IPL 2022: ಐಪಿಎಲ್‌ನಲ್ಲಿ ಅತಿಹೆಚ್ಚು ಬಾರಿ ಪ್ಲೇ ಆಫ್‌ ಪ್ರವೇಶಿಸಿದ ಟಾಪ್ 3 ತಂಡಗಳಿವು..!

Suvarna News   | Asianet News
Published : Mar 13, 2022, 04:48 PM IST

ಬೆಂಗಳೂರು: ಬಹುನಿರೀಕ್ಷಿತ 15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್(Indian Premier League) ಟೂರ್ನಿ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಇದುವರೆಗೂ ಯಶಸ್ವಿ 14 ಆವೃತ್ತಿಯ ಐಪಿಎಲ್‌ ಟೂರ್ನಿಗಳು ಮುಕ್ತಾಯವಾಗಿದ್ದು, ಈ ಬಾರಿ 10 ತಂಡಗಳು ಮಿಲಿಯನ್ ಡಾಲರ್ ಕ್ರಿಕೆಟ್‌ ಟೂರ್ನಿಯಲ್ಲಿ ಪಾಲ್ಗೊಳ್ಳುತ್ತಿವೆ. ಈ ಹಿಂದಿನ ಐಪಿಎಲ್‌ (IPL 2022) ಟೂರ್ನಿಯಲ್ಲಿ ಅತಿಹೆಚ್ಚು ಬಾರಿ ಪ್ಲೇ ಆಫ್‌ ಪ್ರವೇಶಿಸಿದ ಟಾಪ್ 3 ತಂಡಗಳ ಕಂಪ್ಲೀಟ್‌ ಡೀಟೈಲ್ಸ್ ಇಲ್ಲಿದೆ ನೋಡಿ

PREV
16
IPL 2022: ಐಪಿಎಲ್‌ನಲ್ಲಿ ಅತಿಹೆಚ್ಚು ಬಾರಿ ಪ್ಲೇ ಆಫ್‌ ಪ್ರವೇಶಿಸಿದ ಟಾಪ್ 3 ತಂಡಗಳಿವು..!
3. ಕೋಲ್ಕತಾ ನೈಟ್‌ ರೈಡರ್ಸ್& ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು‌: 7 ಬಾರಿ ಪ್ಲೇ ಆಫ್‌ಗೆ ಲಗ್ಗೆ

ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಕೋಲ್ಕತಾ ನೈಟ್ ರೈಡರ್ಸ್‌ ತಂಡಗಳು ತಲಾ 7 ಬಾರಿ ಪ್ಲೇ ಆಫ್‌ಗೆ ಲಗ್ಗೆಯಿಟ್ಟಿವೆ. ಈ ಪೈಕಿ ಕೆಕೆಆರ್ ತಂಡವು ಎರಡು ಬಾರಿ ಐಪಿಎಲ್‌ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಯಶಸ್ವಿ ತಂಡವಾಗಿ ಗುರುತಿಸಿಕೊಂಡಿದೆ. ಆದರೆ ಆರ್‌ಸಿಬಿ ಇದುವರೆಗೂ ಕಪ್‌ ಗೆಲ್ಲಲು ಯಶಸ್ವಿಯಾಗಿಲ್ಲ.
 

26

ಗೌತಮ್‌ ಗಂಭೀರ್‌ ಕೆಕೆಆರ್ ತಂಡ ನಾಯಕತ್ವ ವಹಿಸಿಕೊಂಡ ಬಳಿಕ 2011, 2012, 2014, 2016 ಹಾಗೂ 2017ರಲ್ಲಿ ತಂಡವು ಪ್ಲೇ ಆಫ್ ಪ್ರವೇಶಿಸಿತ್ತು. ಇನ್ನು ದಿನೇಶ್ ಕಾರ್ತಿಕ್ ನೇತೃತ್ವದಲ್ಲಿ 2018ರಲ್ಲಿ ಹಾಗೂ 2021ರಲ್ಲಿ ಇಯಾನ್ ಮಾರ್ಗನ್ ನೇತೃತ್ವದ ಕೆಕೆಆರ್‌ ತಂಡವು ಪ್ಲೇ ಆಫ್‌ ಪ್ರವೇಶಿಸಿತ್ತು.

36
2. ಮುಂಬೈ ಇಂಡಿಯನ್ಸ್‌: 9 ಬಾರಿ ಪ್ಲೇ ಆಫ್‌ ಪ್ರವೇಶ

ಕೆಕೆಆರ್ ತಂಡದಂತೆ ಮುಂಬೈ ಇಂಡಿಯನ್ಸ್‌ ಕೂಡಾ ಆರಂಭಿಕ ವರ್ಷಗಳಲ್ಲಿ ಅಂತಹ ಗಮನಾರ್ಹ ಪ್ರದರ್ಶನ ತೋರಲು ವಿಫಲವಾಗಿತ್ತು. ಮುಂಬೈ ಇಂಡಿಯನ್ಸ್‌ ತಂಡವು 5 ಬಾರಿ ಚಾಂಪಿಯನ್‌ ಆಗುವ ಮೂಲಕ ಟೂರ್ನಿಯ ಅತ್ಯಂತ ಯಶಸ್ವಿ ತಂಡವಾಗಿ ಗುರುತಿಸಿಕೊಂಡಿದೆ.
 

46

ಮುಂಬೈ ಇಂಡಿಯನ್ಸ್‌ ತಂಡವು 2010ರಲ್ಲಿ ಮೊದಲ ಬಾರಿಗೆ ಪ್ಲೇ ಆಫ್‌ ಪ್ರವೇಶಿಸಿತ್ತು. ಇದಾದ ಬಳಿಕ 2011, 2012, 2013, 2014, 2015, 2017, 2019 ಹಾಗೂ 2020ರಲ್ಲಿ ಪ್ಲೇ ಆಫ್‌ ಪ್ರವೇಶಿಸಿದೆ.

56
1. ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ 11 ಬಾರಿ ಪ್ಲೇ ಆಫ್‌ ಪ್ರವೇಶಿಸಿದೆ

ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವು ಅತ್ಯಂತ ಸ್ಥಿರ ಪ್ರದರ್ಶನ ತೋರುವ ಮೂಲಕ ಗಮನ ಸೆಳೆದ ತಂಡವಾಗಿದ್ದು, ಮೊದಲ 10 ಆವೃತ್ತಿಯಲ್ಲೂ ಪ್ಲೇ ಆಫ್‌ ಪ್ರವೇಶಿಸಿದ ಏಕೈಕ ತಂಡ ಎನಿಸಿದೆ. 
 

66

ಇನ್ನು 2020ರ ಐಪಿಎಲ್‌ನಲ್ಲಿ ಮೊದಲ ಬಾರಿಗೆ ಸಿಎಸ್‌ಕೆ ತಂಡವು ಪ್ಲೇ ಆಫ್‌ ಪ್ರವೇಶಿಸಲು ವಿಫಲವಾಗಿತ್ತು. ಇನ್ನು 2021ರಲ್ಲಿ ಸಿಎಸ್‌ಕೆ ತಂಡವು ಚಾಂಪಿಯನ್‌ ಪಟ್ಟ ಅಲಂಕರಿಸುವ ಮೂಲಕ ಮತ್ತೊಮ್ಮೆ ಹಳೆಯ ಖದರ್‌ಗೆ ಮರಳಿದೆ. ಸಿಎಸ್‌ಕೆ ತಂಡವು ಬರೋಬ್ಬರಿ 11 ಬಾರಿ ಪ್ಲೇ ಆಫ್ ಪ್ರವೇಶಿಸುವ ಮೂಲಕ ಟೂರ್ನಿಯಲ್ಲಿ ಅಂತ್ಯತ ಸ್ಥಿರ ಪ್ರದರ್ಶನ ತೋರಿದ ತಂಡ ಎನಿಸಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories