1. ಕೆ.ಎಲ್.ರಾಹುಲ್ :
ಐಪಿಎಲ್ ಮೆಗಾ ಹರಾಜಿಗೂ ಮುನ್ನ ಆರ್.ಪಿ. ಸಂಜೀವ್ ಗೋಯೆಂಕಾ ಮಾಲೀಕತ್ವದ ಲಖನೌ ಫ್ರಾಂಚೈಸಿಯು ಕೆ.ಎಲ್. ರಾಹುಲ್ ಅವರನ್ನು 17 ಕೋಟಿ ರುಪಾಯಿ ನೀಡಿ ಖರೀದಿಸಿತ್ತು. ಇದರ ಜತೆಗೆ ಲಖನೌ ಸೂಪರ್ ಜೈಂಟ್ಸ್ ತಂಡದ ನಾಯಕತ್ವ ಪಟ್ಟವನ್ನು ಕಟ್ಟಿದೆ.
2. ಮಯಾಂಕ್ ಅಗರ್‌ವಾಲ್
ಟೀಂ ಇಂಡಿಯಾ ಮತ್ತೋರ್ವ ಆರಂಭಿಕ ಬ್ಯಾಟರ್, ಕನ್ನಡಿಗ ಮಯಾಂಕ್ ಅಗರ್‌ವಾಲ್ ಅವರನ್ನು ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯು ಹರಾಜಿಗೂ ಮುನ್ನ 12 ಕೋಟಿ ರುಪಾಯಿ ನೀಡಿ ರೀಟೈನ್ ಮಾಡಿಕೊಂಡಿತ್ತು. ಹೀಗಾಗಿ 15ನೇ ಆವೃತ್ತಿಯ ಐಪಿಎಲ್‌ನಲ್ಲಿ ಮಯಾಂಕ್, ಪಂಜಾಬ್ ತಂಡದಲ್ಲಿಯೇ ಮುಂದುವರೆಯಲಿದ್ದಾರೆ.
3. ಮನೀಶ್ ಪಾಂಡೆ
ಕರ್ನಾಟಕ ಕ್ರಿಕೆಟ್ ತಂಡದ ನಾಯಕ ಮನೀಶ್ ಪಾಂಡೆಯನ್ನು ಲಖನೌ ಸೂಪರ್ ಜೈಂಟ್ಸ್ ಫ್ರಾಂಚೈಸಿಯು 4.60 ಕೋಟಿ ರುಪಾಯಿ ನೀಡಿ ಖರೀದಿಸುವಲ್ಲಿ ಯಶಸ್ವಿಯಾಗಿದೆ. ಕಳೆದ ಆವೃತ್ತಿಯ ಐಪಿಎಲ್‌ನಲ್ಲಿ ಮನೀಶ್, ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಪ್ರತಿನಿಧಿಸಿದ್ದರು.
4. ಕೃಷ್ಣಪ್ಪ ಗೌತಮ್
ಕರ್ನಾಟಕ ತಂಡದ ಅನುಭವಿ ಆಲ್ರೌಂಡರ್ ಕೃಷ್ಣಪ್ಪ ಗೌತಮ್ ಅವರನ್ನು ಲಖನೌ ಫ್ರಾಂಚೈಸಿಯು 90 ಲಕ್ಷ ರುಪಾಯಿ ನೀಡಿ ಖರೀದಿಸಿದೆ. ಕಳೆದ ಆವೃತ್ತಿಯ ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಕೆ. ಗೌತಮ್ ಅವರಿಗೆ 9.25 ಕೋಟಿ ನೀಡಿ ಖರೀದಿಸಿತ್ತು.
5. ಅಭಿನವ್ ಮನೋಹರ್
ದೇಶಿ ಕ್ರಿಕೆಟ್‌ನಲ್ಲಿ ಮಿಂಚಿನ ಪ್ರದರ್ಶನ ತೋರುವ ಮೂಲಕ ಗಮನ ಸೆಳೆದಿದ್ದ ರಾಜ್ಯದ ಪ್ರತಿಭಾನ್ವಿತ ಬ್ಯಾಟರ್ ಅಭಿನವ್ ಮನೋಹರ್ ಅವರನ್ನು ಗುಜರಾತ್ ಟೈಟಾನ್ಸ್ ತಂಡವು ಬರೋಬ್ಬರಿ 2.60 ಕೋಟಿ ರುಪಾಯಿ ನೀಡಿ ತನ್ನ ತೆಕ್ಕೆಗೆ ಸೆಳೆದುಕೊಂಡಿದೆ.
6. ಪ್ರವೀಣ್ ದುಬೆ:
ಕರ್ನಾಟಕ ತಂಡದ ಆಲ್ರೌಂಡರ್ ಪ್ರವೀಣ್ ದುಬೆಯನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು 50 ಲಕ್ಷ ರುಪಾಯಿ ನೀಡಿ ತನ್ನ ತೆಕ್ಕೆಗೆ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಕಳೆದ ಆವೃತ್ತಿಯ ಐಪಿಎಲ್‌ನಲ್ಲಿ ದುಬೆ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಪ್ರತಿನಿಧಿಸಿದ್ದರು.
7. ದೇವದತ್ ಪಡಿಕ್ಕಲ್
ಆರ್‌ಸಿಬಿ ತಂಡದ ಪರ ಮಿಂಚಿನ ಪ್ರದರ್ಶನ ತೋರುವ ಮೂಲಕ ಗಮನ ಸೆಳೆದಿದ್ದ ಆರಂಭಿಕ ಬ್ಯಾಟರ್ ದೇವದತ್ ಪಡಿಕ್ಕಲ್ ಅವರನ್ನು ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯು 7.75 ಕೋಟಿ ರುಪಾಯಿ ನೀಡಿ ತನ್ನ ತೆಕ್ಕೆಗೆ ಸೆಳೆದುಕೊಂಡಿದೆ.
8. ಕೆ.ಸಿ. ಕರಿಯಪ್ಪ
ಮಿಸ್ಟ್ರಿ ಸ್ಪಿನ್ನರ್ ಖ್ಯಾತಿಯ ಕೆ.ಸಿ. ಕರಿಯಪ್ಪ ಅವರನ್ನು ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯು 30 ಲಕ್ಷ ರುಪಾಯಿ ನೀಡಿ ಖರೀದಿಸುವಲ್ಲಿ ಯಶಸ್ವಿಯಾಗಿದೆ. ದೇಶಿ ಕ್ರಿಕೆಟ್‌ನಲ್ಲಿ ಕರಿಯಪ್ಪ ಉತ್ತಮ ಫಾರ್ಮ್‌ನಲ್ಲಿದ್ದಾರೆ.
9. ಪ್ರಸಿದ್ಧ್ ಕೃಷ್ಣ
ರಾಜ್ಯದ ನೀಳಕಾಯದ ವೇಗಿ ಪ್ರಸಿದ್ದ್ ಕೃಷ್ಣ ಅವರಿಗೆ ಈ ಬಾರಿಯ ಹರಾಜಿನಲ್ಲಿ ಜಾಕ್‌ಪಾಟ್ ಹೊಡೆದಿದ್ದು, ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯು ಪ್ರಸಿದ್ಧ್‌ಗೆ 10 ಕೋಟಿ ರುಪಾಯಿ ನೀಡಿ ತನ್ನ ತೆಕ್ಕೆಗೆ ಸೆಳೆದುಕೊಂಡಿದೆ. ಕಳೆದ ಆವೃತ್ತಿಯ ಐಪಿಎಲ್‌ನಲ್ಲಿ ಪ್ರಸಿದ್ಧ್ ಕೆಕೆಆರ್ ತಂಡವನ್ನು ಪ್ರತಿನಿಧಿಸಿದ್ದರು.
10. ಕರುಣ್ ನಾಯರ್
ಕರ್ನಾಟಕ ಕ್ರಿಕೆಟ್ ತಂಡದ ಮಾಜಿ ನಾಯಕ ಕರುಣ್ ನಾಯರ್ ಅವರನ್ನು ಖರೀದಿಸಲು ಕರ್ನಾಟಕ ತಂಡವು ಪ್ರಯತ್ನಿಸಿತಾದರೂ, ಕೊನೆಗೆ ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯು 1.40 ಕೋಟಿ ರುಪಾಯಿ ನೀಡಿ ತನ್ನ ತೆಕ್ಕೆಗೆ ಸೆಳೆದುಕೊಂಡಿದೆ.
11. ಆರ್.ಸಮರ್ಥ್
ಕರ್ನಾಟಕ ತಂಡದ ಅನುಭವಿ ಬ್ಯಾಟರ್ ರವಿಕುಮಾರ್ ಸಮರ್ಥ್ ಅವರನ್ನು ಮೂಲ ಬೆಲೆ 20 ರುಪಾಯಿಗೆ ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ತನ್ನ ತೆಕ್ಕೆಗೆ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.
12: ಜೆ.ಸುಚಿತ್
ಕರ್ನಾಟಕ ತಂಡದ ಪ್ರತಿಭಾನ್ವಿತ ಆಲ್ರೌಂಡರ್ ಜಗದೀಶ್ ಸುಚಿತ್ ಅವರನ್ನು ಮೂಲ ಬೆಲೆ 20 ಲಕ್ಷ ರುಪಾಯಿಗೆ ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ತನ್ನ ತೆಕ್ಕೆಗೆ ಸೆಳೆದುಕೊಂಡಿದೆ.
13. ಶ್ರೇಯಸ್ ಗೋಪಾಲ್
ಕರ್ನಾಟಕ ಕ್ರಿಕೆಟ್ ತಂಡದ ಅನುಭವಿ ಆಲ್ರೌಂಡರ್ ಶ್ರೇಯಸ್ ಗೋಪಾಲ್ ಅವರನ್ನು ಸಹ ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು 75 ಲಕ್ಷ ರುಪಾಯಿ ನೀಡಿ ತನ್ನ ತೆಕ್ಕೆಗೆ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಹಿಂದೆ ಶ್ರೇಯಸ್ ಗೋಪಾಲ್ ರಾಜಸ್ಥಾನ ರಾಯಲ್ಸ್ ತಂಡವನ್ನು ಪ್ರತಿನಿಧಿಸಿದ್ದರು.
14. ರಾಬಿನ್ ಉತ್ತಪ್ಪ
ಕರ್ನಾಟಕದ ಅನುಭವಿ ಆಟಗಾರರ ರಾಬಿನ್ ಉತ್ತಪ್ಪ ಅವರನ್ನು ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಮೂಲ ಬೆಲೆ 2 ಕೋಟಿ ರುಪಾಯಿಗೆ ತನ್ನ ತೆಕ್ಕೆಗೆ ಸೆಳೆದುಕೊಂಡಿದೆ. ಕಳೆದ ಆವೃತ್ತಿಯ ಐಪಿಎಲ್‌ನಲ್ಲಿ ಸಿಎಸ್‌ಕೆ ಚಾಂಪಿಯನ್ ಪಟ್ಟಕ್ಕೇರುವಲ್ಲಿ ಉತ್ತಪ್ಪ ಮಹತ್ತರ ಪಾತ್ರ ವಹಿಸಿದ್ದರು.
15. ಅನೀಶ್ವರ್ ಗೌತಮ್
ಅಂಡರ್ 19 ವಿಶ್ವಕಪ್ ಪ್ರತಿಭೆ, ಲೋಕಲ್ ಬಾಯ್ ಅನೀಶ್ವರ್ ಗೌತಮ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು 20 ಲಕ್ಷ ರುಪಾಯಿ ನೀಡಿ ಖರೀದಿಸುವ ಮೂಲಕ ಯುವ ಪ್ರತಿಭೆಗೆ ಮಣೆ ಹಾಕಿದೆ
16. ಲುವ್ನಿತ್ ಸಿಸೋಡಿಯಾ
ಕರ್ನಾಟಕ ತಂಡದ ಮತ್ತೋರ್ವ ಪ್ರತಿಭಾನ್ವಿತ ಬ್ಯಾಟಿಂಗ್ ತಾರೆ ಲುವ್ನಿತ್ ಸಿಸೋಡಿಯಾ ಅವರನ್ನು ಸಹ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು 20 ಲಕ್ಷ ರುಪಾಯಿ ನೀಡಿ ಖರೀದಿಸಿದೆ. ಈ ಮೂಲಕ ಇಬ್ಬರು ರಾಜ್ಯದ ಆಟಗಾರರು ಆರ್‌ಸಿಬಿ ತಂಡ ಕೂಡಿಕೊಂಡಿದ್ದಾರೆ.