IPL 2021 ಹೀಗಿತ್ತು ನೋಡಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ 2ನೇ ಕ್ವಾಲಿಫೈಯರ್‌ವರೆಗಿನ ಹಾದಿ ..!

First Published Oct 13, 2021, 6:00 PM IST

ಶಾರ್ಜಾ: 14ನೇ ಆವೃತ್ತಿಯ ಐಪಿಎಲ್ (IPL 2021) ಟೂರ್ನಿಯಲ್ಲಿ ರಿಷಭ್‌ ಪಂತ್ (Rishabh Pant) ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡವು ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ಎದುರು ಮುಗ್ಗರಿಸುವ ಮೂಲಕ ನಿರಾಸೆ ಅನುಭವಿಸಿತ್ತು. ಇದೀಗ ಶಾರ್ಜಾ(Sharjah)ದಲ್ಲಿ ನಡೆಯಲಿರುವ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಕೋಲ್ಕತ ನೈಟ್ ರೈಡರ್ಸ್ (Kolkata Knight Riders) ತಂಡದ ಸವಾಲನ್ನು ಎದುರಿಸಲು ಸಜ್ಜಾಗಿದೆ. ಡೆಲ್ಲಿ ತಂಡದ ಎರಡನೇ ಕ್ವಾಲಿಫೈಯರ್‌ ವರೆಗಿನ ಹಾದಿ ಹೇಗಿತ್ತು ಎನ್ನುವುದನ್ನು ನೋಡೋಣ ಬನ್ನಿ.

ಮೊದಲ ಪಂದ್ಯ: ಏಪ್ರಿಲ್ 10

ಚೆನ್ನೈ ಸೂಪರ್ ಕಿಂಗ್ಸ್ ಎದುರು ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಿತ್ತು. ಶಿಖರ್ ಧವನ್‌ ಆಕರ್ಷಕ 85 ರನ್‌ ಬಾರಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಎರಡನೇ ಪಂದ್ಯ: ಏಪ್ರಿಲ್ 15

ರಾಜಸ್ಥಾನ ರಾಯಲ್ಸ್ ಎದುರು ವಾಂಖೆಡೆ ಮೈದಾನದಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಸಂಜು ಸ್ಯಾಮ್ಸನ್ ಪಡೆಗೆ 3 ವಿಕೆಟ್‌ಗಳಿಂದ ಶರಣಾಗುವ ಮೂಲಕ ನಿರಾಸೆ ಅನುಭವಿಸಿತ್ತು. ಉನಾದ್ಕತ್ 3 ವಿಕೆಟ್ ಕಬಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಮೂರನೇ ಪಂದ್ಯ: ಏಪ್ರಿಲ್‌ 18

ಪಂಜಾಬ್ ಕಿಂಗ್ಸ್‌ ಎದುರು ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು 6 ವಿಕೆಟ್‌ಗಳ ಅಂತರದ ಗೆಲುವು ಸಾಧಿಸುವ ಮೂಲಕ ಪಂತ್ ಪಡೆ ಗೆಲುವಿನ ಹಳಿಗೆ ಮರಳಿತ್ತು. ಶಿಖರ್ ಧವನ್‌ 92 ರನ್‌ ಬಾರಿಸಿ ತಂಡ ಸುಲಭ ಗೆಲುವು ಸಾಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

4ನೇ ಪಂದ್ಯ: ಏಪ್ರಿಲ್‌ 20

ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಎದುರು ಚೆನ್ನೈನ ಎಂ ಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು 6 ವಿಕೆಟ್‌ಗಳ ಅಂತರದ ಗೆಲುವು ದಾಖಲಿಸಿತ್ತು. ಅನುಭವಿ ಸ್ಪಿನ್ನರ್ ಅಮಿತ್ ಮಿಶ್ರಾ 4 ವಿಕೆಟ್ ಕಬಳಿಸಿ ಡೆಲ್ಲಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.

5ನೇ ಪಂದ್ಯ: ಏಪ್ರಿಲ್ 25'

ಸನ್‌ರೈಸರ್ಸ್ ಹೈದರಾಬಾದ್ ವಿರುದ್ದ ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಪಂದ್ಯ ಟೈ ಆಗಿತ್ತು. ಬಳಿಕ ನಡೆದ ಸೂಪರ್ ಓವರ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ರೋಚಕ ಗೆಲುವು ಸಾಧಿಸಿತ್ತು. ಪೃಥ್ವಿ ಶಾ ಸ್ಪೋಟಕ 53 ರನ್‌ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು. 
 

DC vs RCB

6ನೇ ಪಂದ್ಯ: ಏಪ್ರಿಲ್ 27

ರಾಯಲ್‌ ಚಾಲೆಂಜರ್ಸ್ ಬೆಂಗಳೂರು ವಿರುದ್ದ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಕೇವಲ 1 ರನ್‌ಗಳ ಅಂತರದ ರೋಚಕ ಸೋಲು ಅನುಭವಿಸಿತ್ತು. ರಿಷಭ್ ಪಂತ್, ಹೆಟ್ಮೇಯರ್ ಸ್ಪೋಟಕ ಅರ್ಧಶತಕದ ಹೊರತಾಗಿಯೂ ರೋಚಕ ಸೋಲು ಕಂಡಿತ್ತು.
 

7ನೇ ಪಂದ್ಯ: ಏಪ್ರಿಲ್‌ 29

ಕೋಲ್ಕತ ನೈಟ್ ರೈಡರ್ಸ್ ವಿರುದ್ದ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಮತ್ತೆ ಗೆಲುವಿನ ಹಳಿಗೆ ಮರಳಿತ್ತು. ಧವನ್ ಹಾಗೂ ಪೃಥ್ವಿ ಶಾ ಶತಕದ ಜತೆಯಾಟವಾಡುವ ಮೂಲಕ ತಂಡದ ಗೆಲುವಿಗೆ ಕಾರಣರಾದರು.
 

8ನೇ ಪಂದ್ಯ: ಮೇ 02

ಪಂಜಾಬ್ ಕಿಂಗ್ಸ್ ಎದುರು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತೊಮ್ಮೆ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ತನ್ನ ಗೆಲುವಿನ ಲಯವನ್ನು ಮುಂದುವರೆಸಿಕೊಂಡಿತು. ಶಿಖರ್ ಧವನ್ ಆಕರ್ಷಕ ಅರ್ಧಶತಕ ಬಾರಿಸಿ ಡೆಲ್ಲಿ ಗೆಲುವಿಗೆ ಕಾರಣರಾದರು.

9ನೇ ಪಂದ್ಯ: ಸೆಪ್ಟೆಂಬರ್ 22
ಸನ್‌ರೈಸರ್ಸ್‌ ಹೈದರಾಬಾದ್ ವಿರುದ್ದ ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿ ಜಯದ ನಾಗಾಲೋಟ ಮುಂದುವರೆಸಿತ್ತು. ವೇಗಿ ಏನ್ರಿಚ್ ನೊಕಿಯೆ 12 ರನ್‌ ನೀಡಿ 2 ವಿಕೆಟ್ ಕಬಳಿಸಿ ಸನ್‌ರೈಸರ್ಸ್‌ ತಂಡವನ್ನು ಅಲ್ಪ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದ್ದರು

10ನೇ ಪಂದ್ಯ: ಸೆಪ್ಟೆಂಬರ್ 25

ರಾಜಸ್ಥಾನ ರಾಯಲ್ಸ್ ಎದುರು ಅಬುಧಾಬಿಯ ಶೇಕ್ ಜಾಯೆದ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು 33 ರನ್‌ಗಳ ಅಂತರದ ಗೆಲುವು ದಾಖಲಿಸಿ ಬೀಗಿತು. ಶ್ರೇಯಸ್ ಅಯ್ಯರ್ ಆಕರ್ಷಕ ಬ್ಯಾಟಿಂಗ್ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
 

11ನೇ ಪಂದ್ಯ: ಸೆಪ್ಟೆಂಬರ್ 28'

ಕೋಲ್ಕತ ನೈಟ್ ರೈಡರ್ಸ್ ವಿರುದ್ದ ಶಾರ್ಜಾ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಕೆಕೆಆರ್‌ಗೆ 3 ವಿಕೆಟ್‌ಗಳಿಂದ ಶರಣಾಗಿತ್ತು. ಸುನಿಲ್ ನರೈನ್ ಆಲ್ರೌಂಡ್ ಆಟದ ಮೂಲಕ ಕೆಕೆಆರ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.
 

12ನೇ ಪಂದ್ಯ: ಅಕ್ಟೋಬರ್ 02

ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ದ ಶಾರ್ಜಾ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು 4 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸುವುದರ ಜತೆಗೆ ತನ್ನ ಪ್ಲೇ ಆಫ್‌ ಸ್ಥಾನವನ್ನು ಖಚಿತಪಡಿಸಿಕೊಂಡಿತು. ಅಕ್ಷರ್‌ ಪಟೇಲ್‌ ಆಕರ್ಷಕ ಬೌಲಿಂಗ್ ನಡೆಸುವ ಮೂಲಕ ಡೆಲ್ಲಿಗೆ ಗೆಲುವು ತಂದುಕೊಟ್ಟಿದ್ದರು.

13ನೇ ಪಂದ್ಯ: ಅಕ್ಟೋಬರ್ 04
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ದ ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು 3 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿತ್ತು. ಅಕ್ಷರ್ ಪಟೇಲ್ ಸತತ ಎರಡನೇ ಬಾರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು. 

14ನೇ ಪಂದ್ಯ: ಅಕ್ಟೋಬರ್ 08
ಡೆಲ್ಲಿ ಪಾಲಿನ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೊನೆಯ ಎಸೆತದಲ್ಲಿ ರೋಚಕ ಗೆಲುವು ಸಾಧಿಸಿ, ಪಂತ್ ಪಡೆಗೆ ಶಾಕ್‌ ನೀಡಿತ್ತು.
(Photo source- iplt20.com)

ಮೊದಲ ಕ್ವಾಲಿಫೈಯರ್ ಪಂದ್ಯ: ಅಕ್ಟೋಬರ್ 10

ಚೆನ್ನೈ ಸೂಪರ್ ಕಿಂಗ್ಸ್ ಎದುರು ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಋತುರಾಜ್ ಗಾಯಕ್ವಾಡ್ ಹಾಗೂ ರಾಬಿನ್ ಉತ್ತಮ ಬಾರಿಸಿದ ಶತಕದ ಜತೆಯಾಟದ ನೆರವಿನಿಂದ ಸಿಎಸ್‌ಕೆ 4 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ. ಇದೀಗ ಡೆಲ್ಲಿ ಎರಡನೇ ಕ್ವಾಲಿಫೈಯರ್ ಪಂದ್ಯಕ್ಕೆ ಸಜ್ಜಾಗಿದೆ.

click me!