ಬೆಂಗಳೂರು: 15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ನಿರ್ಣಾಯಕ ಘಟ್ಟ ಸಮೀಪಿಸಿದ್ದು, ಎರಡನೇ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಮುಖಾಮುಖಿಯಾಗುತ್ತಿದ್ದು, ಈ ಹೈವೂಲ್ಟೇಜ್ ಪಂದ್ಯಕ್ಕೆ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯವನ್ನು ವಹಿಸಿದೆ. ಫೈನಲ್ ಪ್ರವೇಶಿಸುವ ದೃಷ್ಟಿಯಿಂದ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ಸಾಕಷ್ಟು ಮಹತ್ವದ್ದೆನಿಸಿದೆ. ಈ ಸಂದರ್ಭದಲ್ಲಿ ಆರ್‌ಸಿಬಿ ಎದುರಿನ ಪಂದ್ಯಕ್ಕೆ ರಾಜಸ್ಥಾನ ರಾಯಲ್ಸ್ ತಂಡದ ಸಂಭಾವ್ಯ ತಂಡ ಹೀಗಿದೆ ನೋಡಿ.
ರಾಜಸ್ಥಾನ ರಾಯಲ್ಸ್ ತಂಡವು ಲೀಗ್ ಹಂತದಲ್ಲಿ ಭರ್ಜರಿ ಪ್ರದರ್ಶನ ತೋರುವ ಮೂಲಕ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದು, ಮೊದಲ ಕ್ವಾಲಿಫೈಯರ್ ಪಂದ್ಯವನ್ನಾಡುತ್ತು. ಗುಜರಾತ್ ಟೈಟಾನ್ಸ್ ಎದುರಿನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವು ಆಘಾತಕಾರಿ ಸೋಲು ಕಂಡಿದ್ದು, ಇದೀಗ ಎರಡನೇ ಕ್ವಾಲಿಫೈಯರ್‌ಗೆ ಸಜ್ಜಾಗಿದೆ.
26
RCB vs RR
ಚೊಚ್ಚಲ ಆವೃತ್ತಿಯ ಐಪಿಎಲ್ ಚಾಂಪಿಯನ್ ರಾಜಸ್ಥಾನ ರಾಯಲ್ಸ್ ತಂಡವು ಮತ್ತೊಮ್ಮೆ ಫೈನಲ್ ಪ್ರವೇಶಿಸಿ ಕಪ್ ಗೆಲ್ಲಲು ಎದುರು ನೋಡುತ್ತಿದ್ದು, ಆರ್‌ಸಿಬಿ ಎದುರು ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ಸಜ್ಜಾಗಿದೆ. ಹೀಗಾಗಿ ಆರ್‌ಸಿಬಿ ಎದುರು ಬಲಿಷ್ಠ ತಂಡದೊಂದಿಗೆ ಕಣಕ್ಕಿಳಿಯಲು ಸಂಜು ಸ್ಯಾಮ್ಸನ್ ಪಡೆ ಸಜ್ಜಾಗಿದೆ. ರಾಜಸ್ಥಾನ ರಾಯಲ್ಸ್ ಸಂಭಾವ್ಯ ತಂಡ ಹೀಗಿದೆ ನೋಡಿ
36
Image credit: PTI
ಆರಂಭಿಕರಾಗಿ ಯಶಸ್ವಿ ಜೈಸ್ವಾಲ್ ಹಾಗೂ ಬಟ್ಲರ್ ಕಣಕ್ಕೆ
ಪ್ರಸಕ್ತ ಆವೃತ್ತಿಯ ಐಪಿಎಲ್‌ನ ಮೊದಲಾರ್ಧದಲ್ಲಿ ಯಶಸ್ವಿ ಜೈಸ್ವಾಲ್ ಪ್ರದರ್ಶನ ಅಷ್ಟೇನೂ ಉತ್ತಮವಾಗಿರಲಿಲ್ಲ, ಆದರೆ ದ್ವಿತಿಯಾರ್ಧದಲ್ಲಿ ಜೈಸ್ವಾಲ್ ಭರ್ಜರಿಯಾಗಿ ಕಮ್‌ಬ್ಯಾಕ್ ಮಾಡಿದ್ದಾರೆ. ಇನ್ನು ಜೋಸ್ ಬಟ್ಲರ್ ಸದ್ಯ ಆರೆಂಜ್ ಕ್ಯಾಪ್ ಒಡೆಯರಾಗಿದ್ದು, ಮತ್ತೊಂದು ಸೊಗಸಾದ ಇನಿಂಗ್ಸ್ ಕಟ್ಟಲು ಎದುರು ನೋಡುತ್ತಿದ್ದಾರೆ.
46
ಮಧ್ಯಮ ಕ್ರಮಾಂಕದಲ್ಲಿ ಸಂಜು, ಪಡಿಕ್ಕಲ್, ಹೆಟ್ಮೇಯರ್
ಇನ್ನು ರಾಜಸ್ಥಾನ ರಾಯಲ್ಸ್ ಮಧ್ಯಮ ಕ್ರಮಾಂಕ ಕೂಡಾ ಸಾಕಷ್ಟು ಬಲಿಷ್ಠವಾಗಿದ್ದು, ನಾಯಕ ಸಂಜು ಸ್ಯಾಮ್ಸನ್, ಕನ್ನಡಿಗ ದೇವದತ್ ಪಡಿಕ್ಕಲ್ ಹಾಗೂ ಶಿಮ್ರೊನ್ ಹೆಟ್ಮೇಯರ್ ದೊಡ್ಡ ಇನಿಂಗ್ಸ್ ಆಡುವ ಕ್ಷಮತೆ ಹೊಂದಿದ್ದಾರೆ.
56
Ravichandran Ashwin
ಆಲ್ರೌಂಡರ್ ಪಾತ್ರ ನಿಭಾಯಿಸಲು ಅಶ್ವಿನ್-ಪರಾಗ್ ರೆಡಿ
ಇನ್ನು ರಾಜಸ್ಥಾನ ರಾಯಲ್ಸ್ ತಂಡದ ಪರ ಅನುಭವಿ ಆಲ್ರೌಂಡರ್ ರವಿಚಂದ್ರನ್ ಅಶ್ವಿನ್ ಹಾಗೂ ರಿಯಾನ್ ಪರಾಗ್, ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ತಂಡಕ್ಕೆ ಆಸರೆಯಾಗಲು ಎದುರು ನೋಡುತ್ತಿದ್ದಾರೆ.'
66
ಟಿ20 ಸ್ಪೆಷಲಿಸ್ಟ್ ಬೌಲರ್‌ಗಳನ್ನು ಹೊಂದಿದೆ ರಾಯಲ್ಸ್ ತಂಡ
ಬ್ಯಾಟಿಂಗ್ ಹಾಗೂ ಆಲ್ರೌಂಡರ್‌ನಂತೆ ಬೌಲಿಂಗ್‌ನಲ್ಲೂ ರಾಜಸ್ಥಾನ ರಾಯಲ್ಸ್ ಉತ್ತಮ ಆಟಗಾರರನ್ನು ಹೊಂದಿದೆ. ಟಿ20 ಸ್ಪೆಷಲಿಸ್ಟ್ ಬೌಲರ್‌ಗಳಾದ ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಯುಜುವೇಂದ್ರ ಚಹಲ್ ಹಾಗೂ ಒಬೆಡ್ ಮೆಕಾಯ್ ಇಂದು ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯಲು ಎದುರು ನೋಡುತ್ತಿದ್ದು, ಆರ್‌ಸಿಬಿ ಬ್ಯಾಟರ್‌ಗಳನ್ನು ಕಾಡಲು ಸಜ್ಜಾಗಿದ್ದಾರೆ.