IPL 2021: ಹೀಗಿತ್ತು ನೋಡಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ಲೇ ಆಫ್‌ ಜರ್ನಿ..!

First Published | Oct 11, 2021, 4:05 PM IST

ಬೆಂಗಳೂರು: 14ನೇ ಆವೃತ್ತಿಯ ಐಪಿಎಲ್‌ (IPL 2021) ಟೂರ್ನಿಯಲ್ಲಿ ವಿರಾಟ್ ಕೊಹ್ಲಿ (Virat Kohli) ನೇತೃತ್ವದ ರಾಯಲ್‌ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡವು ಪ್ಲೇ ಆಫ್‌ (Play Off) ಪ್ರವೇಶಿಸಿದ ಮೂರನೇ ತಂಡ ಎನ್ನುವ ಗೌರವಕ್ಕೆ ಭಾಜನವಾಗಿದೆ. ಕಳೆದ 13 ಆವೃತ್ತಿಗಳಲ್ಲಿ ಐಪಿಎಲ್ ಕಪ್‌ ಗೆಲ್ಲಲು ವಿಫಲವಾಗಿರುವ ಆರ್‌ಸಿಬಿ ತಂಡವು ಈ ಬಾರಿ ಶತಯಗತಾಯ ಕಪ್‌ ಗೆದ್ದೇ ತೀರುವ ಛಲದೊಂದಿಗೆ ಉತ್ತಮ ಪ್ರದರ್ಶನ ತೋರುತ್ತಿದೆ. ಅದರಲ್ಲೂ ಮ್ಯಾಕ್ಸ್‌ವೆಲ್ ಹಾಗೂ ಹರ್ಷಲ್ ಪಟೇಲ್ ತಂಡದ ಟ್ರಂಪ್‌ ಕಾರ್ಡ್‌ ಆಟಗಾರರು ಎನಿಸಿದ್ದಾರೆ. ಇದೀಗ ಎಲಿಮಿನೇಟರ್ ಪಂದ್ಯದಲ್ಲಿ ಆರ್‌ಸಿಬಿ ತಂಡವು ಕೋಲ್ಕತ ನೈಟ್ ರೈಡರ್ಸ್ (Kolkata Knight Riders) ತಂಡವನ್ನು ಎದುರಿಸಲು ಸಜ್ಜಾಗಿದೆ. ಆರ್‌ಸಿಬಿ ಪ್ಲೇ ಆಫ್‌ವರೆಗಿನ ಹಾದಿ ಹೇಗಿತ್ತು ಎನ್ನೋದನ್ನು ನೋಡೋಣ ಬನ್ನಿ

ಮೊದಲ ಪಂದ್ಯ: ಏಪ್ರಿಲ್ 09

ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್ ವಿರುದ್ದ ಚೆನ್ನೈನಲ್ಲಿ ನಡೆದ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡವು 2 ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ಸಾಧಿಸುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಿತ್ತು.

ಎರಡನೇ ಪಂದ್ಯ: ಏಪ್ರಿಲ್ 14

ಸನ್‌ರೈಸರ್ಸ್ ಹೈದರಾಬಾದ್ ವಿರುದ್ದ ಚೆನ್ನೈನಲ್ಲಿ ನಡೆದ ಪಂದ್ಯದಲ್ಲಿ ವಿರಾಟ್ ನೇತೃತ್ವದ ಆರ್‌ಸಿಬಿ ತಂಡವು 6 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು.

Tap to resize

ಮೂರನೇ ಪಂದ್ಯ: ಏಪ್ರಿಲ್‌ 18

ಕೋಲ್ಕತ ನೈಟ್‌ ರೈಡರ್ಸ್ ವಿರುದ್ದ ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 38 ರನ್‌ಗಳ ಗೆಲುವು ಸಾಧಿಸುವ ಮೂಲಕ ಟೂರ್ನಿಯಲ್ಲಿ ಹ್ಯಾಟ್ರಿಕ್ ಗೆಲುವಿನ ನಗೆ ಬೀರಿತು.

4ನೇ ಪಂದ್ಯ: ಏಪ್ರಿಲ್‌ 22

ರಾಜಸ್ಥಾನ ರಾಯಲ್ಸ್ ಎದುರು ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಆರ್‌ಸಿ 10 ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ಸಾಧಿಸುವ ಮೂಲಕ ಜಯದ ನಾಗಾಲೋಟ ಮುಂದುವರೆಸಿತು.

5ನೇ ಪಂದ್ಯ: ಏಪ್ರಿಲ್‌ 25

ಮೂರು ಬಾರಿಯ ಐಪಿಎಲ್‌ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಎದುರು ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಆರ್‌ಸಿಬಿ ಮೊದಲ ಸೋಲಿನ ರುಚಿ ಕಂಡಿತು. ಸಿಎಸ್‌ಕೆ 69 ರನ್‌ಗಳ ಅಂತರದ ಗೆಲುವು ದಾಖಲಿಸಿತು.

6ನೇ ಪಂದ್ಯ: ಏಪ್ರಿಲ್ 27

ಡೆಲ್ಲಿ ಕ್ಯಾಪಿಟಲ್ಸ್ ಎದುರು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 1 ರನ್‌ ಅಂತರದ ರೋಚಕ ಜಯ ಸಾಧಿಸಿ ಗೆಲುವಿನ ಹಳಿಗೆ ಮರಳಿತ್ತು.

7ನೇ ಪಂದ್ಯ: ಏಪ್ರಿಲ್ 30

ಪಂಜಾಬ್‌ ಕಿಂಗ್ಸ್ ವಿರುದ್ದ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಕೆ.ಎಲ್. ರಾಹುಲ್ ಪಡೆ ಆರ್‌ಸಿಗೆ ಶಾಕ್ ನೀಡುವಲ್ಲಿ ಯಶಸ್ವಿಯಾಗಿತು. ಪಂಜಾಬ್ 34 ರನ್‌ಗಳ ಗೆಲುವು ದಾಖಲಿಸಿತ್ತು.

8ನೇ ಪಂದ್ಯ: ಸೆಪ್ಟೆಂಬರ್ 20

ಕೋಲ್ಕತ ನೈಟ್‌ ರೈಡರ್ಸ್ ವಿರುದ್ದ ಅಬುಧಾಬಿಯ ಶೇಕ್ ಜಾಯೆದ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಇಯಾನ್‌ ಮಾರ್ಗನ್ ನೇತೃತ್ವದ ಕೆಕೆಆರ್ ತಂಡವು 9 ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ಸಾಧಿಸಿತ್ತು.

9ನೇ ಪಂದ್ಯ: ಸೆಪ್ಟೆಂಬರ್ 24

ಎಂ ಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ಎದುರು ಶಾರ್ಜಾ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಆರ್‌ಸಿಬಿ ತಂಡವು ಮತ್ತೊಂದು ಸೋಲು ಅನುಭವಿಸಿತು. ಸಿಎಸ್‌ಕೆ 6 ವಿಕೆಟ್‌ಗಳ ಅಂತರದ ಗೆಲುವು ದಾಖಲಿಸಿತು.

(Photo source- Instagram)

10ನೇ ಪಂದ್ಯ: ಸೆಪ್ಟೆಂಬರ್ 26

ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್ ವಿರುದ್ದ ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಆರ್‌ಸಿಬಿ ತಂಡವು 54 ರನ್‌ಗಳ ಅಂತರದ ಗೆಲುವು ದಾಖಲಿಸುವ ಮೂಲಕ ಗೆಲುವಿನ ಲಯಕ್ಕೆ ಮರಳಿತು.

11ನೇ ಪಂದ್ಯ: ಸೆಪ್ಟೆಂಬರ್ 29

ರಾಜಸ್ಥಾನ ರಾಯಲ್ಸ್ ವಿರುದ್ದ ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಆರ್‌ಸಿಬಿ ತಂಡವು 7 ವಿಕೆಟ್‌ಗಳ ಅಂತರದ ಗೆಲುವು ದಾಖಲಿಸುವ ಮೂಲಕ ಪ್ಲೇ ಆಫ್ ಹಾದಿಯನ್ನು ಸುಗಮಗೊಳಿಸಿಕೊಂಡಿತು

12ನೇ ಪಂದ್ಯ: ಅಕ್ಟೋಬರ್ 03

ಪಂಜಾಬ್ ಕಿಂಗ್ಸ್ ವಿರುದ್ದ ಶಾರ್ಜಾ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 6 ರನ್‌ಗಳ ಅಂತರದ ರೋಚಕ ಗೆಲುವು ಸಾಧಿಸುವ ಮೂಲಕ ಇನ್ನೂ 2 ಪಂದ್ಯಗಳು ಬಾಕಿ ಇರುವಂತೆಯೇ ಪ್ಲೇ ಆಫ್‌ಗೆ ಅರ್ಹತೆ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಯಿತು.

13ನೇ ಪಂದ್ಯ: ಅಕ್ಟೋಬರ್ 06

ಸನ್‌ರೈಸರ್ಸ್ ಹೈದರಾಬಾದ್ ವಿರುದ್ದ ಅಬುಧಾಬಿಯ ಶೇಕ್ ಜಾಯೆದ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಆರ್‌ಸಿಬಿ ತಂಡವು 4 ರನ್‌ಗಳ ರೋಚಕ ಸೋಲು ಅನುಭವಿಸಿತು.

14ನೇ ಪಂದ್ಯ: ಅಕ್ಟೋಬರ್ 08

ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಆರ್‌ಸಿಬಿ 7 ವಿಕೆಟ್‌ಗಳ ರೋಚಕ ಜಯ ಸಾಧಿಸುವ ಮೂಲಕ ಲೀಗ್ ಹಂತವನ್ನು ಅತ್ಯಂತ ಯಶಸ್ವಿಯಾಗಿ ಮುಗಿಸಿದೆ.

(Photo source- iplt20.com)

Latest Videos

click me!