಉತ್ತಪ್ಪ, ನೈಟ್‌ರೈಡರ್ಸ್‌ ತಂಡ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಉತ್ತಪ್ಪಪ್ರಮುಖ ಪಾತ್ರವಹಿಸಿದ್ದರು.

Latest Videos

click me!