IPL 2022: ಸನ್‌ರೈಸರ್ಸ್‌ ತಂಡದಲ್ಲಿ ಮೇಜರ್ ಸರ್ಜರಿ, ದಿಗ್ಗಜ ಕ್ರಿಕೆಟಿಗರು ಹೈದರಾಬಾದ್‌ ಪಡೆಗೆ ಕೋಚ್..!

Suvarna News   | Asianet News
Published : Dec 23, 2021, 03:59 PM IST

ಬೆಂಗಳೂರು: 15ನೇ ಆವೃತ್ತಿಯ ಐಪಿಎಲ್ ಟೂರ್ನಿ (IPL 2022) ಆರಂಭಕ್ಕೂ ಮುನ್ನ ಎಲ್ಲಾ ಫ್ರಾಂಚೈಸಿಗಳು ಸಕಲ ಸಿದ್ದತೆಗಳನ್ನು ಆರಂಭಿಸಿವೆ. ಈಗಾಗಲೇ ತಮಗೆ ಬೇಕಾದ ಆಟಗಾರರನ್ನು ರೀಟೈನ್ ಮಾಡಿಕೊಂಡಿದ್ದು, ಮೆಗಾ ಹರಾಜಿನಲ್ಲಿ (IPL Auction 2022) ಅಳೆದು-ತೂಗಿ ತಮಗೆ ಬೇಕಾಗಿರುವ ಆಟಗಾರರ ಖರೀದಿಗೆ ಎಲ್ಲಾ ಫ್ರಾಂಚೈಸಿಗಳು ತಮ್ಮ ರಣತಂತ್ರ ಹೆಣೆದಿವೆ. ಹೀಗಿರುವಾಗಲೇ ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ನೀರಸ ಪ್ರದರ್ಶನ ತೋರುವ ಮೂಲಕ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದಿದ್ದ ಸನ್‌ರೈಸರ್ಸ್ ಹೈದರಾಬಾದ್‌ (Sunrisers Hyderabad) ತಂಡಕ್ಕೆ ಮೇಜರ್‌ ಸರ್ಜರಿಯಾಗಿದ್ದು, ದಿಗ್ಗಜ ಆಟಗಾರರು ಕೋಚ್‌ ಹುದ್ದೆ ಅಲಂಕರಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

PREV
19
IPL 2022: ಸನ್‌ರೈಸರ್ಸ್‌ ತಂಡದಲ್ಲಿ ಮೇಜರ್ ಸರ್ಜರಿ, ದಿಗ್ಗಜ ಕ್ರಿಕೆಟಿಗರು ಹೈದರಾಬಾದ್‌ ಪಡೆಗೆ ಕೋಚ್..!

14ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಕೇನ್ ವಿಲಿಯಮ್ಸನ್ ನೇತೃತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡವು ಆಡಿದ 14 ಪಂದ್ಯಗಳ ಪೈಕಿ ಕೇವಲ 3 ಪಂದ್ಯಗಳಲ್ಲಿ ಗೆಲುವು ಹಾಗೂ 11 ಪಂದ್ಯಗಳಲ್ಲಿ ಸೋಲು ಕಾಣುವ ಮೂಲಕ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದಿತ್ತು. 
 

29

2016ರ ಐಪಿಎಲ್ ಚಾಂಪಿಯನ್‌ ಸನ್‌ರೈಸರ್ಸ್ ಹೈದರಾಬಾದ್ ತಂಡವು ಮೊದಲ ಬಾರಿಗೆ ಕಳೆದ ಆವೃತ್ತಿಯಲ್ಲಿ ಪ್ಲೇ ಆಫ್‌ಗೇರಲು ವಿಫಲವಾಗಿತ್ತು. ಇದರ ಬೆನ್ನಲ್ಲೇ ಹೈದರಾಬಾದ್ ಫ್ರಾಂಚೈಸಿಯು, ತನ್ನ ತಂಡಕ್ಕೆ ಮೇಜರ್ ಸರ್ಜರಿ ಮಾಡಿದೆ.

39

ವೆಸ್ಟ್ ಇಂಡೀಸ್ ತಂಡದ ದಿಗ್ಗಜ ಕ್ರಿಕೆಟಿಗ ಬ್ರಿಯನ್ ಲಾರಾ ಅವರನ್ನು ಸನ್‌ರೈಸರ್ಸ್‌ ಹೈದರಾಬಾದ್ ಫ್ರಾಂಚೈಸಿ ಬ್ಯಾಟಿಂಗ್ ಕೋಚ್ ಹಾಗೂ ತಾಂತ್ರಿಕ ಸಲಹೆಗಾರರನ್ನಾಗಿ ನೇಮಕ ಮಾಡಿಕೊಂಡಿದೆ. 

49

ಇನ್ನು ಈ ಮೊದಲೇ ವರದಿಯಾದಂತೆ, ದಕ್ಷಿಣ ಆಫ್ರಿಕಾದ ಮಾಜಿ ವೇಗದ ಬೌಲರ್‌ ಡೇಲ್ ಸ್ಟೇನ್‌, ಹೈದರಾಬಾದ್ ತಂಡದ ಬೌಲಿಂಗ್ ಕೋಚ್ ಆಗಿ ನೇಮಕವಾಗಿದ್ದಾರೆ. ಇನ್ನು ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಹೇಮಂಗ್ ಬದಾನಿ ಫೀಲ್ಡಿಂಗ್ ಕೋಚ್ ಆಗಿ ನೇಮಕವಾಗಿದ್ದಾರೆ.

59

ಕಳೆದ ಆವೃತ್ತಿಯಲ್ಲಿ ಹೈದರಾಬಾದ್ ತಂಡವು ನೀರಸ ಪ್ರದರ್ಶನ ತೋರಿ ಪ್ಲೇ-ಆಫ್‌ಗೇರಲು ವಿಫಲವಾದ ಬೆನ್ನಲ್ಲೇ ಕೋಚ್‌ ಟ್ರಾವೆಲ್ ಬೈಲಿಸ್ ಅವರನ್ನು ಹೊರದಬ್ಬಿ, ಟಾಮ್‌ ಮೂಡಿ ಅವರನ್ನು ಸನ್‌ರೈಸರ್ಸ್ ಹೆಡ್ ಕೋಚ್ ಆಗಿ ನೇಮಕ ಮಾಡಿಕೊಳ್ಳಲಾಗಿದೆ. 

69

ಇನ್ನುಳಿದಂತೆ ಸೈಮನ್ ಕ್ಯಾಟಿಚ್ ಅವರನ್ನು ಸನ್‌ರೈಸರ್ಸ್ ಫ್ರಾಂಚೈಸಿ ಸಹಾಯಕ ಕೋಚ್ ಆಗಿ ನೇಮಕ ಮಾಡಿಕೊಂಡಿದೆ. ಕಳೆದ ಆವೃತ್ತಿಯಲ್ಲಿ ಕ್ಯಾಟಿಚ್‌, ಆರ್‌ಸಿಬಿ ತಂಡದ ಹೆಡ್‌ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದರು. ಆದರೆ ವೈಯುಕ್ತಿಕ ಕಾರಣದಿಂದ ಯುಎಇ ಚರಣದಲ್ಲಿ ಕ್ಯಾಟಿಚ್ ಪಾಲ್ಗೊಂಡಿರಲಿಲ್ಲ.

79

ಇದೀಗ ಕ್ಯಾಟಿಚ್‌ ಸನ್‌ರೈಸರ್ಸ್‌ ತೆಕ್ಕೆಗೆ ಜಾರಿದ್ದಾರೆ. ಈ ಮೊದಲು ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಬ್ರಾಡ್ ಹಡ್ಡಿನ್‌ ಸನ್‌ರೈಸರ್ಸ್ ಹೈದರಾಬಾದ್ ತಂಡದ ಸಹಾಯಕ ಕೋಚ್ ಆಗಿ ಕಾರ್ಯನಿರ್ವಹಿಸುತ್ತಾ ಇದ್ದರು.

89

ಇನ್ನು ವಿವಿಎಸ್‌ ಲಕ್ಷ್ಮಣ್‌, ರಾಷ್ಟ್ರೀಯ ಕ್ರಿಕೆಟ್ ಅಕಾಡಮಿ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿರುವುದರಿಂದ, ತಂಡದ ಮೆಂಟರ್ ಆಗಿ ಸ್ಪಿನ್ ದಿಗ್ಗಜ ಮುತ್ತಯ್ಯ ಮುರುಳೀಧರನ್ ಅವರನ್ನು ಹೈದರಾಬಾದ್ ಫ್ರಾಂಚೈಸಿ ತನ್ನಲ್ಲೇ ಉಳಿಸಿಕೊಂಡಿದೆ. ಇದರ ಜತೆಗೆ ಮುರುಳಿ ಸ್ಪಿನ್ ಬೌಲಿಂಗ್ ಕೋಚ್ ಆಗಿಯೂ ಕಾರ್ಯ ನಿರ್ವಹಿಸಲಿದ್ದಾರೆ. 

99

ಮೆಗಾ ಹರಾಜಿಗೂ ಮುನ್ನ ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ತನ್ನ ನಾಯಕ ಕೇನ್ ವಿಲಿಯಮ್ಸನ್‌, ಯುವ ಪ್ರತಿಭಾನ್ವಿತ ಕ್ರಿಕೆಟಿಗರಾದ ಅಬ್ದುಲ್ ಸಮದ್ ಹಾಗೂ ಉಮ್ರಾನ್ ಮಲಿಕ್ ಅವರನ್ನು ರೀಟೈನ್ ಮಾಡಿಕೊಂಡಿದೆ.

Read more Photos on
click me!

Recommended Stories