IPL 2023: ಚೆನ್ನೈ ಎದುರು ಸೋಲಿನ ಬೆನ್ನಲ್ಲೇ ವಿರಾಟ್‌ ಕೊಹ್ಲಿಗೆ ಶಾಕ್ ನೀಡಿದ ಬಿಸಿಸಿಐ..!

Published : Apr 18, 2023, 03:48 PM IST

ಬೆಂಗಳೂರು(ಏ.18): ಐಪಿಎಲ್‌ನ ಬದ್ದ ಎದುರಾಳಿಗಳೆಂದೇ ಬಿಂಬಿತವಾಗಿರುವ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಗಳ ನಡುವಿನ ಹೈವೋಲ್ಟೇಜ್‌ ಪಂದ್ಯದಲ್ಲಿ ಎಂ ಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್‌ ಗೆಲುವಿನ ನಗೆ ಬೀರಿದೆ. ಇನ್ನು ಇದೆಲ್ಲದರ ನಡುವೆ ಆರ್‌ಸಿಬಿ ಮಾಜಿ ನಾಯಕ ವಿರಾಟ್‌ ಕೊಹ್ಲಿಗೆ ಬಿಸಿಸಿಐ ಶಾಕ್ ನೀಡಿದೆ. ಈ ಕುರಿತಾದ ಒಂದು ರಿಪೋರ್ಟ್‌ ಇಲ್ಲಿದೆ ನೋಡಿ.  

PREV
17
IPL 2023: ಚೆನ್ನೈ ಎದುರು ಸೋಲಿನ ಬೆನ್ನಲ್ಲೇ ವಿರಾಟ್‌ ಕೊಹ್ಲಿಗೆ ಶಾಕ್ ನೀಡಿದ ಬಿಸಿಸಿಐ..!

ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್‌ ತಂಡಗಳ ನಡುವಿನ ಹೈವೋಲ್ಟೇಜ್‌ ಪಂದ್ಯದಲ್ಲಿ ಧೋನಿ ನೇತೃತ್ವದ ಸಿಎಸ್‌ಕೆ ತಂಡವು 8 ರನ್ ರೋಚಕ ಜಯ ಸಾಧಿಸಿ ಬೀಗಿದೆ.

27

ಇಲ್ಲಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮೆಗಾ ಫೈಟ್‌ನಲ್ಲಿ ಮೊದಲು ಬ್ಯಾಟ್‌ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್‌ ತಂಡವು ನಿಗದಿತ 20 ಓವರ್‌ಗಳಲ್ಲಿ ಡೆವೊನ್‌ ಕಾನ್‌ವೇ(83) ಹಾಗೂ ಶಿವಂ ದುಬೆ(52) ಸ್ಪೋಟಕ ಅರ್ಧಶತಕದ ನೆರವಿನಿಂದ 6 ವಿಕೆಟ್ ಕಳೆದುಕೊಂಡು 226 ರನ್ ಕಲೆಹಾಕಿತು.

37

ಸವಾಲಿನ ಗುರಿ ಬೆನ್ನತ್ತಿದ ಆರ್‌ಸಿಬಿ ತಂಡವು ಮೊದಲ ಓವರ್‌ನಲ್ಲೇ ಮಾಜಿ ನಾಯಕ ವಿರಾಟ್ ಕೊಹ್ಲಿ ವಿಕೆಟ್ ಕಳೆದುಕೊಂಡಿತು. ಎರಡನೇ ಓವರ್‌ ಅಂತ್ಯದ ವೇಳೆಗೆ ಮಹಿಪಾಲ್ ಲೋಮ್ರಾರ್ ಕೂಡಾ ಪೆವಿಲಿಯನ್ ಸೇರಿದರು. ಆದರೆ ಮೂರನೇ ವಿಕೆಟ್‌ಗೆ ನಾಯಕ ಫಾಫ್ ಡು ಪ್ಲೆಸಿಸ್‌ ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್‌ ಶತಕದ ಜತೆಯಾಟವಾಡುವ ಮೂಲಕ ತಂಡಕ್ಕೆ ಗೆಲುವಿನ ಆಸೆ ಮೂಡಿಸಿದ್ದರು. ಆದರೆ ಈ ಇಬ್ಬರ ವಿಕೆಟ್ ಪತನವಾಗುತ್ತಿದ್ದಂತೆಯೇ ನಾಟಕೀಯ ಕುಸಿತ ಕಾಣುವ ಮೂಲಕ ಆರ್‌ಸಿಬಿ 8 ವಿಕೆಟ್ ಕಳೆದುಕೊಂಡು 218 ರನ್ ಗಳಿಸಲಷ್ಟೇ ಶಕ್ತವಾಯಿತು.

47

ಈ ಸೋಲಿನ ನಿರಾಸೆಯಲ್ಲಿರುವ ವಿರಾಟ್‌ ಕೊಹ್ಲಿಗೆ ಇದೀಗ ಮತ್ತೊಂದು ಶಾಕ್ ಎದುರಾಗಿದ್ದು, ಐಪಿಎಲ್‌ ನೀತಿ ಸಂಹಿತೆ ಉಲ್ಲಂಘಿಸಿದ ತಪ್ಪಿಗಾಗಿ ವಿರಾಟ್ ಕೊಹ್ಲಿಗೆ ಪಂದ್ಯದ ಸಂಭಾವನೆಯ 10% ದಂಡ ವಿಧಿಸಲಾಗಿದೆ.

57

ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ಎದುರಿನ ಪಂದ್ಯದ ವೇಳೆ ಆರ್‌ಸಿಬಿ ಬ್ಯಾಟರ್‌ ವಿರಾಟ್ ಕೊಹ್ಲಿ, ಐಪಿಎಲ್‌ ನೀತಿ ಸಂಹಿತಿ ಉಲ್ಲಂಘಿಸಿದ್ದಾಕ್ಕಾಗಿ ಅವರಿಗೆ ಪಂದ್ಯದ ಸಂಭಾವನೆಯ 10% ದಂಡ ವಿಧಿಸಲಾಗಿದೆ ಎಂದು ಐಪಿಎಲ್‌ ಮ್ಯಾನೇಜ್‌ಮೆಂಟ್‌ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

67

ಐಪಿಎಲ್‌ ನೀತಿ ಸಂಹಿತೆಯ ಆರ್ಟಿಕಲ್‌ 2.2ರ ಲೆವೆಲ್ 01ರ ತಪ್ಪನ್ನು ವಿರಾಟ್ ಕೊಹ್ಲಿ ಒಪ್ಪಿಕೊಂಡಿದ್ದಾರೆ. ಹೀಗಾಗಿ ಮ್ಯಾಚ್ ರೆಫ್ರಿ ಹೆಚ್ಚಿನ ವಿಚಾರಣೆ ನಡೆಸದೇ, ಕೊಹ್ಲಿಗೆ ಪಂದ್ಯದ ಸಂಭಾವನೆಯ 10% ದಂಡ ವಿಧಿಸಲಾಗಿದೆ ಎಂದು ತಿಳಿಸಿದೆ.

77

ವಿರಾಟ್ ಕೊಹ್ಲಿ ಯಾವಾಗ ಐಪಿಎಲ್‌ ನೀತಿ ಸಂಹಿತೆ ಉಲ್ಲಂಘಿಸಿದ್ದು ಎನ್ನುವುದನ್ನು ನಮೂದಿಸಿಲ್ಲವಾದರೂ, ಸಿಎಸ್‌ಕೆ ಬ್ಯಾಟರ್‌ ಶಿವಂ ದುಬೆ ಅವರ ವಿಕೆಟ್ ಪತನದ ಬಳಿಕ ವಿರಾಟ್ ಕೊಹ್ಲಿ ಅತಿಯಾಗಿ ಸಂಭ್ರಮಾಚರಣೆ ಮಾಡಿದ್ದರು. ಈ ಕಾರಣಕ್ಕಾಗಿಯೇ ಕೊಹ್ಲಿಗೆ ದಂಡ ವಿಧಿಸಿರಬಹುದು ಎನ್ನಲಾಗುತ್ತಿದೆ.
 

Read more Photos on
click me!

Recommended Stories