IPL 2024: ಕಪ್ ಗೆಲ್ಲಲು ಗಂಭೀರ್ ಮಾಸ್ಟರ್ ಪ್ಲಾನ್: ಕೊನೆ ಕ್ಷಣದಲ್ಲಿ ವಿಸ್ಪೋಟಕ ಬ್ಯಾಟರ್ KKR ಸೇರ್ಪಡೆ..!

First Published Mar 11, 2024, 2:45 PM IST

ಬೆಂಗಳೂರು: ಬಹುನಿರೀಕ್ಷಿತ 2024ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಹೀಗಿರುವಾಗಲೇ ಕೋಲ್ಕತ ನೈಟ್ ರೈಡರ್ಸ್‌ ತಂಡದಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಸ್ಪೋಟಕ ಬ್ಯಾಟರ್ ತಂಡ ಕೂಡಿಕೊಂಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 
 

17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಟೂರ್ನಿಯು ಮಾರ್ಚ್ 22ರಿಂದ ಆರಂಭವಾಗಲಿದ್ದು, ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಕಾದಾಡಲಿವೆ.

ಇದೀಗ ಎರಡು ಬಾರಿಯ ಚಾಂಪಿಯನ್ ಕೋಲ್ಕತ ನೈಟ್ ರೈಡರ್ಸ್ ತಂಡವು ಶತಾಯಗತಾಯ ಮೂರನೇ ಟ್ರೋಫಿ ಗೆಲ್ಲಲು ಸಕಲ ರಣತಂತ್ರ ಹೆಣೆಯುತ್ತಿದೆ.

ಇಂಗ್ಲೆಂಡ್ ತಂಡದ ಆರಂಭಿಕ ಬ್ಯಾಟರ್ ಜೇಸನ್ ರಾಯ್, ವೈಯುಕ್ತಿಕ ಕಾರಣ ನೀಡಿ 17ನೇ ಆವೃತ್ತಿಯ ಐಪಿಎಲ್ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ.  ಹೀಗಾಗಿ ಕೆಕೆಆರ್‌ ಮೆಂಟರ್ ಗೌತಮ್ ಗಂಭೀರ್ ಮಾಸ್ಟರ್ ಪ್ಲಾನ್ ಮಾಡಿ ಸ್ಪೋಟಕ ಬ್ಯಾಟರ್‌ನನ್ನು ತಂಡಕ್ಕೆ ಸೇರಿಸಿಕೊಂಡಿದೆ.

ಹೌದು, ಜೇಸನ್ ರಾಯ್ ಬದಲಿಗೆ ಇಂಗ್ಲೆಂಡ್‌ನ ಮತ್ತೋರ್ವ ಸ್ಪೋಟಕ ಬ್ಯಾಟರ್ ಫಿಲ್ ಸಾಲ್ಟ್ ಅವರನ್ನು ಕೋಲ್ಕತ ನೈಟ್ ರೈಡರ್ಸ್ ಫ್ರಾಂಚೈಸಿಯು ತನ್ನ ತೆಕ್ಕೆಗೆ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಫಿಲ್ ಸಾಲ್ಟ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಪ್ರತಿನಿಧಿಸಿದ್ದರು. ಆದರೆ ಕಳೆದ ಡಿಸೆಂಬರ್‌ನಲ್ಲಿ ನಡೆದ ಆಟಗಾರರ ಹರಾಜಿನಲ್ಲಿ ಫಿಲ್ ಸಾಲ್ಟ್ ಅನ್‌ಸೋಲ್ಡ್ ಆಗಿದ್ದರು.

ಐಪಿಎಲ್ ಆಟಗಾರ ಹರಾಜು ಮುಗಿದ ಬೆನ್ನಲ್ಲೇ ಇಂಗ್ಲೆಂಡ್ ಪರ ವೆಸ್ಟ್ ಇಂಡೀಸ್ ನಡೆದ  ಟಿ20 ಸರಣಿಯಲ್ಲಿ ಸತತ ಎರಡು ಶತಕ ಸಿಡಿಸಿ ಮಿಂಚಿದ್ದರು. ಫಿಲ್ ಸಾಲ್ಟ್ ಓರ್ವ ವಿಕೆಟ್ ಕೀಪರ್ ಬ್ಯಾಟರ್ ಆಗಿದ್ದಾರೆ.

ವೈಯುಕ್ತಿಕ ಕಾರಣದಿಂದಾಗಿ ಜೇಸನ್ ರಾಯ್ ಮುಂಬರುವ ಐಪಿಎಲ್ 2024 ಟೂರ್ನಿಯಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಅವರ ಬದಲಿಗೆ ಫಿಲ್ ಸಾಲ್ಟ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ ಎಂದು ಕೋಲ್ಕತಾ ನೈಟ್‌ ರೈಡರ್ಸ್ ತಿಳಿಸಿದೆ ಎಂದು ಐಪಿಎಲ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

click me!