MS Dhoni IPL 2022 ಟೂರ್ನಿ ಆಡ್ತಾರಾ? ಮಿಲಿಯನ್ ಡಾಲರ್ ಪ್ರಶ್ನೆಗೆ ಚುಟುಕಾಗಿ ಉತ್ತರಿಸಿದ CSK ನಾಯಕ..!

First Published | Nov 21, 2021, 4:59 PM IST

ಬೆಂಗಳೂರು: ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ತಂಡ ಯಶಸ್ವಿ ನಾಯಕ ಮಹೇಂದ್ರ ಸಿಂಗ್ ಧೋನಿ (MS Dhoni) 2022ರ ಐಪಿಎಲ್‌ (IPL 2022) ಟೂರ್ನಿಯಲ್ಲಿ ಆಟಗಾರನಾಗಿ ಕಾಣಿಸಿಕೊಳ್ಳುತ್ತಾರಾ ಎನ್ನುವುದು ಅವರ ಅಭಿಮಾನಿಗಳ ಪಾಲಿಗೆ ಮಿಲಿಯನ್ ಡಾಲರ್ ಪ್ರಶ್ನೆಯಾಗಿ ಕಾಡುತ್ತಿದೆ. ಇದೀಗ ಚೆನ್ನೈನಲ್ಲೇ ನಡೆದ ಕಾರ್ಯಕ್ರಮದಲ್ಲಿ ಈ ಪ್ರಶ್ನೆಗೆ ಕ್ಯಾಪ್ಟನ್ ಕೂಲ್ ಖ್ಯಾತಿಯ ಧೋನಿ ಚುಟುಕಾಗಿ ಉತ್ತರಿಸಿದ್ದಾರೆ. ಅಷ್ಟಕ್ಕೂ ಈ ಪ್ರಶ್ನೆಗೆ ಧೋನಿ ಏನಂದ್ರು ಎನ್ನುವ ನಿಮ್ಮ ಪ್ರಶ್ನೆಗೆ ಇಲ್ಲಿದೆ ನೋಡಿ ಉತ್ತರ.
 

MS Dhoni

ಮಹೇಂದ್ರ ಸಿಂಗ್ ಧೋನಿ ಐಪಿಎಲ್‌ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ತಂಡವನ್ನು 4 ಬಾರಿ ಚಾಂಪಿಯನ್‌ ಪಟ್ಟಕ್ಕೇರಿಸುವಲ್ಲಿ ಯಶಸ್ವಿಯಾಗುವ ಮೂಲಕ ಚೆನ್ನೈ ಕ್ರಿಕೆಟ್‌ ಅಭಿಮಾನಿಗಳ ಪಾಲಿನ ಆರಾಧ್ಯ ದೈವ ಎನಿಸಿಕೊಂಡಿದ್ದಾರೆ.

ಯುಎಇನಲ್ಲಿ ನಡೆದ ಐಪಿಎಲ್‌ ಟೂರ್ನಿಯಲ್ಲಿ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಕೋಲ್ಕತ ನೈಟ್ ರೈಡರ್ಸ್‌ ತಂಡವನ್ನು ಮಣಿಸುವ ಮೂಲಕ ನಾಲ್ಕನೇ ಬಾರಿಗೆ ಐಪಿಎಲ್‌ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.
(photo source- iplt20.com)

Tap to resize

CSK ತಂಡ ಚಾಂಪಿಯನ್ ಆಗಿದ್ದರೂ ಸಹ, ಧೋನಿ ಬ್ಯಾಟಿಂಗ್‌ನಲ್ಲಿ ದಯನೀಯ ವೈಫಲ್ಯ ಅನುಭವಿಸಿದ್ದರು. ಹೀಗಾಗಿ ಧೋನಿ ಮುಂದಿನ ಆವೃತ್ತಿಯಲ್ಲಿ ಐಪಿಎಲ್‌ ಟೂರ್ನಿಯಲ್ಲಿ ಕಣಕ್ಕಿಳಿಯುತ್ತಾರಾ ಎನ್ನುವ ಪ್ರಶ್ನೆ ಅವರ ಅಭಿಮಾನಿಗಳಲ್ಲಿ ಕಾಡಲಾರಂಭಿಸಿದೆ.

ಇದೀಗ, ಈ ಪ್ರಶ್ನೆಗೆ ಕ್ಯಾಪ್ಟನ್‌ ಕೂಲ್ ಪ್ರತಿಕ್ರಿಯಿಸಿದ್ದು, 2022ರ ಐಪಿಎಲ್‌ನಲ್ಲಿ ಆಡುವ ಬಗ್ಗೆ ಈಗಲೇ ನಿರ್ಧಾರ ಮಾಡಿಲ್ಲ ಎಂದು ಚೆನ್ನೈ ಸೂಪರ್‌ ಕಿಂಗ್ಸ್‌ ನಾಯಕ ಎಂ.ಎಸ್‌.ಧೋನಿ ಹೇಳಿದ್ದಾರೆ. 

2021ನೇ ಆವೃತ್ತಿಯ ಐಪಿಎಲ್‌ ಚಾಂಪಿಯನ್‌ ಚೆನ್ನೈ ತಂಡದ ಸನ್ಮಾನ ಕಾರ‍್ಯಕ್ರಮದಲ್ಲಿ ಮಾತನಾಡಿದ ಅವರು, ‘ಮುಂದಿನ ವರ್ಷದ ಐಪಿಎಲ್‌ ಇರುವುದು ಏಪ್ರಿಲ್‌ನಲ್ಲಿ. ಆದರೆ ಈಗಿನ್ನೂ ನವೆಂಬರ್‌. ಈ ಬಗ್ಗೆ ಈಗಲೇ ಏನನ್ನೂ ಹೇಳಲು ಆಗುವುದಿಲ್ಲ ಎಂದಿದ್ದಾರೆ.
(photo source- iplt20.com)

MS Dhoni

ನಾನು ಭಾರತದಲ್ಲಿ ಕೊನೆಯ ಬಾರಿ ಏಕದಿನ ಪಂದ್ಯ ಆಡಿದ್ದು ನನ್ನ ತವರು ರಾಂಚಿಯಲ್ಲಿ. ಹೀಗಾಗಿ ನನ್ನ ಕೊನೆಯ ಟಿ20 ಪಂದ್ಯವನ್ನು ಚೆನ್ನೈನಲ್ಲಿ ಆಡುಬಹುದು. ಅದು ಮುಂದಿನ ವರ್ಷವೇ ಆಗಬಹುದು ಇಲ್ಲವೇ ಇನ್ನು 5 ವರ್ಷ ಬಿಟ್ಟು ಆಗಬಹುದು. ಯಾವಾಗ ಎಂದು ನಾನು ಯೋಚನೆ ಮಾಡಿಲ್ಲ’ ಎಂದಿದ್ದಾರೆ.

2022ನೇ ಸಾಲಿನ ಐಪಿಎಲ್‌ ಟೂರ್ನಿಗೆ ಹೊಸದಾಗಿ ಎರಡು ತಂಡಗಳು ಸೇರ್ಪಡೆಯಾಗಿವೆ. ಹೀಗಾಗಿ ಮೆಗಾ ಹರಾಜಿಗೂ ಮುನ್ನ ಈಗಿರುವ 8 ಫ್ರಾಂಚೈಸಿಗಳಿಗೆ ಗರಿಷ್ಠ 4 ಆಟಗಾರರನ್ನು ರೀಟೈನ್‌ ಮಾಡಿಕೊಳ್ಳಲು ಅವಕಾಶ ನೀಡಿದೆ.

ಇದುವರೆಗೂ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 12 ಆವೃತ್ತಿಗಳಲ್ಲಿ ಕಣಕ್ಕಿಳಿದಿದ್ದು, ಈ ಪೈಕಿ 11 ಬಾರಿ ಪ್ಲೇ ಆಫ್‌ ಹಂತಕ್ಕೆ ಪ್ರವೇಶಿಸುವ ಮೂಲಕ ಟೂರ್ನಿಯಲ್ಲಿ ಅತ್ಯಂತ ಸ್ಥಿರ ಪ್ರದರ್ಶನ ತೋರಿದ ತಂಡವೆನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಮಹೇಂದ್ರ ಸಿಂಗ್ ಧೋನಿ 190 ಪಂದ್ಯಗಳಲ್ಲಿ ನಾಯಕನಾಗಿ ಕಣಕ್ಕಿಳಿದಿದ್ದು, 116 ಪಂದ್ಯಗಳಲ್ಲಿ ಚೆನ್ನೈ ಗೆಲುವಿನ ನಗೆ ಬೀರಿದೆ. ಧೋನಿ ಮುಂದಿನ ಅವೃತ್ತಿಯಲ್ಲಿ ಕಣಕ್ಕಿಳಿಯುತ್ತಾರಾ ಎನ್ನುವುದಕ್ಕೆ ಕಾಲವೇ ಉತ್ತರಿಸಬೇಕಿದೆ.
(photo source- iplt20.com)

Latest Videos

click me!