ಐಪಿಎಲ್ ಕ್ರಿಕೆಟ್ ಅಭಿಮಾನಿಗಳಿಗೆ ಗುಡ್‌ ನ್ಯೂಸ್‌: ಯುಎಇ ಚರಣದ ವೇಳಾಪಟ್ಟಿ ಫೈನಲ್‌..!

Suvarna News   | Asianet News
Published : Jun 07, 2021, 04:46 PM ISTUpdated : Jun 07, 2021, 04:48 PM IST

ನವದೆಹಲಿ: ಭಾರತದ ಚುಟುಕು ಕ್ರಿಕೆಟ್ ಹಬ್ಬ ಇಂಡಿಯನ್‌ ಪ್ರೀಮಿಯರ್ ಲೀಗ್‌ಗೆ ಜಗತ್ತಿನಾದ್ಯಂತ ಕೋಟ್ಯಾಂತರ ಅಭಿಮಾನಿಗಳಿದ್ದಾರೆ. ಕೋವಿಡ್ ಕಾರಣದಿಂದಾಗಿ 14ನೇ ಆವೃತ್ತಿಯ ಐಪಿಎಲ್ ಟೂರ್ನಿಯು ಅರ್ಧದಲ್ಲೇ ಸ್ಥಗಿತಗೊಂಡಿತ್ತು. ಬಿಸಿಸಿಐ ಈ ಮಿಲಿಯನ್ ಡಾಲರ್ ಕ್ರಿಕೆಟ್ ಟೂರ್ನಿಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಿತ್ತು. ಹೀಗಾಗಿ ಐಪಿಎಲ್ ಭಾಗ 2 ಟೂರ್ನಿ ಯಾವಾಗ ಎಂದು ಕಾಯುತ್ತಿದ್ದ ಕ್ರಿಕೆಟ್ ಅಭಿಮಾನಿಗಳಿಗೆ ಬಿಸಿಸಿಐ ಇದೀಗ ಗುಡ್‌ ನ್ಯೂಸ್ ನೀಡಿದೆ.  

PREV
19
ಐಪಿಎಲ್ ಕ್ರಿಕೆಟ್ ಅಭಿಮಾನಿಗಳಿಗೆ ಗುಡ್‌ ನ್ಯೂಸ್‌: ಯುಎಇ ಚರಣದ ವೇಳಾಪಟ್ಟಿ ಫೈನಲ್‌..!

ಭಾರತದಲ್ಲಿ ಆಯೋಜನೆಗೊಂಡಿದ್ದ 14ನೇ ಆವೃತ್ತಿಯ ಐಪಿಎಲ್ ಟೂರ್ನಿಯನ್ನು ಕೋವಿಡ್ ಕಾರಣದಿಂದಾಗಿ ಅರ್ಧದಲ್ಲೇ ಸ್ಥಗಿತಗೊಂಡಿತ್ತು.

29

ಬಯೋ ಬಬಲ್‌ನೊಳಗಿದ್ದ ಆಟಗಾರರು ಹಾಗೂ ಸಿಬ್ಬಂದಿಗಳಿಗೆ ಕೋವಿಡ್ ಸೋಂಕು ದೃಢಪಟ್ಟ ಬೆನ್ನಲ್ಲೇ ಬಿಸಿಸಿಐ ಟೂರ್ನಿಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಿತ್ತು.

39

ಮೇ 29ರಂದು ನಡೆದ ಬಿಸಿಸಿಐ ವಿಶೇಷ ಸಾಮಾನ್ಯ ಸಭೆಯಲ್ಲಿ ಒಮ್ಮತದಿಂದ 14ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಇನ್ನುಳಿದ ಪಂದ್ಯಗಳನ್ನು ಯುಎಇಗೆ ಸ್ಥಳಾಂತರಿಸಲು ತೀರ್ಮಾನವಾಗಿದೆ.

49

ಇದೀಗ 14ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಇನ್ನುಳಿದ ಪಂದ್ಯಗಳು ಸೆಪ್ಟೆಂಬರ್ 19ರಿಂದ ಆರಂಭವಾಗಿ ಅಕ್ಟೋಬರ್ 15ರವರೆಗೆ ನಡೆಯಲಿದೆ ಎಂದು ಬಿಸಿಸಿಐ ಮೂಲಗಳು ಖಚಿತಪಡಿಸಿವೆ.

59

ಸೆಪ್ಟೆಂಬರ್ 19ರಿಂದ ಐಪಿಎಲ್ 2021 ಭಾಗ 2 ಆರಂಭವಾಗಲಿದ್ದು, ಅಕ್ಟೋಬರ್ 15ರಂದು ಫೈನಲ್ ಪಂದ್ಯ ಜರುಗಲಿದೆ ಎಂದು ಎಎನ್‌ಐ ಸುದ್ದಿಸಂಸ್ಥೆಗೆ ಬಿಸಿಸಿಐ ಮೂಲಗಳು ಖಚಿತಪಡಿಸಿವೆ ಎಂದು ವರದಿಯಾಗಿದೆ.

69

25 ದಿನಗಳ ಅವಧಿಯಲ್ಲಿ ಇನ್ನುಳಿದ ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ಬಿಸಿಸಿಐ ಇದೀಗ ಎಲ್ಲಾ ಲೆಕ್ಕಾಚಾರಗಳನ್ನು ಹಾಕಲಾರಂಭಿಸಿದೆ.

79

13ನೇ ಆವೃತ್ತಿಯ ಸಂಪೂರ್ಣ ಐಪಿಎಲ್ ಟೂರ್ನಿಗೆ ಯುಎಇ ಆತಿಥ್ಯವನ್ನು ವಹಿಸಿತ್ತು. ದುಬೈ, ಅಬುಧಾಬಿ ಹಾಗೂ ಶಾರ್ಜಾ ಈ ಮೂರು ಮೈದಾನದಲ್ಲಿ ಐಪಿಎಲ್‌ ಟೂರ್ನಿ ತುಂಬಾ ಅಚ್ಚುಕಟ್ಟಾಗಿ ನಡೆದಿತ್ತು.
 
89

ಕೋವಿಡ್ ಭೀತಿಯಿಂದಾಗಿ ಮೇ 04ರಂದು ಬಿಸಿಸಿಐ 14ನೇ ಆವೃತ್ತಿಯ ಐಪಿಎಲ್ ಟೂರ್ನಿಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಿತ್ತು.

99

ಕಾಕತಾಳೀಯ ಎನ್ನುವಂತೆ 13ನೇ ಆವೃತ್ತಿಯ ಐಪಿಎಲ್ ಟೂರ್ನಿಯು ಸೆಪ್ಟೆಂಬರ್ 19ರಿಂದ ಆರಂಭವಾಗಿತ್ತು.

click me!

Recommended Stories