ಬೆಂಗಳೂರು: ಕೋವಿಡ್ ಕಾರಣದಿಂದಾಗಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ 14ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಭಾಗ 2ಕ್ಕೆ ಬಿಸಿಸಿಐ ಅಧಿಕೃತವಾಗಿ ವೇಳಾಪಟ್ಟಿ ಪ್ರಕಟವಾಗಿದೆ. ಇನ್ನುಳಿದ ಐಪಿಎಲ್ ಪಂದ್ಯಾವಳಿಗಳನ್ನು ಬಿಸಿಸಿಐ ಈಗಾಗಲೇ ಯುಎಇಗೆ ಸ್ಥಳಾಂತರಿಸಿದ್ದು, ಇನ್ನುಳಿದ 31 ಪಂದ್ಯಗಳ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ.
ಸೆಪ್ಟೆಂಬರ್ 19ರಿಂದ ಯುಎಇನಲ್ಲಿ ಐಪಿಎಲ್ ಪಂದ್ಯಗಳು ಆರಂಭವಾಗಲಿದ್ದು, ಅಕ್ಟೋಬರ್ 15ಕ್ಕೆ ಫೈನಲ್ ಪಂದ್ಯ ನಡೆಯಲಿದೆ. ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಲೀಗ್ ಹಂತದಲ್ಲಿ ಇನ್ನೂ 7 ಪಂದ್ಯಗಳನ್ನು ಆಡಬೇಕಿದೆ. ಇನ್ನುಳಿದ 7 ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ ನೋಡಿ