ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನ (IPL 2022) 15ನೇ ಆವೃತ್ತಿಗೆ ಸಿದ್ಧತೆಗಳು ಶುರುವಾಗಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) (RCB), ಚೆನ್ನೈ ಸೂಪರ್ ಕಿಂಗ್ಸ್ (CSK), ಮುಂಬೈ ಇಂಡಿಯನ್ಸ್(Mumbai Indians), ಕೋಲ್ಕತಾ ನೈಟ್ ರೈಡರ್ಸ್(KKR), ರಾಜಸ್ಥಾನ್ ರಾಯಲ್ಸ್ (Rajasthan Royals) ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡಗಳು ಆಟಗಾರರ ರಿಟೈನ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದಿದೆ ಎಂದು ಮೂಲಗಳು ತಿಳಿಸಿವೆ. ಪಂಜಾಬ್ ಮತ್ತು ಹೈದರಾಬಾದ್ ತಂಡಗಳು ಯಾವ ಆಟಗಾರರನ್ನು ಉಳಿಸಿಕೊಳ್ಳಲಿವೆ ಎಂಬ ಕುತೂಹಲ ಹೆಚ್ಚಿದೆ. ನವೆಂಬರ್ 30ರೊಳಗೆ ಉಳಿಸಿಕೊಳ್ಳಲಿರುವ ಆಟಗಾರರ ಪಟ್ಟಿಯನ್ನು (ಹಳೆಯ 8) ತಂಡಗಳು ಬಿಸಿಸಿಐಗೆ ಸಲ್ಲಿಸಬೇಕಾಗಿದೆ.
ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ನಾಲ್ವರು ಆಟಗಾರರನ್ನು ರೀಟೈನ್ ಮಾಡಿಕೊಳ್ಳಲು ಮುಂದಾಗಿದೆ. ತನ್ನ ಯಶಸ್ವಿ ನಾಯಕ ಮಹೇಂದ್ರ ಸಿಂಗ್ ಧೋನಿ, ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ, ಮೋಯಿನ್ ಅಲಿ ಹಾಗೂ ಯುವ ಪ್ರತಿಭಾನ್ವಿತ ಬ್ಯಾಟರ್ ಋತುರಾಜ್ ಗಾಯಕ್ವಾಡ್ ಅವರನ್ನು ರೀಟೈನ್ ಮಾಡಿಕೊಳ್ಳಲಿದೆ ಎಂದು ವರದಿಯಾಗಿದೆ
27
ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ನಾಯಕ ರಿಷಭ್ ಪಂತ್, ಆಲ್ರೌಂಡರ್ ಅಕ್ಷರ್ ಪಟೇಲ್, ಆರಂಭಿಕ ಬ್ಯಾಟರ್ ಪೃಥ್ವಿ ಶಾ ಹಾಗೂ ವೇಗದ ಬೌಲರ್ ಏನ್ರಿಚ್ ನೊಕಿಯೆ ಅವರನ್ನು ರೀಟೈನ್ ಮಾಡಿಕೊಳ್ಳಲಿದೆ ಎನ್ನಲಾಗುತ್ತಿದೆ
37
ಮುಂಬೈನಲ್ಲೇ ಉಳಿಯಲಿದ್ದಾರೆ ರೋಹಿತ್, ಬುಮ್ರಾ ಸೇರಿದಂತೆ ನಾಲ್ವರು ಪ್ರಮುಖ ಆಟಗಾರರು. ತಂಡದ ಯಶಸ್ವಿ ನಾಯಕ ರೋಹಿತ್ ಶರ್ಮಾ, ವೇಗದ ಅಸ್ತ್ರ ಜಸ್ಪ್ರೀತ್ ಬುಮ್ರಾ, ವಿಕೆಟ್ ಕೀಪರ್ ಇಶಾನ್ ಕಿಶನ್ ಹಾಗೂ ಆಲ್ರೌಂಡರ್ ಕೀರನ್ ಪೊಲ್ಲಾರ್ಡ್ ಹಾರ್ದಿಕ್ ಪಾಂಡ್ಯರನ್ನು ರೀಟೈನ್ ಮಾಡಿಕೊಳ್ಳಲು ಒಲವು ತೋರಿದೆ.
47
ಕೆಕೆಆರ್ ತಂಡದಿಂದ ನಾಲ್ವರು ಆಟಗಾರರನ್ನು ರೀಟೈನ್ ಮಾಡಲು ಮುಂದಾಗಿದೆ ಎನ್ನಲಾಗಿದೆ. ಸ್ಟಾರ್ ಆಲ್ರೌಂಡರ್‌ಗಳಾದ ಸುನಿಲ್ ನರೈನ್, ಆಂಡ್ರೆ ರಸೆಲ್, ವೆಂಕಟೇಶ್ ಅಯ್ಯರ್ ಹಾಗೂ ಮಿಸ್ಟ್ರಿ ಸ್ಪಿನ್ನರ್ ವರುಣ್ ಚಕ್ರವರ್ತಿ ತನ್ನಲ್ಲೇ ಉಳಿಸಿಕೊಳ್ಳಲು ಕೆಕೆಆರ್ ಫ್ರಾಂಚೈಸಿ ಆಲೋಚಿಸಿದೆ.
57
ರಾಜಸ್ಥಾನ ರಾಯಲ್ಸ್ ಕೇವಲ ಇಬ್ಬರು ಆಟಗಾರರನ್ನು ರೀಟೈನ್ ಮಾಡಲು ಮುಂದಾಗಿದೆ. ತಂಡದ ನಾಯಕ ಸಂಜು ಸ್ಯಾಮ್ಸನ್ ಹಾಗೂ ವೇಗಿ ಜೋಫ್ರಾ ಆರ್ಚರ್ ಅವರನ್ನು ತನ್ನಲ್ಲೇ ಉಳಿಸಿಕೊಳ್ಳಲು ರಾಯಲ್ಸ್ ಒಲವು ತೋರಿದೆ ಎನ್ನಲಾಗುತ್ತಿದೆ
67
ಬೆಂಗಳೂರು ಮೂಲದ ಫ್ರಾಂಚೈಸಿಯಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮಾಜಿ ನಾಯಕ ವಿರಾಟ್ ಕೊಹ್ಲಿ ಹಾಗೂ ಆಸ್ಟ್ರೇಲಿಯಾದ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಅವರನ್ನು ಮಾತ್ರ ರೀಟೈನ್ ಮಾಡಲು ಒಲವು ತೋರಿದೆ ಎನ್ನಲಾಗುತ್ತಿದೆ.
77
ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್ ಹಾಗೂ ಯುಜುವೇಂದ್ರ ಚಹಲ್ ಅವರ ಪೈಕಿ ಇಬ್ಬರನ್ನು ರೀಟೈನ್ ಮಾಡಿಕೊಂಡರೇ ಆರ್‌ಸಿಬಿ ಒಟ್ಟು 4 ಆಟಗಾರರಿಂದ 42 ಕೋಟಿ ರುಪಾಯಿ ಖರ್ಚಾಗಲಿದೆ. ಹೀಗಾಗಿ ಹರಾಜಿನಲ್ಲಿ ತಮಗೆ ಬೇಕಾದ ಆಟಗಾರರ ಖರೀದಿಗೆ ಆರ್‌ಸಿಬಿ ಒಲವು ತೋರಿದೆ ಎನ್ನಲಾಗುತ್ತಿದೆ