ಐಪಿಎಲ್‌ನಲ್ಲಿ ಕ್ರಿಸ್ ಗೇಲ್‌ ಅಪರೂಪದ ದಾಖಲೆ ಮುರಿದ ಎಂ ಎಸ್ ಧೋನಿ..!

First Published | Apr 20, 2024, 6:48 PM IST

ಲಖನೌ: ಕ್ಯಾಪ್ಟನ್ ಕೂಲ್ ಖ್ಯಾತಿಯ ಚೆನ್ನೈ ಸೂಪರ್ ಕಿಂಗ್ಸ್ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ 17ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲೂ ಅಬ್ಬರಿಸುತ್ತಿದ್ದಾರೆ. ಇದೀಗ ಯೂನಿವರ್ಸೆಲ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್ ಹೆಸರಿನಲ್ಲಿರುವ ದಾಖಲೆಯನ್ನು ಧೋನಿ ಅಳಿಸಿ ಹಾಕಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಲಖನೌ ಸೂಪರ್ ಜೈಂಟ್ಸ್ ನಡುವಿನ ಪಂದ್ಯದಲ್ಲಿ ಕೆ ಎಲ್ ರಾಹುಲ್ ನೇತೃತ್ವದ ಲಖನೌ ಸೂಪರ್ ಜೈಂಟ್ಸ್ ತಂಡವು 8 ವಿಕೆಟ್ ಭರ್ಜರಿ ಗೆಲುವು ಸಾಧಿಸಿ ಗೆಲುವಿನ ಹಳಿಗೆ ಮರಳುವಲ್ಲಿ ಯಶಸ್ವಿಯಾಗಿದೆ.
 

ಇನ್ನು ಇದೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮಾಜಿ ನಾಯಕ ಎಂ ಎಸ್ ಧೋನಿ ಕೇವಲ 9 ಎಸೆತಗಳಲ್ಲಿ ಅಜೇಯ 28 ರನ್ ಬಾರಿಸಿ ಅಭಿಮಾನಿಗಳಿಗೆ ಭರಪೂರ ಮನರಂಜನೆ ನೀಡಿದರು.
 

Tap to resize

ಲಖನೌ ಸೂಪರ್ ಜೈಂಟ್ಸ್ ಎದುರು ಚೆನ್ನೈ ಸೂಪರ್ ಕಿಂಗ್ಸ್ ತಂಡವು ಸೋಲು ಅನುಭವಿಸಿದರೂ ಸಹ, 42 ವರ್ಷದ ಧೋನಿ ಆಡಿದ ಸ್ಪೋಟಕ ಇನಿಂಗ್ಸ್‌ ಈ ಪಂದ್ಯ ಹೈಲೈಟ್ ಎನಿಸಿಕೊಂಡಿತು

ಇನ್ನು ಈ ಇನಿಂಗ್ಸ್ ಮೂಲಕ ಮಹೇಂದ್ರ ಸಿಂಗ್ ಧೋನಿ 40 ವರ್ಷದ ಬಳಿಕ ಐಪಿಎಲ್‌ನಲ್ಲಿ 500 ರನ್ ಬಾರಿಸಿದ ಮೊದಲ ಬ್ಯಾಟರ್ ಎನ್ನುವ ಹಿರಿಮೆಗೆ ಪಾತ್ರರಾಗಿದ್ದಾರೆ.

ಈ ಮೂಲಕ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ದಾಖಲೆಯನ್ನು ಅಳಿಸಿ ಹಾಕುವಲ್ಲಿ ಧೋನಿ ಯಶಸ್ವಿಯಾಗಿದ್ದಾರೆ. ಈ ಮೊದಲು ಯೂನಿವರ್ಸಲ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್ 40 ವರ್ಷದ ಬಳಿಕ ಐಪಿಎಲ್‌ನಲ್ಲಿ 481 ರನ್ ಚಚ್ಚಿದ್ದರು.

ಇನ್ನು 40 ವರ್ಷಗಳ ಬಳಿಕ ಐಪಿಎಲ್‌ನಲ್ಲಿ ಅತಿಹೆಚ್ಚು ರನ್ ಬಾರಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ರಾಹುಲ್ ದ್ರಾವಿಡ್ ಮೂರನೇ ಸಾಲಿನಲ್ಲಿದ್ದಾರೆ. ದ್ರಾವಿಡ್ 471 ರನ್ ಬಾರಿಸುವ ಮೂಲಕ ಮೂರನೇ ಸಾಲಿನಲ್ಲಿದ್ದಾರೆ.

Latest Videos

click me!